ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್ ಹೇರಿದ ನಂತರ ಸೋಂಕು ಇಳಿಕೆ ಬರೀ ಸರಕಾರದ ಬಡಾಯಿ

|
Google Oneindia Kannada News

ಬೆಂಗಳೂರು, ಮೇ 22: ರಾಜ್ಯದಲ್ಲಿ ಲಾಕ್‌ಡೌನ್ ಹೇರಿದ ನಂತರ ಸೋಂಕು ಇಳಿಮುಖವಾಗುತ್ತಿದೆ ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ಬರೀ ಬಡಾಯಿತನದ್ದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

Yediyurappa ಕೊರೊನ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ | Oneindia Kannada

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಹೀಗೆ, "ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ @BJP4Karnataka ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. @CMofKarnataka ಮತ್ತು @mla_sudhakar ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ".

ಸಂವಾದದ ವೇಳೆ ಮೋದಿ ಗದ್ಗದಿತ: ಸಂವಾದದ ವೇಳೆ ಮೋದಿ ಗದ್ಗದಿತ: "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!!

"ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ @CMofKarnataka ಅವರ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ @BJP4Karnataka ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Opposition Leader Siddaramaiah Tweet On Corona Testing Count Reduced

"ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು @BJP4Karnataka ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ"ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು @CMofKarnataka ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ"ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

"ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ @CMofKarnataka ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು‌ ಒತ್ತಾಯಿಸುತ್ತೇನೆ. ಕೊರೊನಾವನ್ನು‌ ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ"ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಯಡಿಯೂರಪ್ಪ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

English summary
Opposition Leader Siddaramaiah Tweet On Corona Testing Count Reduced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X