• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿ ನಾಯಕರಿಗೆ ಬಟ್ಟೆ ದಾನ; ಸಿದ್ದರಾಮಯ್ಯ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಮಾರ್ಚ್ 21: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಟ್ಟೆ ಖರೀದಿ ಬಗ್ಗೆ ಶುಕ್ರವಾರದ ಸದನದಲ್ಲಿ ಚರ್ಚೆ ನಡೆದಿತ್ತು. ಇದೇ ವಿಚಾರ ಇಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕೆ ಮಾಡಿದ್ದರು.

ಭಾನುವಾರ ಸಿದ್ದರಾಮಯ್ಯ ಈ ಹೇಳಿಕೆಗೆ ಟ್ವಿಟರ್ ಮೂಲಕ ಉತ್ತರ ಕೊಟ್ಟಿದ್ದಾರೆ. "ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ" ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ? ಮಸ್ಕಿ ಉಪ ಚುನಾವಣೆ; ಜನರು ತಕ್ಕಪಾಠ ಕಲಿಸುವುದು ಯಾರಿಗೆ?

"ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ" ಎಂದು ಬಿಜೆಪಿ ನಾಯಕರಿಗೆ ಖಡಕ್ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಕೊಟ್ಟಿರುವ ಉತ್ತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಬಸವಕಲ್ಯಾಣ ಉಪ ಚುನಾವಣೆ; ಯಡಿಯೂರಪ್ಪ ಸ್ಪಷ್ಟನೆ ಬಸವಕಲ್ಯಾಣ ಉಪ ಚುನಾವಣೆ; ಯಡಿಯೂರಪ್ಪ ಸ್ಪಷ್ಟನೆ

ಸಿದ್ದರಾಮಯ್ಯ ಮತ್ತು ನಳಿನ್ ಕುಮಾರ್ ಕಟೀಲ್ ನಡುವಿನ ಜಟಾಪಟಿ ಇಂದು ನಿನ್ನೆಯದಲ್ಲ. ಹಲವಾರು ದಿನಗಳಿಂದಲೂ ಇಬ್ಬರೂ ಸಹ ವಾಗ್ಯುದ್ಧವನ್ನು ಮಾಡುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾಮಿಡಿ ಆಕ್ಟರ್! ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾಮಿಡಿ ಆಕ್ಟರ್!

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

"ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ @BJP4Karnataka ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಒಂದೆರಡು ಬಟ್ಟೆ ದಾನ ಮಾಡುವೆ

"ಬೇಕಿದ್ದರೆ @nalinkateel ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ" ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಸ್ಕಿಯಲ್ಲಿ ನಳಿನ್ ಕುಮಾರ್ ಕಟೀಲ್ ಭಾಷಣ

ಮಸ್ಕಿಯಲ್ಲಿ ನಳಿನ್ ಕುಮಾರ್ ಕಟೀಲ್ ಭಾಷಣ

ಮಸ್ಕಿಯಲ್ಲಿ ಉಪ ಚುನಾವಣೆ ಪ್ರಚಾರದ ವೇಳೆ ಶನಿವಾರ ನಳಿನ್ ಕುಮಾರ್ ಕಟೀಲ್, "ಸಿದ್ದರಾಮಯ್ಯ ಅವರು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿ ತಿಂಗಳಿನಲ್ಲಿ ಪಕ್ಷವನ್ನು ಬಿಡಲಿದ್ದಾರೆ. ಅದಕ್ಕಾಗಿ 90 ಜೊತೆ ಬಟ್ಟೆ ಖರೀದಿಸಿದ್ದಾರಾ?" ಎಂದು ವ್ಯಂಗ್ಯವಾಡಿದ್ದರು.

ಸದನದಲ್ಲಿ ಚರ್ಚೆಯಾಗಿತ್ತು

ಸದನದಲ್ಲಿ ಚರ್ಚೆಯಾಗಿತ್ತು

ಸಿದ್ದರಾಮಯ್ಯ 90 ಜೊತೆ ಬಟ್ಟೆ ಖರೀದಿ ಮಾಡಿದ್ದಾರೆ ಎಂದು ಶುಕ್ರವಾರ ವಿಧಾನಸಭೆಯಲ್ಲಿ ಚರ್ಚೆ ನಡೆದಿತ್ತು. ಆಗ ಸಿದ್ದರಾಮಯ್ಯ ಸಹ ಅಲ್ಲೇ ಉತ್ತರ ನೀಡಿದ್ದರು. ನಳಿನ್ ಕುಮಾರ್ ಕಟೀಲ್ ಅದನ್ನು ಉಪ ಚುನಾವಣೆ ಪ್ರಚಾರದಲ್ಲಿ ಪ್ರಸ್ತಾಪಿಸಿದ್ದರು.

ಬಟ್ಟೆ ವ್ಯಾಪಾರ ಕೈ ಹಿಡಿಯಲಿ

ಸಿದ್ದರಾಮಯ್ಯ ಟ್ವೀಟ್‌ಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.ನಮ್ಮ ಪಕ್ಷ ಬಿಡಿ, 90 ಜೊತೆ ಬಟ್ಟೆಗಳಲ್ಲಿ ನಿಮ್ಮ ಪಕ್ಷದ ಹಿರಿಯ ತಲೆಗಳಾದ ಮೇಟಿಗೆ ಮತ್ತು ಅಭಿಷೇಕ್ ಮನು ಸಿಂಘ್ವಿಗೆ ಎಷ್ಟು ಕೊಟ್ಟಿದ್ದೀರ ಮಾಜಿ ಮುಖ್ಯಮಂತ್ರಿ@siddaramaiahನವರೇ?" ಎಂದು ಪ್ರಶ್ನೆ ಮಾಡಿದ್ದಾರೆ.

English summary
Opposition leader Siddaramaiah tweet against Karnataka BJP president Nalin Kumar Kateel on cloth issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X