Operation Sindoor: ಬೆಚ್ಚಗೆ ಮಲಗಿದ್ದ ಪಾಕಿಗಳ ಮೇಲೆ ಭಾರತ ದಾಳಿ: ಡಿ ಕೆ ಶಿವಕುಮಾರ್ ರಿಯಾಕ್ಷನ್
ನವದೆಹಲಿ, ಮೇ 07: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ ಮೂಲಕ ಸ್ವಾಗತಿಸಿದ ಡಿ ಕೆ ಶಿವಕುಮಾರ್ ಅವರು, ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಶನ್ ಸಿಂಧೂರ ಉತ್ತಮ ಪ್ರತ್ಯುತ್ತರವಾಗಿದೆ ಎಂದು ತಿಳಿಸಿದ್ದಾರೆ. ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಕರ್ನಾಟಕದ ಪ್ರಜೆಗಳು ಪೆಹಲ್ಗಮ್ ದಾಳಿಯಲ್ಲಿ ಮೃತಪಟ್ಟಿದ್ದರ ಬಗ್ಗೆ ಕೇಳಿದಾಗ, ನಮ್ಮ ರಾಜ್ಯ ಮಾತ್ರವಲ್ಲ, ದೇಶದ ಇತರೆ ಭಾಗಗಳ ಜನರು ಮೃತರಾಗಿದ್ದರು. ಈ ವಿಚಾರದಲ್ಲಿ ಕೇವಲ ಕರ್ನಾಟಕ ಎಂದು ನೋಡಬಾರದು, ಇಡೀ ದೇಶವೇ ಒಂದು ಎಂದು ನೋಡಬೇಕು. ನಾವೆಲ್ಲರೂ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕು, ಅದೇ ರೀತಿ ಒಟ್ಟಾಗಿ ನಿಂತಿದ್ದೇವೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದರು.
ಪಹಲ್ಗಾಮ್ ದಾಳಿಯಲ್ಲಿ ಮೃತರ ಕುಟುಂಬದವರು ಈ ಆಪರೇಷನ್ ನಿಂದ ನೆಮ್ಮದಿ ಪಡೆಯುವರೇ?, ವಿರೋಧ ಪಕ್ಷ ಕೂಡ ಸರ್ಕಾರದ ಬೆನ್ನಿಗೆ ನಿಂತಿದೆಯಲ್ಲವೇ ಎಂದು ಕೇಳಿದಾಗ, "ಹೌದು, ನಾವು ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ನಿಂತಿದ್ದೇವೆ. ಬೆಲೆ ಏರಿಕೆ ವಿಚಾರವಾಗಿ ಇಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಅದನ್ನು ನಾವು ರದ್ದುಗೊಳಿಸಿದ್ದೇವೆ. ಈ ಸಂದರ್ಭದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಹೀಗಾಗಿ ಈ ಪ್ರತಿಭಟನಾ ಸಮಾವೇಶವನ್ನು ಮುಂದೂಡಿದ್ದೇವೆ ಎಂದು ತಿಳಿಸಿದರು.
ಇನ್ನೂ ಈ ವೇಳೆ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಮಾತನಾಡಿ, ಏ.22 ರಂದು ಪಹಲ್ಗಾಮ್ ಉಗ್ರ ದಾಳಿಯಲ್ಲಿ ರಾಜ್ಯದ 3 ಜನ ನಾಗರಿಕರು ಒಟ್ಟು ದೇಶದ 26 ಮಂದಿಯನ್ನು ಕೊಂದ ನಂತರ ನಮ್ಮ ದೇಶದ ಸೈನಿಕರು ಉಗ್ರರ 9 ಅಡಗುತಾಣಗಳ ಮೇಲೆ ದಾಳಿ ಮಾಡಿ ನಾಶ ಪಡಿಸಿದ್ದಾರೆ. ಪಾಕಿಸ್ತಾನ ನಮ್ಮ ಶತ್ರು ದೇಶ. ದಾಳಿ ಮಾಡಿ ಬುದ್ಧಿ ಕಲಿಸುವ ಕೆಲಸ ಮಾಡಲಾಗಿದೆ. ಇದು ಸ್ವಾಗತಾರ್ಹ ವಿಚಾರ.
ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆಗೆ ಬುದ್ಧಿ ಕಲಿಸಲಾಗಿದೆ. ಕಾಂಗ್ರೆಸ್ ಪಕ್ಷ ಈ ದೇಶದ ರಕ್ಷಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ರೀತಿಯ ನಿರ್ಧಾರಗಳನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ. ಈ ನಿರ್ಧಾರವನ್ನು ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರು ಬೆಂಬಲಿಸಿದ್ದಾರೆ.
