ಜುಲೈ 19, 20ರಂದು ಭಾರಿ ಮಳೆ; ಆರೆಂಜ್ ಅಲರ್ಟ್

ಬೆಂಗಳೂರು, ಜುಲೈ 19 : ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಬಿರುಸಾಗಿದೆ. ಜುಲೈ 19 ಮತ್ತು 20ರಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      ಹೆಂಡತಿಗೆ ಮಕ್ಕಳೊಂದಿಗೆ 4 Km ನಡೆದುಕೊಂಡು ಸಿಎಂ ಮನೆಮುಂದೆ ಬಂದ ಕೊರೊನ ಸೊಂಕಿತ | Oneindia Kannada

      ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಎರಡು ದಿನ ಭಾರಿ ಮಳೆಯಾಗಲಿದ್ದು 'ಅರೆಂಜ್ ಅಲರ್ಟ್' ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಜೊತೆಗೆ 4.1 ಮೀಟರ್ ಎತ್ತರದ ಅಲೆಗಳು ಏಳುತ್ತಿವೆ.

      ಜೂನ್ 21ರ ತನಕ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸಾಧಾರಣ ಮಳೆಯಾಗಬಹುದು.

      rain

      ಎಲ್ಲಿ ಎಷ್ಟು ಮಳೆ? : ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ ಗರಿಷ್ಠ 15 ಸೆಂ. ಮೀ. ಮಳೆಯಾಗಿದೆ. ಉಳಿದಂತೆ ಕೊಲ್ಲೂರು 14, ಆಗುಂಬೆ 13, ಉಡುಪಿ 11, ಕಾರವಾರ ಮತ್ತು ಅಂಕೋಲಾದಲ್ಲಿ 9, ಹೊಸನಗರ, ಭಾಗಮಂಡಲದಲ್ಲಿ 8 ಸೆಂ. ಮೀ. ಮಳೆಯಾಗಿದೆ.

      ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚು ಮಳೆ ಸುರಿಯುತ್ತಿದ್ದು ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ತುಂಬಿ ಹರಿಯುತ್ತಿದ್ದು, ನೆರೆ ಭೀತಿ ಎದುರಾಗಿದೆ.

      ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಜುಲೈ 28ರಿಂದ ಮುಂಗಾರು ಹಂಗಾಮಿನ ಬೆಳೆಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+