ರಾಜ್ಯದಲ್ಲಿ ಆಗಸ್ಟ್ 29, 30ರಂದು ಭಾರಿ ಮಳೆ, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಆಗಸ್ಟ್ 28: ರಾಜ್ಯದಲ್ಲಿ ಆಗಸ್ಟ್ 29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆಗುಂಬೆಯಲ್ಲಿ 13 ಸೆಂ.ಮೀ ಮಳೆಯಾಗಿದೆ, ಕಾರ್ಕಳದಲ್ಲಿ 7 ಸೆಂ.ಮೀ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ನಿನ್ನೆ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ. ಇಂದಿನಿಂದ ಆಗಸ್ಟ್​ 30ರವರೆಗೂ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಆರೆಂಜ್ ಹಾಗೂ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗಲಿದೆ.

ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡಿನಲ್ಲೂಇಂದು ಮಳೆ ಮುಂದುವರೆಯಲಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಭಾಗಮಂಡಲ, ಶಿರಾಲಿ, ಕಾರವಾರ, ಭಟ್ಕಳ, ಆನೇಕಲ್, ಬುಕ್ಕಪಟ್ಟಣ, ಬಂಗಾರಪೇಟೆ, ಎಂಎಂ ಹಿಲ್ಸ್, ಬೆಂಗಳೂರು ಕೆಐಎಎಲ್ ಏರ್‌ಪೋರ್ಟ್, ಕೋಟ, ರಾಮದುರ್ಗ, ರಾಣೆಬೆನ್ನೂರು, ಅಡಕಿ, ಜ್ಞಾನಭಾರತಿ, ಉತ್ತರಹಳ್ಳಿ, ದೇವನಹಳ್ಳಿ, ಕೋಲಾರ, ಚಿಂತಾಮಣಿ, ಶ್ರೀರಂಗಪಟ್ಟಣ, ತುಮ್ರಿ, ಶಿರಾಳಕೊಪ್ಪ, ಮಾಗಡಿ, ಬೆಳ್ತಂಗಡಿ, ಧರ್ಮಸ್ಥಳ, ಮೂಡುಬಿದಿರೆ, ವಿಟ್ಲ, ಕೊಲ್ಲೂರು, ಭೀಮರಾಯನಗುಡಿ, ಬೈಲಹೊಂಗಲ, ಹಿರೆಕೆರೂರು, ಬಾದಾಮಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ಹೊಸದುರ್ಗ, ಕುಣಿಗಲ್, ಹೆಬ್ಬೂರು, ಶ್ರೀನಿವಾಸಪುರ, ಮಾಲೂರು, ಅರಕಲಗೂಡಿನಲ್ಲಿ ಮಳೆಯಾಗಿದೆ

 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Recommended Video

    ರಹಾನೆ ಕೈಬಿಟ್ರೆ ಯಾರಾಗ್ತಾರೆ 4 ನೇ ಟೆಸ್ಟ್ ಪಂದ್ಯದ ಉಪನಾಯಕ? | Oneindia Kannada
     ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ

    ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆಗಸ್ಟ್ 30ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್‌. ಪಾಟೀಲ್‌ ಮುನ್ಸೂಚನೆ ನೀಡಿದ್ದಾರೆ.

    ಇದೇ ವೇಳೆ, ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಷ್ಟೇ ಅಲ್ಲ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಆಗಸ್ಟ್ 27 ಮತ್ತು 28ರಂದು ಯೆಲ್ಲೋ ಅಲರ್ಟ್‌ ಹಾಗೂ ಆಗಸ್ಟ್ 29 ಮತ್ತು 30ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+