29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ಧನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು. ಇದರ ಮೌಲ್ಯ 884 ಕೋಟಿ ಎಂದು ನ್ಯಾಯಾಧೀಶರೇ ಹೇಳಿದ್ದಾರೆ. ಈಗ ಅವರಿಗೆ ಶಿಕ್ಷೆಯಾಗಿದೆ. ಇವರ ಜೊತೆಯಿದ್ದ ಬಿಜೆಪಿ ನಾಯಕರು, ಪ್ರಧಾನಿ ಮೋದಿ ಅವರು ಉತ್ತರಿಸಬೇಕು ಎಂದು ಆಗ್ರಹಿಸುತ್ತೇನೆ. ನನ್ನ ವರದಿಯಲ್ಲಿ ಒಂದು ಲಕ್ಷ ಕೋಟಿಗೂ ಹೆಚ್ಚು ಸಂಪತ್ತು ಲೂಟಿಯಾಗಿದೆ ಎಂದು ಹೇಳಿದ್ದೇನೆ.
ಅರಿಯರ್ಸ್ ಆಫ್ ಲ್ಯಾಂಡ್ ರೆವಿನ್ಯೂ ಎಂದು ಜನಾರ್ಧನ ರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಲೂಟಿಯನ್ನು ಪರಿಗಣಿಸಿ ಇದರ ಹಿಂದೆ ಇರುವ ಎಲ್ಲರ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸುತ್ತೇನೆ. ಇದರಿಂದ ಲಾಭ ಪಡೆದ ಅಂದಿನ ರಾಜ್ಯ ಸರ್ಕಾರ ಮುನ್ನಡೆಸುತ್ತಿದ್ದವರು, ಅಧಿಕಾರಿಗಳ ವಿರುದ್ದವು ಕ್ರಮ ತೆಗೆದುಕೊಳ್ಳಬೇಕು.
ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಸಿಬಿಐ ವಿಶೇಷ ನ್ಯಾಯಲಯ ಜನಾರ್ಧನ ರೆಡ್ಡಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ನೀಡಿರುವುದು ಇಡೀ ದೇಶಕ್ಕೆ ಹಾಗೂ ಭ್ರಷ್ಟರಿಗೆ ಸ್ಪಷ್ಟ ಸಂದೇಶ ನೀಡಿದಂತಾಗುತ್ತದೆ. ದುರಂಹಕಾರಿ ರಾಜಕಾರಣಿಗಳು ಒಂದಲ್ಲ ಒಂದು ರೀತಿಯಲ್ಲಿ ಶಿಕ್ಷೆ ಅನುಭವಿಸಲೇ ಬೇಕು ಎಂಬುದಕ್ಕೆ ತಕ್ಕ ಉದಾಹರಣೆ.
2000- 2006 ರಿಂದ ನಡೆದ ಅಕ್ರಮ ಗಣಿಗಾರಿಗೆ ನಡೆದಾಗ ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಅರಣ್ಯ ಸಚಿವರಾಗಿದ್ದ ಚೆನ್ನಿಗಪ್ಪ ಅವರು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಆ ಪತ್ರವನ್ನು ಇಟ್ಟುಕೊಂಡು ನಾನು ಸದನದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದೆ.
ಅಂದಿನ ಸರ್ಕಾರ ಜಸ್ಟೀಸ್ ಯು.ಎಲ್.ಭಟ್ ನೇತೃತ್ವದ ತನಿಖಾ ಆಯೋಗ ನೇಮಕ ಮಾಡಿತು. ಈ ಆಯೋಗವು ಸಿಬಿಐ ತನಿಖೆಗೆ ನೀಡಬೇಕು ಎಂದು ಶಿಫಾರಸ್ಸು ಮಾಡಿತು. ನಾವು ತನಿಖೆಗೆ ಒತ್ತಾಯ ಮಾಡಿದಾಗ ಲೋಕಾಯುಕ್ತ ತನಿಖೆಗೆ ನೀಡಲಾಯಿತು. ಈ ಹೋರಾಟದ ಹಿಂದೆ ಇರುವುದು ಕಾಂಗ್ರೆಸ್ ಪಕ್ಷ. ಕೆ.ಸಿ.ಕೊಂಡಯ್ಯ, ನಾನು ಈ ಹೋರಾಟದ ಹಿಂದೆ ಇದ್ದೆವು.
ಆಂದ್ರ ಪ್ರದೇಶದ ಮಲ್ಪನಗುಡಿ, ಕರ್ನಾಟಕದ ತುಮಟಿ, ವಿಠಲಾಪುರ ಮಧ್ಯದ ಸುಮಾರು 32 ಕಿಮೀ ಭೂಭಾಗದಲ್ಲಿರುವ ಉತೃಷ್ಟವಾದ 29 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಜನಾರ್ಧನ ರೆಡ್ಡಿ ಮತ್ತು ತಂಡ ಅಕ್ರಮವಾಗಿ ವಿದೇಶಕ್ಕೆ ರಫ್ತು ಮಾಡಿತ್ತು.
