ಮುಂಗಾರು: ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆಯ ಎಚ್ಚರಿಕೆ

ಬೆಂಗಳೂರು, ಜೂನ್ 16: ರಾಜ್ಯದ ವಿವಿಧೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂಗಾರು ಶುರುಕಾದಂತಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂ.17ರಿಂದ ಎರಡು ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್.16 ರಿಂದ 19ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ.16 ರಿಂದ 17ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾವೇರಿ, ಧಾರವಾಡ ಹಾಗೂ ಗದಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜೂನ್17ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹವಾಮಾನ ತಂಪಾಗಿದೆ, 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್‌ಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಿದೆ

ಎಲ್ಲೆಲ್ಲಿ ಮಳೆಯಾಗಿದೆ

ಕೊಲ್ಲೂರು, ಮಾಣಿಯಲ್ಲಿ 12 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಹೊನ್ನಾವರ, ಮೂಡುಬಿದಿರೆ, ಕಾರ್ಕಳ, ಕೋಟ, ಪಣಂಬೂರು, ಗೇರುಸೊಪ್ಪ, ಪುತ್ತೂರು, ಭಾಗಮಂಡಲ, ಕೊಟ್ಟಿಗೆಹಾರ, ಕದ್ರ, ಸುಬ್ರಹ್ಮಣ್ಯ, ಕುಂದಾಪುರ, ಕಾರವಾರ, ವಿಟ್ಲ, ಮಡಿಕೇರಿ, ಸಿದ್ದಾಪುರ, ಭಟ್ಕಳದಲ್ಲಿ ಮಳೆಯಾಗಿದೆ. ಇನ್ನು ಬೆಳ್ತಂಗಡಿ, ಕಳಸ, ಮಂಚಿಕೆರೆ, ಮಾದಾಪುರ, ರಾಯಚೂರು, ಹುಂಚದಕಟ್ಟೆ, ಸಂಕೇಶ್ವರ, ಸೊರಬ, ಸಾಗರ, ಕೊಪ್ಪ, ವಿರಾಜಪೇಟೆ, ಹಾರಂಗಿ, ತ್ಯಾಗರ್ತಿ, ಆನವಟ್ಟಿಯಲ್ಲಿ ಮಳೆಯಾಗಿದೆ.

Recommended Video

    Weather Report - ಧಾರಾಕಾರ ಮಳೆ RED AlERT ಘೋಷಣೆ ಮಾಡಿದ ಹವಾಮಾನ ಇಲಾಖೆ | Oneindia Kannada
     ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

    ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+