ಕಾಂಗ್ರೆಸ್‌ನವರ ಬಗ್ಗೆ 'ಅಲಿಬಾಬಾ ಮತ್ತು 135 ಕಳ್ಳರು' ವೆಬ್ ಸೀರೀಸ್, ಏನಿದು ಹೊಸ ವಿಚಾರ?

ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗರ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್‌ ನಾಯಕರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ಹಾಸ್ಯ ಮಾಡಿದ್ದಾರೆ. ಈ ಕಾಂಗ್ರೆಸ್‌ ನಾಯಕರ ಮೇಲೆ ʼಅಲಿಬಾಬಾ ಮತ್ತು 135 ಕಳ್ಳರುʼ ಎಂಬ ಸಿನಿಮಾ ಅಥವಾ ವೆಬ್ ಸೀರೀಸ್ ತೆಗೆಯಬಹುದು ಎಂದು ವ್ಯಂಗ್ಯ ಮಾಡಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಶಾಸಕ ಜೈಲು ಪಾಲು, ವಾಲ್ಮೀಕಿ ಅಭಿವೃದ್ಧಿ ನಿಗಮದ A1 ಆರೋಪಿ ಮಾಜಿ ಸಚಿವ ನಾಗೇಂದ್ರ ಅವರ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಜೈಲು ಪಾಲಾಗುವ ಸರದಿ ಬಂದಿದ್ದು, ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗರ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ ಎಂದು ಅಶೋಕ್‌ ಕುಟುಕಿದ್ದಾರೆ.

Opposition Leader R Ashok Said That A Movie Should Be Made On Congress Leaders

ಈ ಕಡು ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಇಡೀ ಸಚಿವ ಸಂಪುಟ ಮತ್ತು ಶಾಸಕರು ಮಾಡಿರುವ ಸರಣಿ ಹಗರಣಗಳ ಮೇಲೆ ಅಲಿಬಾಬಾ ಮತ್ತು 135 ಕಳ್ಳರು ಎಂದು ಸಿನಿಮಾ ಅಥವಾ ವೆಬ್ ಸೀರೀಸ್ ತೆಗೆಯಬಹುದು ಎಂದು ಹೇಳಿದ್ದಾರೆ.

ಉಪಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಕಾಂಗ್ರೆಸ್‌ನ ಶಾಸಕ ಸತೀಶ್‌ ಸೈಲ್‌ ಅವರನ್ನು ನಿನ್ನೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ರಾಜ್ಯದಲ್ಲಿ ಉಪ ಚುನಾವಣೆ ಸಮೀಪಿಸುತ್ತಿರುವಾಗಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

Opposition Leader R Ashok Said That A Movie Should Be Made On Congress Leaders

ಕರ್ನಾಟಕದಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾರವಾರದ ಶಾಸಕ ಸತೀಶ್ ಸೈಲ್ ಅವರೇ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಈ ಸಂಬಂಧ ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್‌ ಸೂಚಿಸಿತ್ತು. ಅದರಂತೆ ನಿನ್ನೆ ಸತೀಶ್‌ ಅವರನ್ನು ಸಿಬಿಐ ಬಂಧಿಸಿ, ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿತು.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಹಾಗೂ ಇತರರನ್ನು ಬಂಧಿಸಲಾಗಿದೆ. ಇದು ಸುಮಾರು 14 ವರ್ಷಗಳ ಹಿಂದಿನ ಪ್ರಕರಣವಾಗಿದ್ದು, ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಪ್ರಕರಣಗಳಲ್ಲಿ ಇದು ಕೂಡ ಒಂದು.

ಉತ್ತರ ಕನ್ನಡದ ಬೇಲೆಕೇರಿ ಎನ್ನುವ ಬಂದರಿನಿಂದ ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ರಫ್ತು ಕುರಿತ ಪ್ರಕರಣ ಇದಾದಗಿದೆ. ಈ ಕೇಸ್‌ ಸಂಬಂಧ ನಿನ್ನೆಯಷ್ಟೇ ಶಾಸಕ ಸತೀಶ್ ಸೈಲ್ ವಶಕ್ಕೆ ಪಡೆಯುವಂತೆ ಕೋರ್ಟ್‌ ಸೂಚಿಸಿತ್ತು. ಕೇಂದ್ರೀಯ ತನಿಖಾ ದಳ (ಸಿಬಿಐ) ನಿನ್ನೆಯೇ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಮೂವರನ್ನು ಬಂಧಿಸಿದೆ.

ಕಾಂಗ್ರೆಸ್‌ ಶಾಸಕ ಸತೀಶ್‌ ಅವರನ್ನು ನಿನ್ನೆ ರಾತ್ರಿ ಬಂಧಿಸಿ ಬೆಂಗಳೂರಿನ ಬೌರಿಂಗ್‌ ಹಾಗೂ ಲೇಡಿ ಸರ್ಜನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್‌ ಮಾಡಲಾಯಿತು. ಬೆಲೇಕೆರಿ ಅದಿರು ನಾಪತ್ತೆ ಕೇಸ್‌ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಹೇಳಲಾಗಿದೆ. ಹಾಗಾಗಿ ಇಂದು 25ರಂದು ಅವರಿಗೆ ಶಿಕ್ಷೆಯ ಕುರಿತು ತೀರ್ಪು ಪ್ರಕಟವಾಗಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲ ಅಪರಾಧಿಗಳಿಗೂ ಯಾವ ಶಿಕ್ಷೆ ಎಂಬುದು ಇಂದು ಹೊರಬೀಳಲಿದೆ. ಇಂದು ನ್ಯಾಯಾಧೀಶರ ಮುಂದೆ ಶಾಸಕ ಸತೀಶ್‌ ಸೈಲ್‌ ಹಾಜರುಪಡಿಸಲು ಸಿಬಿಐ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+