ತೊಗರಿ ಬೆಳೆ ಕಳೆದುಕೊಂಡ ರೈತರ ಮುಂದೆ ಮಲ್ಲಿಕಾರ್ಜುನ್ ಖರ್ಗೆ ದುರ್ವರ್ತನೆ: ವಿಪಕ್ಷ ನಾಯಕರು

ತೊಗರಿಯ ಕಲಬುರಗಿ ಜಿಲ್ಲೆಯನ್ನು 'ತೊಗರಿಯ ಕಣಜ' ಅಂತಲೂ ಕರೆಯುತ್ತಾರೆ. ಇಲ್ಲಿನ ರೈತರು ಈ ಭಾರಿ ಮಳೆಗೆ ಭಾರಿ ಸಂಕಷ್ಟ ಅನುಭವಿಸಿದ್ದಾರೆ. ಸಣ್ಣ ಹಿಡುವಳಿದಾರರಿಂದ ದೊಡ್ಡ ರೈತರವರೆಗೂ ತೊಗರಿ ಬೆಳೆ ಹಾಳಾಗಿದೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಬಂದ ರೈತರ ಮೇಲೆ ಎಐಸಿಸಿ ಮಲ್ಲಿಕಾರ್ಜುನ್ ಖರ್ಗೆ ಅವರು ತೋರಿದ ನಡೆಗೆ ವಿಪಕ್ಷ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹಾಗೂ ಆರ್.ಅಶೋಕ್ ಅವರು ಕಿಡಿ ಕಾರಿದ್ದಾರೆ.

ಎಚ್‌ಡಿ ಮಾರಸ್ವಾಮಿ ಅವರು ಟ್ವೀಟ್ ಮಾಡಿ 'ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು?

Opposition Leaders Slams AICC Mallikarjun Kharge Over Remarks to Tur Farmers

ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು. ಇದೆಲ್ಲವನ್ನೂ ತಾವು ಮರೆತು ಮಾತನಾಡಿದ್ದೀರಿ! ಇದು ತಮಗೆ ಭೂಷಣವಲ್ಲ. ದುಃಖ ಹೇಳಿಕೊಳ್ಳಲು ಬಂದ ರೈತನ ಮೇಲೆ ಈ ಪರಿಯ ದರ್ಪ ಅಗತ್ಯವಿರಲಿಲ್ಲ. ನೀವೂ ತೊಗರಿ ರೈತರೇ ಆಗಿರಬಹುದು. ಆದರೆ 40 ಎಕರೆಯಲ್ಲಿ ಬೆಳೆಯುವ ತಮಗೂ, ಒಂದು ಅಥವಾ ಎರಡು ಎಕರೆಯಲ್ಲಿ ಬೆಳೆಯುವ ಆ ಬಡರೈತನಿಗೂ ಹೋಲಿಕೆಯೇ? ನಷ್ಟವನ್ನು ಭರಿಸುವ ಶಕ್ತಿ ನಿಮಗಿರುತ್ತದೆ, ರೈತನಿಗೆ ಆ ಶಕ್ತಿ ಇರಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯ? ತೊಗರಿ ಅಷ್ಟೆ ಅಲ್ಲ; ಉದ್ದು, ಹೆಸರು ಕೂಡ ಹಾಳಾಗಿರುವುದು ನನಗೆ ಗೊತ್ತಿದೆ. ಆರು ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು.." ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಮಾತುಗಳನ್ನು ಎಚ್‌ಡಿಕೆ ಮರು ಪೋಸ್ಟ್ ಮಾಡಿದ್ದಾರೆ.

Opposition Leaders Slams AICC Mallikarjun Kharge Over Remarks to Tur Farmers

ರೈತರಿಗೆ ಹೀಗೆಂದರೇನು ಖರ್ಗೆಯವರೇ? ಹಿರಿಯರು ತಾವೇ ಹೇಳಬೇಕು. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು ಎಂದು ಕುಮಾರಸ್ವಾಮಿ ಹೇಳುವ ಜೊತೆ ಖರ್ಗೆ ಹೇಳಿಕೆ ಖಂಡಿಸಿದ್ದಾರೆ.

