• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಚ್ಚರಿ ಮೂಡಿಸಿದ ಯಡಿಯೂರಪ್ಪ ಕುರಿತು ಬೆಳಗಾವಿಯಲ್ಲಿ ಸಿದ್ದರಾಮಯ್ಯ ಹೇಳಿಕೆ!

|
Google Oneindia Kannada News

ಬೆಂಗಳೂರು, ಜು. 27: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಹೈಕಮಾಂಡ್ ಕೆಳಿಗಿಳಿಸಿದ ಬಳಿಕ ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳು ಕುತೂಹಲ ಮೂಡಿಸುತ್ತಿವೆ. ಜೊತೆಗೆ ಭವಿಷ್ಯದಲ್ಲಿ ಕರ್ನಾಟಕದಲ್ಲಿ ಹೊಸ ರಾಜಕೀಯ ಸಮೀಕರಣಕ್ಕೆ ಯಡಿಯೂರಪ್ಪ ರಾಜೀನಾಮೆ ನಾಂದಿಯಾಗುವ ಸಾಧ್ಯತೆಗಳು ಕಂಡು ಬರುತ್ತಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿಯೇ ಬಿಜೆಪಿ ಹೈಕಮಾಂಡ್ ಕೂಡ ತುರ್ತಾಗಿ ಹೊಸ ಮುಖ್ಯಮಂತ್ರಿ ನೇಮಕಕ್ಕೆ ಮುಂದಾಗಿದೆ.

ಇದೇ ಸಂದರ್ಭದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಹಂಗಾಮಿ ಸಿಎಂ ಯಡಿಯೂರಪ್ಪ ಕುರಿತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಿನ್ನೆ-ಮೊನ್ನೆ ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರಿ ಎಂದು ಟೀಕಿಸಿದ್ದ ಸಿದ್ದರಾಮಯ್ಯ ಅವರು ಇಂದು ಮೃಧು ಧೋರಣೆ ತಾಳಿರುವುದು ಕುತೂಹಲ ಮೂಡಿಸಿದೆ. ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಬಳಿಕ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ಮತ್ತೊಂದೆಡೆ ಇಂದು ಸಂಜೆಯೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮಾಡಿ ಮುಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಪಕ್ಷದ ವೀಕ್ಷಕರು, ಉಸ್ತುವಾರಿಗಳು ಬೆಂಗಳೂರಿಗೆ ಬಂದಿಳಿದಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಮೃಧು ಧೋರಣೆ!

ಸಿದ್ದರಾಮಯ್ಯ ಮೃಧು ಧೋರಣೆ!

"ಯಡಿಯೂರಪ್ಪ ಅವರ ರಾಜೀನಾಮೆ ಪಡೆಯಲೇಬೇಕು ಎಂದು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದ ಮೇಲೆ ಇನ್ನು ಸ್ವಲ್ಪ ದಿನಗಳ ಬಳಿಕ ರಾಜೀನಾಮೆ ಪಡೆಯಬಹುದಿತ್ತು. ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಎದುರಾಗಿದೆ, ಇಂಥ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಮಂತ್ರಿ ಮಂಡಲವೇ ಇಲ್ಲದ ಮೇಲೆ ಜನರ ಕಷ್ಟಗಳನ್ನು ಕೇಳೋರು ಯಾರು? ಬಿಜೆಪಿ ಯವರಿಗೆ ಜನರ ಜೀವಕ್ಕಿಂತ ಅಧಿಕಾರ ಹಸ್ತಾಂತರ ಮುಖ್ಯವಾಯಿತೇ? ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಮಾತನ್ನು ಆಡಿದ್ದಾರೆ.

"ಯಡಿಯೂರಪ್ಪ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿ ಆದವರು. ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆಯಾಡಿಸಬೇಕಷ್ಟೆ. ಅವರು ಯಾರನ್ನು ಬೇಕಾದರೂ ಅಧಿಕಾರದಿಂದ ಕಿತ್ತು ಹಾಕಬಹುದು, ಇಷ್ಟ ಬಂದವರನ್ನು ಕುರ್ಚಿಯಲ್ಲಿ ಕೂರಿಸಬಹುದು. ರಾಷ್ಟ್ರೀಯ ಪಕ್ಷ ಅಂದಮೇಲೆ ಹೈಕಮಾಂಡ್ ಇರುವುದು ಸಹಜ, ಆದರೆ ರಾಜ್ಯದ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ' ಎಂದು ಪ್ರವಾಹದ ನೆಪದಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಪರವಾಗಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ನಮಗೇನೂ ಲಾಭವಿಲ್ಲ!

ನಮಗೇನೂ ಲಾಭವಿಲ್ಲ!

"ಸಿದ್ದರಾಮಯ್ಯರಂತಹ ನೂರು ಜನ ಬಂದರೂ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಅವರು ಅಹಂಕಾರದ ಮಾತನಾಡಿದ್ದಾರೆ, ಆದರೆ ರಾಜ್ಯದಲ್ಲಿ ಈ ವರೆಗೆ ಒಮ್ಮೆಯಾದರೂ ಬಿಜೆಪಿ ಪಕ್ಷ ಸರಳ ಬಹುಮತ ಪಡೆದು ಸರ್ಕಾರ ರಚಿಸಿದೆಯೇ? ಆಪರೇಷನ್ ಕಮಲದ ಮೂಲಕ ಸರ್ಕಾರ ಮಾಡಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಇದ್ದರೂ, ಇಲ್ಲದಿದ್ದರೂ ನಮಗೇನು ಲಾಭವಿಲ್ಲ. ಕಾರಣ ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ಈ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ದಿನಗಳಲ್ಲಿ ಲಾಭದಾಯಕವಾಗಲಿದೆ" ಎಂದು ಯಡಿಯೂರಪ್ಪ ಬದಲಾವಣೆಯಿಂದ ಆಗಬಹುದಾದ ರಾಜಕೀಯ ಬೆಳವಣಿಗೆಯ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಬಿಜೆಪಿಯವರು ಹೇಳುವುದೆಲ್ಲ ಸುಳ್ಳು!

