ಕೆಪಿಎಸ್‌ಸಿ ವಿವಾದ : ಸರ್ಕಾರಕ್ಕೆ ಎಚ್ಡಿಕೆ ಡೆಡ್ ಲೈನ್
ಬೆಂಗಳೂರು, ಆ.8 : 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಆದೇಶ ಹಿಂಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಸರ್ಕಾರ ಒಪ್ಪದಿದ್ದರೆ, ಅಭ್ಯರ್ಥಿಗಳ ಜೊತೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಕೆಪಿಎಸ್‌ಸಿ ನೇಮಕಾತಿಯನ್ನು ರದ್ದು ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ಶುಕ್ರವಾರ ಬೆಳಗ್ಗೆ ಬೆಳಗ್ಗೆ 10 ಗಂಟೆಯವರೆಗೂ ಸರ್ಕಾರಕ್ಕೆ ಗಡುವು ನೀಡುತ್ತಾನೆ. ಆದೇಶ ಹಿಂಪಡೆಯದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. [ಕೆಪಿಎಸ್ಸಿ ನೇಮಕಾತಿ ರದ್ದು, ಸಿಡಿದೆದ್ದ ಅಭ್ಯರ್ಥಿಗಳು]

ಆಯ್ಕೆ ಪಟ್ಟಿ ರದ್ದುಪಡಿಸುವ ಮೂಲಕ ಬಡವರು, ಹಿಂದುಳಿದ ವರ್ಗದವರ ಮೇಲೆ ಸರ್ಕಾರ ಗದಾಪ್ರಹಾರ ನಡೆಸುತ್ತಿದೆ. ಕೆಲವರ ಹಿತ ಕಾಯುವುದಕ್ಕಾಗಿ ಸರ್ಕಾರ ಏಕಾಏಕಿ ಇಂತಹ ಕ್ರಮಕೈಗೊಂಡಿದೆ. ಇದರಿಂದ ಅಮಾಯಕ ಜನರಿಗೆ ತೊಂದರೆಯಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. [ನೇಮಕಾತಿ ರದ್ದುಗೊಳಿಸಬೇಡಿ ಎಂದು ಪ್ರತಿಭಟನೆ ]
ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ : ಕೆಪಿಎಸ್‌ಸಿ ನೇಮಕಾತಿಯನ್ನು ರದ್ದು ಮಾಡಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಶುಕ್ರವಾರ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳ ಜೊತೆ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.
ಸರ್ಕಾರದ ನಿರ್ಧಾರ ವಿರೋಧಿಸಿದ ಬಿಜೆಪಿ : ಪ್ರತಿಪಕ್ಷ ಬಿಜೆಪಿ ಸಹ ನೇಮಕಾತಿ ರದ್ದುಗೊಳಿಸಿದ ಸರ್ಕಾರದ ಕ್ರಮವನ್ನು ವಿರೋಧಿಸಿದೆ. ಅಭ್ಯರ್ಥಿಗಳು ಉಪವಾಸ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ ಅವರು, ಇದೊಂದು ವಿವೇಚನಾರಹಿತ ನಿರ್ಧಾರ. ಅಹಿಂದ ಹೆಸರಿನಲ್ಲಿ ರಾಜಕಾರಣ ಮಾಡುವ ಸಿದ್ದರಾಮಯ್ಯ ಅಹಿಂದ ವರ್ಗದ ಅಭ್ಯರ್ಥಿಗಳೇ ಹೆಚ್ಚಿರುವ ಪಟ್ಟಿಯನ್ನು ರದ್ದು ಮಾಡುವ ಮೂಲಕ ಅಹಿಂದ ವರ್ಗದ ಜನರ ಬೆನ್ನಿಗೆ ಚೂರಿ ಹಾಕಿದೆ ಎಂದು ಹೇಳಿದ್ದಾರೆ.












Click it and Unblock the Notifications