• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರಧಾನಿ ಮೋದಿ ಗಡ್ಡಬಿಟ್ಟ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!

|

ಬೆಂಗಳೂರು, ಫೆಬ್ರವರಿ 21; ಪ್ರಧಾನಿ ನರೇಂದ್ರ ಮೋದಿ ಗಡ್ಡ ಬಿಟ್ಟಿದ್ದಾರೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿ ಆರಂಭವಾದಾಗಿನಿಂದ ಮೋದಿ ಗಡ್ಡಬಿಟ್ಟಿದ್ದು, ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಮೋದಿ ಬಿಳಿಯ ಗಡ್ಡದ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಗಡ್ಡದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ಕೃಷಿ ಉತ್ಪನ್ನ ಆಮದಿಗೆ ಮಾಡುವ ವೆಚ್ಚ ರೈತರಿಗೆ ಸಿಗುವಂತಾಗಬೇಕು: ಮೋದಿ

"ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ: ಹಿಂದಿನ ಸರ್ಕಾರಗಳನ್ನು ಹೊಣೆ ಮಾಡಿದ ಪ್ರಧಾನಿ ಮೋದಿ

ಇಂದು ಸಿದ್ದರಾಮಯ್ಯ ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಹಾಗೂ ಧ್ರುವನಾರಾಯಣ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಹೊಸೂರಿನಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ಅವಕಾಶ ಬಳಕೆ ಯುವ ಉದ್ಯಮಿಗಳಿಗೆ ಸ್ವಾತಂತ್ರ್ಯ ಅಗತ್ಯ: ಮೋದಿ

ಸಿದ್ದರಾಮಯ್ಯ ಸರಣಿ ಟ್ವೀಟ್

ಸಿದ್ದರಾಮಯ್ಯ ಸರಣಿ ಟ್ವೀಟ್

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ #BJPFailsIndia ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ಹಲವಾರು ಟ್ವೀಟ್‌ಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಬಾಣವನ್ನು ಬಿಟ್ಟಿದ್ದಾರೆ.

ಗಡ್ಡ ಬೆಳೆಸಿಕೊಂಡಿದ್ದಾರೆ

ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ" ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ಭಾಷಣ

ಸುಳ್ಳಿಗೆ ಪರ್ಯಾದ ಪದವೆಂದರೆ ಅದು ನರೇಂದ್ರ ಮೋದಿ ಅವರ ಚುನಾವಣಾ ಪೂರ್ವದ ಭಾಷಣ. ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ" ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಯಡಿಯೂರಪ್ಪ ವಿರುದ್ಧ ಟ್ವೀಟ್

"ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ?" ಎಂದು ಪ್ರಶ್ನಿಸಿದರು.

English summary
Opposition leader of Karnataka Siddaramaiah tweet about price hike. Siddaramaiah verbal attack on prime minister of India Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X