'ಕೆಟ್ಟ ಮೇಲಾದರೂ ಸಿಎಂಗೆ ಬುದ್ಧಿ ಬಂತಲ್ಲ, ಕನ್ನಡಿಗರು ತಲೆ ತಗ್ಗಿಸುವ ಹೇಳಿಕೆ ಕೊಡಬೇಡಿ'

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು ಎನ್ನಲಾದ ಹೇಳಿಕೆಯು ಭಾರಿ ವಿವಾದ ಸೃಷ್ಟಿಸಿತ್ತು. ಬಳಿಕ ನಾನು ಆ ರೀತಿ ಹೇಳಲಿಲ್ಲ ಎಂದು ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಲೇವಡಿ ಮಾಡಿದ್ದು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯನವರೇ ಎಂದು ಟಾಂಗ್‌ ನೀಡಿದ್ದರೆ. ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು. ಕೆಟ್ಟ ಮೇಲಾದರೂ ತಮಗೆ ಬುದ್ಧಿ ಬಂತಲ್ಲ ಎನ್ನುವ ಸಮಾಧಾನ ಒಂದು ಕಡೆಯಾದರೆ, ಓಲೈಕೆ ರಾಜಕಾರಣಕಾಗಿ ರಾಷ್ಟ್ರೀಯ ಭದ್ರತೆ ವಿಷಯದಲ್ಲೂ ರಾಜಿ ಮಾಡಿಕೊಳ್ಳಲು ಹೇಸುವುದಿಲ್ಲವಲ್ಲ ಎಂಬ ಆತಂಕ ಮತ್ತೊಂದು ಕಡೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಬಾಲಿಶ ಹೇಳಿಕೆ ಶತ್ರು ರಾಷ್ಟ್ರದ ಷಡ್ಯಂತ್ರ, ಕುತಂತ್ರಕ್ಕೆ ಆಹಾರವಾಯಿತು. ತಮ್ಮ ಬೇಜವಾಬ್ದಾರಿ ಹೇಳಿಕೆ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟುಮಾಡಿತು ಎಂಬ ವಾಸ್ತವದ ಅರಿವು ತಮಗಾಗಿದೆ ಎಂದು ಭಾವಿಸುತ್ತೇನೆ. ಇನ್ನು ಮುಂದಾದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿರಿ. ತಮ್ಮ ಸ್ಥಾನಕ್ಕೆ ತಕ್ಕಂತಹ ಗಾಂಭೀರ್ಯತೆ, ಸಮಯ ಪ್ರಜ್ಞೆ, ಮುತ್ಸದ್ದಿತನ ರೂಢಿಸಿಕೊಳ್ಳಿರಿ. ಇನ್ನು ಮುಂದಾದರೂ ತಮ್ಮ ಹೇಳಿಕೆಗಳಿಂದ ಕನ್ನಡಿಗರು ತಲೆ ತಗ್ಗಿಸುವಂತಹ ಸನ್ನಿವೇಶ ನಿರ್ಮಾಣವಾಗದಂತೆ ವರ್ತಿಸಬೇಕು ಎಂದು ಅಶೋಕ್‌ ಸಲಹೆ ನೀಡಿದ್ದಾರೆ.

Opposition Leader Ashoka Slams Siddaramaiah Better Sense Prevails After Backlash

ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯ ಎಂದು ಅಶೋಕ್‌ ಕರೆದಿದ್ದರು. ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ ಎಂದು ವ್ಯಂಗ್ಯವಾಡಿದ್ದರು.

ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಾಲೆಳೆದಿದ್ದರು. ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರು ರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ? ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದರು.

Opposition Leader Ashoka Slams Siddaramaiah Better Sense Prevails After Backlash

ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಏನು?

ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿದೆ. ನಾನು ಆ ರೀತಿ ಹೇಳಿಲ್ಲ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆ ಹೊರತು, ಯುದ್ಧವೇ ಮೊದಲ, ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ, ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರದ ಮೇಲಿದೆ ಎಂದಿದ್ದಾರೆ.

Take a Poll

ಸಿಂಧೂ ನದಿ ಒಪ್ಪಂದದ ರದ್ದತಿ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣವಾದ ಕ್ರಮ ಕೈಗೊಳ್ಳಲಿದೆ ಎನ್ನುವ ಭರವಸೆ ಇದೆ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತವು ಎಚ್ಚರಿಕೆಯ ಹೆಜ್ಜೆ ಇಡಬೇಕು. ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ, ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯೊಂದಿಗೆ ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+