ಬಿಜೆಪಿಯವರು ಹೇಳುವುದೆಲ್ಲ ಸುಳ್ಳು!

"ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಿಲ್ಲ, ಈ ಬಾರಿಯೂ ಪ್ರವಾಹ ಬಂದಿದೆ. ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟ ಆಲಿಸಲು ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಹೀಗಾದರೆ ಜನರ ಪಾಡೇನು? ಪರಿಹಾರ ಕೊಟ್ಟಿದ್ದೇವೆ ಎಂದು ಬಿಜೆಪಿಯವರು ಹೇಳ್ತಾರೆ ಅದೆಲ್ಲ ಬರೀ ಸುಳ್ಳು. ಅರ್ಧದಷ್ಟು ಜನರಿಗೆ ಎರಡು ವರ್ಷ ಕಳೆದರೂ ಪರಿಹಾರ ಸಿಕ್ಕಿಲ್ಲ. ಈಗ ಕೊಟ್ಟಿಲ್ಲ ಅಂದರೆ ಇನ್ಯಾವಾಗ ಅವರಿಗೆ ಪರಿಹಾರದ ಹಣ ಕೊಡೋದು?" ಎಂದು ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

ಜೊತೆಗೆ, "ಅವಿಭಕ್ತ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಿದ ರೀತಿ ಅವೈಜ್ಞಾನಿಕವಾಗಿದೆ. ಕೆಲವು ಮನೆಗಳಲ್ಲಿ ಮೂರು - ನಾಲ್ಕು ಕುಟುಂಬಗಳು ವಾಸವಿರುತ್ತವೆ. ಅಂಥ ಮನೆಗಳು ಪ್ರವಾಹದಿಂದ ಬಿದ್ದುಹೋದರೆ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಮನೆ ಕಟ್ಟಿಸಿಕೊಡಯವಂತೆ ನಾನು ಈ ಹಿಂದೆಯೇ ಸರ್ಕಾರಕ್ಕೆ ಮನವಿ ಮಾಡಿದ್ದೆ. ಆದರೆ ಸರ್ಕಾರ ಅಂಥಾ ಕುಟುಂಬಕ್ಕೆ ಕೇವಲ ಒಂದು ಮನೆ ಕಟ್ಟಿಸಿಕೊಟ್ಟು ಕೈತೊಳೆದುಕೊಂಡಿದೆ. ಹೀಗಾದರೆ ಕುಟುಂಬದ ಉಳಿದವರು ಎಲ್ಲಿ ಹೋಗಬೇಕು?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿದ್ದರಾಮಯ್ಯ!

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿದ್ದರಾಮಯ್ಯ!

"ಮಲಪ್ರಭಾ ನದಿ ನೀರು ಊರೊಳಗೆ ನುಗ್ಗಿದ ಪರಿಣಾಮ ಬೆಳಗಾವಿ ಜಿಲ್ಲೆಯ ದುರ್ಗಾನಗರ ಮತ್ತು ಮಾರುತಿ ನಗರ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ.‌ ಊರಿನ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆಯಾದರೂ ಅಲ್ಲಿ ಅಗತ್ಯ ಸೌಲಭ್ಯ ನೀಡಿಲ್ಲ. ಹಾಗಾಗಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಂತ್ರಸ್ತರಿಗೆ ಬೇಳೆ ಕಾಳು, ಇತರೆ ಅಗತ್ಯ ವಸ್ತುಗಳನ್ನು ಕೂಡಲೇ ನೀಡಬೇಕು ಎಂದು ಸೂಚನೆ ನೀಡಿದ್ದೇನೆ." ಎಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪೀಡಿದ ಪ್ರದೇಶಗಳ ಭೇಟಿ ಬಳಿಕ ಸಿದ್ದರಾಮಯ್ಯ ಮಾತನಾಡಿದ್ದಾರೆ.

"ಬೆಳಗಾವಿ ಕೆಲವು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾದಗಲೆಲ್ಲಾ ಊರೊಳಗೆ ನೀರು ನುಗ್ಗುತ್ತಿದೆ, ಇದನ್ನು ತಪ್ಪಿಸಲು ನಾಲೆಗೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ರೂ. 13 ಕೋಟಿ ವೆಚ್ಚದಲ್ಲಿ ತಡೆಗೋಡೆಯ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ. ತಕ್ಷಣ ನೀಲನಕ್ಷೆಯನ್ನು ಸರ್ಕಾರಕ್ಕೆ ಕಳುಹಿಸಿಕೊಡಿ, ತಡೆಗೋಡೆ ನಿರ್ಮಾಣ ಕುರಿತು ಸರ್ಕಾರದ ಜೊತೆ ಮಾತನಾಡುತ್ತೇನೆ. ಬೆಳಗಾವಿ - ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆ. ಈ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕೋರುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ
Know all about
ಸಿದ್ದರಾಮಯ್ಯ
English summary
Opposition leader Siddaramaiah Made surprise Statement on Working CM BS Yediyurappa in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X