ರೈತರ ಅಪಮಾನ, ವ್ಯಂಗ್ಯ ಮಾಡಿದ 'ಕೈ'ಪಡೆಯ ಪಟ್ಟಿ ದೊಡ್ಡದಿದೆ

ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಹ ಖರ್ಗೆ ಅವರು ರೈತರೊಂದಿಗೆ ಮಾತನಾಡಿದ್ದನ್ನು ಖಂಡಿಸಿ ಪೋಸ್ಟ್ ಮಾಡಿದ್ದಾರೆ. 'ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರೂಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ ದುರಂತ.

ತೊಗರಿ ಬೇಳೆ ಹಾಳಾಗಿ ನಷ್ಟವಾಗಿದೆ ಎಂದು ಅಳಲು ತೋಡಿಕೊಳ್ಳಲು ಬಂದ ನೊಂದ ರೈತರ ಬಳಿ ಈ ರೀತಿ ವ್ಯವಹರಿಸುವುದು ಸರೀನಾ ಮಲ್ಲಿಕಾರ್ಜುನ ಖರ್ಗೆ ಅವರೇ? "ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯಾ? ತೊಗರಿ ಅಷ್ಟೆ ಅಲ್ಲ, ಉದ್ದು, ಹೆಸರು ಕೂಡ ಹಾಳಾಗಿದ್ದು ನನಗೆ ಗೊತ್ತಿದೆ. 6 ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು" ಎಂದು ಗದರಿ ಕಳಿಸಿದ್ದೀರಲ್ಲ ಇದೇನಾ ಕಾಂಗ್ರೆಸ್ ಪಕ್ಷ ರೈತರಿಗೆ ಕೊಡುವ ಗೌರವ?' ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸಲ ಮುಖ್ಯಮಂತ್ರಿಯಾಗಿದ್ದಾಗ ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕರ್ನಾಟಕದ ರೈತರು ಪ್ರತಿಭಟನೆ ಮಾಡಿದ್ದಾಗ ತಮ್ಮ ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಹಳ್ಳಿ ಹಳ್ಳಿಗೆ ಕಳಿಸಿ ರೈತರ ಮೇಲೆ ಲಾಠಿ ಬೀಸಿದ್ದನ್ನು ನಾಡಿನ ರೈತರು ಮರೆತಿಲ್ಲ. ಬೆಳಗಾವಿಯಲ್ಲಿ ವಿಠಲ್ ಅರಬಾವಿ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಾಗ, ಕುಡಿದು ಸತ್ತ ಎಂದು ವ್ಯಂಗ್ಯವಾಡಿದ್ದನ್ನು ನಾಡಿನ ಯಾರು ಮರೆತಿಲ್ಲ' ಎಂದರು.

'ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ' ಎಂದು ಸಚಿವ ಶಿವಾನಂದ ಪಾಟೀಲರು ರೈತರಿಗೆ ಅಪಮಾನ ಮಾಡಿದ್ದರು. ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ "ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ." ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದನ್ನು ಮರೆತಿಲ್ಲ'

'ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ" ಎಂದು ಇದೇ ಡಿಕೆ ಶಿವಕುಮಾರ್ ಅವರು ಅನ್ನದಾತರನ್ನು ಹೀಯಾಳಿಸಿ ಮಾತನಾಡಿದ್ದರು. ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕ ನಾಡಿನ ಅನ್ನದಾತರ ಶಾಪ ತಟ್ಟದೇ ಇರದು ಎಂದು ಸರ್ಕಾರದ ವಿರುದ್ಧ ಆರ್.ಅಶೋಕ್ ಹಿಡಿಶಾಪ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+