ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಸೋಲಿಸಲು ಬಯಸಿದ್ದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಮೇ 3: ಎರಡು ಅಸೆಂಬ್ಲಿ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಬೆಳಗಾವಿ ಮತ್ತು ಬಸವಕಲ್ಯಾಣದಲ್ಲಿ ಬಿಜೆಪಿ ಗೆದ್ದರೆ, ಮಸ್ಕಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಸೋಲಲು ಜೆಡಿಎಸ್ ತಮ್ಮ ಅಭ್ಯರ್ಥಿ ನಿಲ್ಲಿಸಿದ್ದೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಬೇಕೆಂದು ಖುದ್ದು ಸಿದ್ದರಾಮಯ್ಯನವರೇ ಬಯಸಿದ್ದರು ಎನ್ನುವ ಗಂಭಿರ ಆರೋಪವನ್ನು ಎಚ್ಡಿಕೆ ಮಾಡಿದ್ದಾರೆ.

 ದುಷ್ಟ ಶಕ್ತಿಗಳ ವಿರುದ್ಧ ದುರ್ಗೆಯಂತೆ ಹೊರಹೊಮ್ಮಿದ ಮಮತಾ: ಎಚ್ಡಿಕೆ ಪ್ರತಿಕ್ರಿಯೆ ದುಷ್ಟ ಶಕ್ತಿಗಳ ವಿರುದ್ಧ ದುರ್ಗೆಯಂತೆ ಹೊರಹೊಮ್ಮಿದ ಮಮತಾ: ಎಚ್ಡಿಕೆ ಪ್ರತಿಕ್ರಿಯೆ

ಈ ಬಗ್ಗೆ ಎಚ್ಡಿಕೆ ಟ್ವೀಟ್ ಮಾಡಿದ್ದು ಹೀಗೆ, " ಮಾನ್ಯ ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ.. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Opposition Leader Siddaramaiah Wanted To Defeat His Own Party Candidate In Maski

"ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಉಪ ಚುನಾವಣೆ: ದಳಪತಿಗೆ ಒಲಿಯದ 'ಕಲ್ಯಾಣ' ನಾಡಿನ ಮತದಾರಉಪ ಚುನಾವಣೆ: ದಳಪತಿಗೆ ಒಲಿಯದ 'ಕಲ್ಯಾಣ' ನಾಡಿನ ಮತದಾರ

"ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ"ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

"ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ"ಎನ್ನುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತ ಪಡಿಸಿದ್ದಾರೆ.

English summary
Opposition Leader Siddaramaiah Wanted To Defeat His Own Party Candidate In Maski.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X