ರಾಜ್ಯ ಸರ್ಕಾರದಿಂದ ನಡೆದಿದ್ಯಾ ದೊಡ್ಡ ಎಡವಟ್ಟು? ಅಶೋಕ್‌ ಮಾಡಿದ್ರು ಗಂಭೀರ ಆರೋಪ

ವಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ ಐದು ಮಂದಿ ಬಾಣಂತಿಯರ ಸಾವಾಗಿದ್ದು, ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಸುಮ್ಮನಿದ್ದಾರೆ ಎಂದು ಅಶೋಕ್‌ ದೂರಿದ್ದಾರೆ.

ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಬಾಣಂತಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕರ್ನಾಟಕ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

Opposition Leader R Ashok Has Made Serious Allegations Against Karnataka Congress Government

ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ರಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷಧಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ. ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಾಗಲಿ, ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಈವರೆಗೆ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ ಎಂದು ಅಶೋಕ್‌ ತಾಕೀತು ಮಾಡಿದ್ದಾರೆ.

Opposition Leader R Ashok Has Made Serious Allegations Against Karnataka Congress Government

ಬಿಜೆಪಿ ಕಿಡಿ: ಇನ್ನು ಈ ಘಟನೆ ಬಗ್ಗೆ ರಾಜ್ಯ ಬಿಜೆಪಿ ಕೂಡ ಕಿಡಿಕಾರಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರ ನಿರ್ಲಕ್ಷ್ಯ, ಉದಾಸೀನತೆಯಲ್ಲಿ ಮೈಮರೆತ ಪರಿಣಾಮ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ! ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್‌ನಲ್ಲಿ ಐವರು ಬಾಣಂತಿಯರ ಸಾವು, ದಾವಣಗೆರೆಯಲ್ಲಿ ಹಸುಗೂಸುಗಳ ಸರಣಿ ಸಾವು, ಬೆಳಗಾವಿ, ಬೆಂಗಳೂರಿನ ಆಸ್ಪತ್ರೆಯಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ಕಟುಕ ಕಾಂಗ್ರೆಸ್‌ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಹರಿಹಾಯ್ದಿದೆ.

ಬೆಂಕಿ ಬಿದ್ದಾಗ ಶೌರ್ಯ ಪ್ರದರ್ಶಿಸುವ ಸಿದ್ದರಾಮಯ್ಯನವರೇ, ಘಟನೆ ಸಂಬಂಧ ಕೇವಲ ವರದಿ ಪಡೆದರೆ ಸಾಲದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರು ಕಳುಹಿಸದಂತೆ ಕ್ರಮ ವಹಿಸಿ, ಸರ್ಕಾರಿ ಆಸ್ಪತ್ರೆಗಳಿಗೆ ಅತ್ಯಾಧುನಿಕ ಸೌಲಭ್ಯ ಒದಗಿಸಿ, ಅಮಾಯಕರ ಪ್ರಾಣ ಉಳಿಸಿ ಜೊತೆಗೆ ತಮಗೂ, ಇಲಾಖೆಗೂ ಸಂಬಂಧವಿಲ್ಲದಂತಿರುವ ಆರೋಗ್ಯ ಸಚಿವರಿಗೆ ಜವಾಬ್ದಾರಿ, ಕರ್ತವ್ಯದ ಪಾಠ ಮಾಡಿ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+