ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೂಂಡಾ ರಾಜ್ಯದ ಸಿಎಂ ಬಿಜೆಪಿಗೆ ಪ್ರೇರಣೆಯಾಗಿರುವುದು ದುರದೃಷ್ಟಕರ

|
Google Oneindia Kannada News

ಬೆಂಗಳೂರು, ನ 7: ಗೂಂಡಾ ರಾಜ್ಯ ಎನ್ನುವ ಹಣೆಪಟ್ಟಿಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕ ಬಿಜೆಪಿಯವರಿಗೆ ಪ್ರೇರಣೆಯಾಗಿರುವುದು ದುರದೃಷ್ಟಕರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಲವ್ ಜಿಹಾದ್ ಎಂದರೆ ಏನು, ಅದರ ವ್ಯಾಖ್ಯಾನ ಏನು ಎನ್ನುವುದೇ ಸ್ಪಷ್ಟವಾಗದೇ ಇರುವಾಗ, ಅದರ ತಡೆಗೆ ಕಾನೂನು ರೂಪಿಸುವುದಕ್ಕೆ ಯಾವುದೇ ಅರ್ಥವಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"'ಲವ್ ಜಿಹಾದ್' ತಡೆಗೆ ಕಾನೂನು ರೂಪಿಸುವ @CMofKarnataka ಅವರ ಘೋಷಣೆ, ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ"ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿಪ್ರಾಯ ಪಟ್ಟಿದ್ದಾರೆ.

Opposition Leader Siddaramaiah Opposed Proposed Ban On Love Jihad In Karnataka

"ಲವ್ ಜಿಹಾದ್ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, 'ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ' ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, @CMofKarnataka ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು @BJP4Karnataka ನಾಯಕರು ಮಾಡುತ್ತಿದ್ದಾರೆ. ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು' ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Recommended Video

BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

"@CMofKarnataka ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ 'ಗೂಂಡಾರಾಜ್ಯ' ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು" ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

English summary
Opposition Leader Siddaramaiah Opposed Proposed Ban On Love Jihad In Karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X