ಅಕ್ರಮ ಗಣಿಗಾರಿಕೆ ಬಗ್ಗೆ ಅತ್ಯಂತ ನಿಖರವಾದ ವರದಿಯನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ನನ್ನ ನೇತೃತ್ವದ ಸತ್ಯಶೋದನಾ ಸಮಿತಿ 16.11.2008 ರಲ್ಲಿ ಇದನ್ನು ಬಿಡುಗಡೆಗೊಳಿಸಿತ್ತು. ಲೋಕಾಯುಕ್ತದವರು ನನ್ನ ವರದಿಯನ್ನು ಇಟ್ಟುಕೊಂಡು ಪ್ರಾಥಮಿಕ ವರದಿ ನಿಡುತ್ತಾರೆ. ಕಾಂಗ್ರೆಸ್ ಪಕ್ಷ ರಿಪಬ್ಲಿಕ್ ಬಳ್ಳಾರಿಯ ವಿರುದ್ದ ಪಾದಯಾತ್ರೆ ನಡೆಸಿ ದೊಡ್ಡ ಹೋರಾಟ ಮಾಡಿತ್ತು.
ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ವಿಚಾರವಾಗಿ ಮಾತನಾಡುವಾಗ ಅಕ್ರಮ ನಡೆದಿಲ್ಲ ಎಂದು ಹೇಳುತ್ತಿದ್ದರು. ಈ ಅಕ್ರಮ ಗಣಿಗಾರಿಕೆ ಹಿಂದೆ ಇದ್ದಿದ್ದೆ ಅಂದಿನ ರಾಜ್ಯ ಸರ್ಕಾರ. ಅಂದು ಶ್ರೀರಾಮುಲು ಅವರು ಅರಣ್ಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರ ಬಗ್ಗೆ ದೂರು ದಾಖಲಾಗಿತ್ತು. ಅಂದು ಅಧಿಕಾರದಲ್ಲಿ ಇದ್ದುಕೊಂಡೆ ಅನ್ಯಾಯ ಎಸಗಿದವರಿಗೆ ಇಂದು ತಕ್ಕ ಶಿಕ್ಷೆಯಾಗಿದೆ.
ನಾನು ತಯಾರು ಮಾಡಿದ ಸತ್ಯಶೋಧನಾ ವರದಿಯಲ್ಲಿ ಜರ್ನಾರ್ಧನ ರೆಡ್ಡಿ ಮತ್ತು ತಂಡದ ಸಂಪೂರ್ಣ ಅಕ್ರಮ, ಅನ್ಯಾಯಗಳನ್ನು ಎಳೆ, ಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಬ್ರಿಟೀಷರ ಕಾಲದಲ್ಲಿ ಇದ್ದಂತಹ ಗಡಿ ಗುರುತು ಕಲ್ಲುಗಳನ್ನು ಸಹ ಇವರು ಸ್ಪೋಟಿಸಿದ್ದರು.
ಐಎನ್ ಸಿ ಕರ್ನಾಟಕವು ಮಹಾತ್ಮ ಗಾಂಧಿ ಅವರ ಶಾಂತಿ ಸಂದೇಶ ಸಾರುವ ನುಡಿಮುತ್ತನ್ನು ಹಾಕಿರುವ ಬಗ್ಗೆ ಕೇಳಿದಾಗ, "ಇದು ಉದ್ದೇಶಪೂರ್ವಕವಲ್ಲ. ಕಳೆದ ಆರು ತಿಂಗಳಿನಿಂದ ಬೆಳಗಾವಿ ಅಧಿವೇಶನದ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪ್ರತಿದಿನ ಒಂದೊಂದು ಹೇಳಿಕೆಗಳನ್ನು ಹಾಕುವುದು ರೂಡಿ. ಈ ಹಿನ್ನೆಲೆಯಲ್ಲಿ ಇದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ." ಎಂದರು.
ಸಿದ್ದರಾಮಯ್ಯ ಅವರ ಯುದ್ಧ ಬೇಡ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, "ಈ ಬಗ್ಗೆ ಹೀಗಾಗಲೇ ಅವರು ಸ್ಪಷ್ಟನೆ ನೀಡಿದ್ದಾರೆ. ಸರ್ವಪಕ್ಷಗಳ ಸಭೆ ಕರೆದಾಗ ಯಾವುದೇ ಷರತ್ತುಗಳು ಇಲ್ಲದೇ ವಿರೋಧ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶ ರಕ್ಷಣೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲಾ ತೀರ್ಮಾನಗಳಿಗೆ ಕಾಂಗ್ರೆಸ್ ಬದ್ಧವಾಗಿದೆ. ದೇಶ ಮುಖ್ಯ, ನಂತರ ರಾಜಕೀಯ ವಿಚಾರಗಳು. ಇಂದಿರಾಗಾಂಧಿ ಅವರು, ರಾಜೀವ್ ಗಾಂಧಿ ಅವರ ಬಲಿದಾನ ಈ ದೇಶಕ್ಕಾಗಿ ನಡೆದಿದೆ ಎಂದರು.












Click it and Unblock the Notifications