ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ ರಾಹುಲ್‌ ಗಾಂಧಿ: ಆರ್.ಅಶೋಕ್‌

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದು, ಅದ್ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ ರಾಹುಲ್‌ ಗಾಂಧಿ ಅವರೇ? ಎಂದು ಪ್ರಶ್ನಿಸಿದ್ದಾರೆ.

"ಕೈ"ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ವ್ಯಂಗ್ಯವಾಡಿದ್ದಾರೆ.

Opposition Leader Ashoka Questions Rahul Gandhi With What Face Are You Coming To Karnataka

ಮಿಸ್ಟರ್‌ ರಾಹುಲ್‌ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಕಳೆದ 24 ತಿಂಗಳಲ್ಲಿ 2,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ ಎಂದು ಟೀಕಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ, ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ ಜಾಮೀನು ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದು ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ ಎಂದು ಗೇಲಿ ಮಾಡಿದ್ದಾರೆ.

Opposition Leader Ashoka Questions Rahul Gandhi With What Face Are You Coming To Karnataka

ರಾಹುಲ್‌ ಆರೋಪವೇನು?

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿರುವ ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಆಗಸ್ಟ್ 4ರಂದು ಬೆಂಗಳೂರಿನಲ್ಲಿನ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸುವ ನಿರ್ಧಾರ ಮಾಡಿದ್ದಾರೆ. ಮತದಾರರ ಪಟ್ಟಿ ವ್ಯವಸ್ಥಿತವಾಗಿ ಮಾರ್ಪಾಡಾಗಿದೆ ಎಂಬುದು ಸಾಬೀತಾಗಿದ್ದು, ಈ ಸಂಬಂಧ ಕಾಂಗ್ರೆಸ್‌ ಪಾದಯಾತ್ರೆ ಮೂಲಕ ದೂರು ನೀಡಲು ಮುಂದಾಗಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜನೆ ಮಾಡಿದ್ದಾರೆ. ಹಿರಿಯ ನಾಯಕರೂ, ಪಕ್ಷದ ಕಾರ್ಯಕರ್ತರೂ ಭಾಗವಹಿಸಲಿದ್ದಾರೆ. ಮೆರವಣಿಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಸಾಗಲಿದೆ. ಅಲ್ಲಿ ಗಾಂಧಿ ಅಧಿಕೃತ ದೂರು ಸಲ್ಲಿಸಲಿದ್ದಾರೆ. ಈ ಮಧ್ಯೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಚುನಾವಣೆಗಿಂತ ಮುಂಚಿತವಾಗಿ ಆಯೋಜಿಸಲಾದ ಮತದಾರರ ಪಟ್ಟಿಗಳ ಅಪ್‌ಡೇಟ್‌ ಪ್ರಕ್ರಿಯೆ ಪಾರದರ್ಶಕವಾಗಿತ್ತು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+