ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 08 : ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರ ತನಕ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Recommended Video

      Jagan Mohan Reddy ನಿರ್ಧಾರದಿಂದ ಬೌದ್ಧ ದೇಗುಲ ನಿರ್ಣಾಮ | Oneindia Kannada

      ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.

      ಮುಂದಿನ 48 ಗಂಟೆಗಳ ಕಾಲ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

      Rain news in Karnataka

      ಹಲವು ಕಡೆ ಮಳೆ : ಸೋಮವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ಖಾನಾಪುರ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

      ಶಿವಮೊಗ್ಗ, ಆಗುಂಬೆ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡದ ಮೂಡುಕೊಣಾಜೆ ಗ್ರಾಮದ ಏರೋಡಿಬೆಟ್ಟು ಎಣ್ಮಜೆಯಲ್ಲಿ ಮರಕ್ಕೆ ಸಿಡಿಲು ಬಡಿದು ಅದರಲ್ಲಿದ್ದ ಮೂರು ನವಿಲು ಮೃತಪಟ್ಟಿವೆ.

      ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 3. ತೀರ್ಥಹಳ್ಳಿಯಲ್ಲಿ 1.2, ಆಗುಂಬೆಯಲ್ಲಿ 3.8 ಸೆಂ. ಮೀ. ಮಳೆ ಸೋಮವಾರ ಸುರಿದಿದೆ. ಕೊಡಗು ಮತ್ತು ಚಾಮರಾಜನಗರದ ಕೆಲವು ಪ್ರದೇಶಗಳಲ್ಲಿ ಚದುರಿದಂತೆ ಮಳೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+