ಕೊಪ್ಪಳದ ಹಿಂದುಳಿದ ವರ್ಗಕ್ಕೆ ವಿದೇಶಿ ವ್ಯಾಸಂಗ ವೇತನ
ಕೊಪ್ಪಳ, ಜು. 26 : ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೊತ್ತರ ಪದವಿ/ ಪಿ.ಎಚ್.ಡಿ/ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ "ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ" ಒದಗಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗಳಿಗೆ ಸೇರಿರಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ನೋಡಬಹುದು.

ಮಾಹಿತಿಯನ್ನು ಪಡೆಯಲು ದೂರವಾಣಿ ಸಂಖ್ಯೆ 080-65970004ಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧನಶ್ರೀ ಯೋಜನೆ : ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಧನಶ್ರೀ ಯೋಜನೆಯಡಿ ಎಚ್.ಐ.ವಿ ಸೋಂಕಿತ ಮತ್ತು ಬಾಧಿತ ಮಹಿಳೆಯರಿಗೆ ತಲಾ ಫಲಾನುಭವಿಗೆ ರೂ. 40,000ಗಳ ನೇರ ಸಾಲ ಹಾಗೂ ರೂ. 10,000ಗಳ ಸಹಾಯಧನ ಸಿಗಲಿದೆ.











Click it and Unblock the Notifications