ದಕ್ಷಿಣ ಒಳನಾಡಿನ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ನವೆಂಬರ್ 19: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಮುಂದುವರೆಯಲಿದೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ನವೆಂಬರ್ 22ರವರೆಗೆ ರಾಜ್ಯಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಗಳಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನೂ ಹಲವು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಗುರುವಾರ ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿಯುತ್ತಿದ್ದು, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ - ಕಾಲೇಜು ಹಾಗೂ ಅಂಗನವಾಡಿಗಳಿಗೆ ನ.19 ಮತ್ತು 20ರಂದು ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಮೂರು ದಿನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಮತ್ತು ಶನಿವಾರ ಜಿಲ್ಲೆ ವ್ಯಾಪ್ತಿಯ ಎಲ್ಲ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆಯಾಗಿರುವ ಪ್ರದೇಶಗಳು
ಹಿರೆಕೆರೂರು, ಸವಣೂರು, ಮುಂಡಗೋಡು, ಸೌದತ್ತಿ, ಕೆಆರ್ ನಗರ, ಹಾವೇರಿ, ಸರಗೂರು, ತರೀಕೆರೆ, ಕಿರವತ್ತಿ, ದೇವಿಹೊಸೂರು, ಹಿಡಕಲ್ ಡ್ಯಾಮ್, ತರೀಕೆರೆ, ಕೆಆರ್ ಪೇಟೆ, ಹೊಳೆನರಸೀಪುರ, ಬೇಲೂರು, ಭದ್ರಾವತಿ, ಎಚ್‌ಡಿ ಕೋಟೆ, ಮೈಸೂರು, ಹಾನಗಲ್, ರಾಣೆಬೆನ್ನೂರು, ಅಕ್ಕಿ ಆಲೂರು, ಧಾರವಾಡ, ಪಿಡಿಒ, ಗೋಕಾಕ, ಬೆಳವಾಡಿ, ಮತ್ತಿಕೊಪ್ಪ, ಹುಕ್ಕೇರಿ, ನಾಗನಹಳ್ಳಿ, ಬಂಗಾರಪೇಟೆ, ಚಿಕ್ಕಮಗಳೂರು, ಯಲ್ಲಾಪುರ, ಉಪ್ಪಿನಂಗಡಿ, ಹಾವೇರಿ, ಎಪಿಎಂಸಿ, ತಿಪಟೂರು, ಶಿವಮೊಗ್ಗ, ಬೈಲಹೊಂಗಲ, ಚಿಕ್ಕೋಡಿ, ಕಲಘಟಗಿ, ಅಣ್ಣಿಗೆರೆ, ನಂಜನಗೂಡು, ಸಾಲಿಗ್ರಾಮ, ಅಜ್ಜಂಪುರ, ಹಾಸನ, ಬಂಡೀಪುರ, ದಾವಣಗೆರೆ, ಶಿಕಾರಿಪುರ, ಹುಂಚದಕಟ್ಟೆ, ಮುಳಬಾಗಿಲು, ಚಿಂತಾಮಣಿಯಲ್ಲಿ ಮಳೆಯಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಗುರುವಾರ ಬೆಳಗ್ಗೆಯಿಂದ ರಾತ್ರಿವರೆಗೂ ಬಿಡದೇ ಮಳೆ ಸುರಿದಿದೆ. 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕನಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?
ಬಾಗಲಕೋಟೆಯಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುರು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.