• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಎಂಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಅಲ್ಲ: ಸಿದ್ದರಾಮಯ್ಯ ವಾಗ್ಬಾಣ

|

ಬೆಂಗಳೂರು, ಏಪ್ರಿಲ್ 23: ಕೂರೊನಾ ನಿರ್ವಹಣೆ, ಆಕ್ಸಿಜನ್ ಅಭಾವ ಮುಂತಾದ ವಿಚಾಗಳ ಕುರಿತಂತೆ ಪ್ರಧಾನಿ ಮೋದಿ ಕರೆದಿದ್ದ ಮುಖ್ಯಮಂತ್ರಿಗಳ ಸಭೆಯ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಿಗೆ ಪಾಠ ಮಾಡಲು ನೀವು ಹೆಡ್‌ಮಾಸ್ಟರ್ ಅಲ್ಲ ಎಂದು ಹೇಳಿದ್ದಾರೆ. "ಪ್ರಧಾನಿ @narendramodi ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ #coronavirus ನಿಯಂತ್ರಿಸಿ"ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ಸಂಕಷ್ಟ; ಜನರಿಗೆ ನೆರವಾಗುವಂತೆ ಸ್ವಪಕ್ಷದವರಿಗೆ ಸಿದ್ದರಾಮಯ್ಯ ಮನವಿಕೊರೊನಾ ಸಂಕಷ್ಟ; ಜನರಿಗೆ ನೆರವಾಗುವಂತೆ ಸ್ವಪಕ್ಷದವರಿಗೆ ಸಿದ್ದರಾಮಯ್ಯ ಮನವಿ

"ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು
ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ @PMOIndia"ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487. ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು @CMofKarnataka ನಿಮಗೇನಾದರೂ ತಿಳಿಸಿದ್ದಾರೆಯೇ @PMOIndia?"ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

"ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ @PMOIndia?".

ಇಂಥ ತುಘಲಕ್ ದರ್ಬಾರ್ ಮಾಡಬೇಡಿ; ಕಿಡಿಕಾರಿದ ಸಿದ್ದರಾಮಯ್ಯಇಂಥ ತುಘಲಕ್ ದರ್ಬಾರ್ ಮಾಡಬೇಡಿ; ಕಿಡಿಕಾರಿದ ಸಿದ್ದರಾಮಯ್ಯ

"'ಪರಿಸ್ಥಿತಿ ಕೈಮೀರಿಹೋಗಿದೆ' ಎಂದು @CMofKarnataka ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ @PMOIndia. ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ?"ಎಂದು ಸಿದ್ದರಾಮಯ್ಯ ಸಾಲುಸಾಲು ಟ್ವೀಟ್ ಮೂಲಕ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.

English summary
Opposition Leader Siddaramaiah Tweet To PM Modi On CMs Meeting Held Today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X