ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 16 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಆ.5ರ ತನಕ ಭಾರೀ ಮಳೆ

|
Google Oneindia Kannada News

ಬೆಂಗಳೂರು, ಆಗಸ್ಟ್ 02; ಭಾರತದ ಹವಾಮಾನ ಇಲಾಖೆ (IMD) ಕರ್ನಾಟಕದ 16 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 5 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ/ ಗ್ರಾಮೀಣ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹವಾಮಾನ ಇಲಾಖೆಯ ಪ್ರಕಾರ ಆಗಸ್ಟ್ 4 ರಂದು ಬೆಂಗಳೂರಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಮತ್ತು ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು-ಮೈಸೂರು ರಸ್ತೆ; ಗಡ್ಕರಿ ಕೊಟ್ಟ ಹೊಸ ಅಪ್‌ ಡೇಟ್ ಬೆಂಗಳೂರು-ಮೈಸೂರು ರಸ್ತೆ; ಗಡ್ಕರಿ ಕೊಟ್ಟ ಹೊಸ ಅಪ್‌ ಡೇಟ್

ಆಗಸ್ಟ್ 6 ರವರೆಗೆ ಕರಾವಳಿ ಕರ್ನಾಟಕ ಪ್ರದೇಶ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಒಂಬತ್ತು ಸ್ಥಳಗಳಲ್ಲಿ ದಾಖಲಾಗಿದ್ದು, ಗರಿಷ್ಠ 533 ಮಿ. ಮೀ, ಭಟ್ಕಳ ತಾಲೂಕಿನಲ್ಲಿ ಮತ್ತು ಕನಿಷ್ಠ 222 ಮಿ. ಮೀ. ಮಳೆ ಭಟ್ಕಳ ತಾಲೂಕಿನ ಮಾವಳ್ಳಿಯಲ್ಲಿ ಆಗಿದೆ. ಮುರುಡೇಶ್ವರ ಭಟ್ಕಳ ವಿಭಾಗದ ನಡುವೆ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ತೊಂದರೆಯಾಗಿದ್ದು, ಒಂದು ರೈಲನ್ನು ರದ್ದುಗೊಳಿಸಲಾಗಿದೆ.

ದೇವಾಲಯದ ಆವರಣಕ್ಕೆ ನೀರು

ದೇವಾಲಯದ ಆವರಣಕ್ಕೆ ನೀರು

ಭಾರೀ ಮಳೆ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ದೇಗುಲ ಮತ್ತು ದೇವಾಲಯದ ಆವರಣಕ್ಕೆ ನೀರು ನುಗ್ಗಿರುವ ಕಾರಣ ಭಕ್ತರಿಗೆ ಭೇಟಿ ನೀಡದಂತೆ ಸೂಚಿಸಲಾಗಿದೆ ಎಂದು ಡಿಸಿ ಕೆ. ವಿ. ರಾಜೇಂದ್ರ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಭೂಕುಸಿತ

ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಭೂಕುಸಿತ

ಶಿಂಷಾ ನದಿ ಹಲವು ಪ್ರದೇಶಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ದಕ್ಷಿಣ ಭಾರತದಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯು ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಹಳ್ಳಿಗಳ ನಿವಾಸಿಗಳಿಗೆ ಇನ್ನಿಲ್ಲದ ಸಂಕಷ್ಟವನ್ನು ಉಂಟುಮಾಡಿದೆ. ಮಳೆಯಿಂದಾಗಿ 100 ಕಿ. ಮೀ. ದೂರದಲ್ಲಿರುವ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಶಾಲಾ, ಅಂಗನವಾಡಿ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿದ ಜಿಲ್ಲಾಡಳಿತ, ಸುಳ್ಯ ಮತ್ತು ಕಡಬ ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. "ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಿಂದಾಗಿ ಅನೇಕ ವಸತಿ/ಗ್ರಾಮಗಳು ದ್ವೀಪಗಳಾಗಿ ಮಾರ್ಪಟ್ಟಿವೆ. ತುಲನಾತ್ಮಕವಾಗಿ ಮಳೆ ಕಡಿಮೆಯಾದರೂ ಬಹಳಷ್ಟು ರಸ್ತೆಗಳು/ಸೇತುವೆಗಳು ಜಲಾವೃತವಾಗಿವೆ" ಎಂದು ಜಿಲ್ಲಾಧಿಕಾರಿ ಡಾ ಕೆ. ವಿ. ರಾಜೇಂದ್ರ ಹೇಳಿದರು.

10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕೇರಳದಲ್ಲಿ ನಿರಂತರ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಭೂಕುಸಿತ ಮತ್ತು ನದಿ ನೀರಿನ ಮಟ್ಟ ಏರಿಕೆಯ ವರದಿಗಳೊಂದಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ದಕ್ಷಿಣ ರಾಜ್ಯದ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಐಎಂಡಿ ಇದೇ 10 ಜಿಲ್ಲೆಗಳಲ್ಲಿ ಆಗಸ್ಟ್ 3 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಕೇರಳಕ್ಕೆ ನೀಡಲಾದ ಐಎಂಡಿ ಜಿಲ್ಲೆಯ ಮಳೆಯ ಮುನ್ಸೂಚನೆಯ ಪ್ರಕಾರ ಆಗಸ್ಟ್ 2 ಮತ್ತು 3 ರಂದು ಆರೆಂಜ್ ಅಲರ್ಟ್‌ಗಳನ್ನು ನೀಡಲಾಗಿರುವ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಕಾಸರಗೋಡು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

English summary
The India Meteorological Department (IMD) has issued an orange alert for 16 districts of Karnataka, forecasting heavy rain till August 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X