ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸೇರುವ ಕುರಿತು ಟ್ವೀಟ್ ಮಾಡಿದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಮಾರ್ಚ್ 09 : "ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ" ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಮಾಜಿ ಸಚಿವ ಬಾಬೂರಾವ್ ಚಿಂಚನಸೂರ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.

ಸಿದ್ದರಾಮಯ್ಯ ಸೋಮವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಬಿಜೆಪಿಗೆ; ಕೇಂದ್ರ ಸಚಿವ ಸ್ಥಾನಸಿದ್ದರಾಮಯ್ಯ ಬಿಜೆಪಿಗೆ; ಕೇಂದ್ರ ಸಚಿವ ಸ್ಥಾನ

ಶುಕ್ರವಾರ ಕಲಬುರಗಿಯಲ್ಲಿ ಮಾತನಾಡಿದ್ದ ಬಾಬೂರಾವ್ ಚಿಂಚನಸೂರ, "ಸಿದ್ದರಾಮಯ್ಯ ಬಿಜೆಪಿ ಸೇರಿದರೆ ಕೇಂದ್ರ ಸಚಿವರಾಗಲಿದ್ದಾರೆ. ಅವರನ್ನು ನಾನು ಪಕ್ಷಕ್ಕೆ ಸ್ವಾಗತಿಸುತ್ತೇನೆ" ಎಂದು ಹೇಳಿಕೆ ಕೊಟ್ಟಿದ್ದರು.

ಬಿಜೆಪಿ ಸೇರಿದ ಮಾಜಿ ಸಚಿವ ಬಾಬೂರಾವ್ ಚಿಂಚನಸೂರುಬಿಜೆಪಿ ಸೇರಿದ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು

ಸರಣಿ ಟ್ವೀಟ್‌ಗಳ ಮೂಲಕ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. "ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ" ಎಂದು ಹೇಳಿದ್ದಾರೆ.

ಬಾಬೂರಾವ್ ಚಿಂಚನಸೂರು ಬಿಜೆಪಿಗೆ, ಖರ್ಗೆ ಸೋಲಿಸಲು ತಂತ್ರ! ಬಾಬೂರಾವ್ ಚಿಂಚನಸೂರು ಬಿಜೆಪಿಗೆ, ಖರ್ಗೆ ಸೋಲಿಸಲು ತಂತ್ರ!

ಮೂರ್ಖತನದ ಪ್ರಚಾರ

"ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

"ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಗರಂ

ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ, "ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸ್ವಾಗತಿಸಿದ್ದ ಮಾಜಿ ಸಚಿವ

ಬಿಜೆಪಿಗೆ ಸ್ವಾಗತಿಸಿದ್ದ ಮಾಜಿ ಸಚಿವ

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬಾಬೂರಾವ್ ಚಿಂಚನಸೂರ ಸಿದ್ದರಾಮಯ್ಯರನ್ನು ಬಿಜೆಪಿಗೆ ಸ್ವಾಗತಿಸಿದ್ದರು. "ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಕೇಂದ್ರ ಸಚಿವರಾಗಲಿದ್ದಾರೆ. ಸಿದ್ದರಾಮಯ್ಯ ರಾಜ್ಯದಲ್ಲಿ ಅಸ್ತಿತ್ವವನ್ನು ಕಾಪಾಡಿಕೊಳ್ಳಲು ಪರ್ಯಾಯ ಮಾರ್ಗ ಹುಡುಕುತ್ತಿದ್ದಾರೆ" ಎಂದು ಹೇಳಿದ್ದರು.

English summary
Karnataka opposition leader Siddaramaiah tweet after BJP leader Baburao Chinchansur invited him to party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X