ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಾ.ಕೆ.ಸುಧಾಕರ್: ಲಂಚಕ್ಕೆ ಬೇಡಿಕೆ ವೈದ್ಯೆ ವಿರುದ್ಧ ತನಿಖೆಗೆ ಆದೇಶ, ಅಮಾನತು

|
Google Oneindia Kannada News

ನವೆಂಬರ್ 26, ಬೆಂಗಳೂರು: ರಾಮನಗರ ತಾಲ್ಲೂಕಿನ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟ ವೈದ್ಯೆಯೊಬ್ಬರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಸದ್ಯ ಆರೋಪಿ ವೈದ್ಯೆಯನ್ನು ಅಮಾನತಿನಲ್ಲಿ ಇಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

BBMP: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ತ್ಯಾಜ್ಯ ಸಂಗ್ರಹ ಸ್ಥಗಿತ BBMP: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ತ್ಯಾಜ್ಯ ಸಂಗ್ರಹ ಸ್ಥಗಿತ

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಆರೋಗ್ಯ ಸಚಿವರು, ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿಗೆ ವಿರುದ್ಧವಾಗಿ ರಾಮನಗರ ತಾಲ್ಲೂಕಿನ ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯೆಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದು ಸರ್ಕಾರಿ ಆಸ್ಪತ್ರೆಗಳಿಗೆ ಕಳಂಕ ತರುವ ಪರಿಸ್ಥಿತಿ ಎದುರಾಗಿರುವುದು ದುರಾದೃಷ್ಟಕರ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಆರೋಪಿ ವೈದ್ಯೆಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂತಹ ಕೆಲ ವೈದ್ಯರ ನಡೆಯಿಂದ ಇಡೀ ವೈದ್ಯ ವೃತ್ತಿಗೆ, ಸರ್ಕಾರಿ ಆಸ್ಪತ್ರೆಗಳಿಗೆ ಕಳಂಕ ತರುವ ಪರಿಸ್ಥಿತಿ ಎದುರಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ತನಿಖೆಯ ವರದಿ ಬರುವವರೆಗೂ ಆರೋಪಿಯನ್ನು ಸೇವೆಯಿಂದ ಅಮಾನತಿನಲ್ಲಿಡಲಾಗುವುದು ಎಂದರು.

ಬಡವರ ಪಾಲಿಕೆ ಸರ್ಕಾರಿ ಆಸ್ಪತ್ರೆ ಸಂಜೀವಿನಿ

ಸರ್ಕಾರಿ ಆಸ್ಪತ್ರೆಗಳ ನ್ಯೂನ್ಯತೆಗಳು ಎಷ್ಟೇ ಇದ್ದರೂ ಅವು ಇಂದಿಗೂ ನಮ್ಮ ಸಮಾಜದ ಅನೇಕ ಬಡ, ಕೆಳ-ಮಧ್ಯಮ ವರ್ಗ ಜನರ ಪಾಲಿಗೆ ಸಂಜೀವಿನಿಯಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಸೇವಾ ಮನೋಭಾವದಿಂದ ಚಿಕಿತ್ಸೆ ಅರಸಿ ಬರುವವರಿಗೆ ಆಸರೆಯಾಗಬೇಕು.

Order Issued For Investigation Against Doctor Demanding A Bribe Dr.K Sudhakar Says

ಕೇವಲ ಸುಸಜ್ಜಿತ ಕಟ್ಟಡಗಳು, ಅತ್ಯಾಧುನಿಕ ಉಪಕರಣಗಳು, ಅತ್ಯುತ್ತಮ ಭೌತಿಕ ಮೂಲ ಸೌಕರ್ಯಗಳಿಂದ ಒಂದು ಒಳ್ಳೆಯ ಆಸ್ಪತ್ರೆಯಾಗುವುದಿಲ್ಲ. ಸೇವಾ ಮನೋಭಾವ, ಸಾಮಾಜಿಕ ಕಳಕಳಿ, ಮಾನವೀಯತೆ ಉಳ್ಳ ವೃತ್ತಿಪರ ವೈದ್ಯರಿಂದ ಒಂದು ಆಸ್ಪತ್ರೆ ಉತ್ತಮ ಆಸ್ಪತ್ರೆ ಎನಿಸಿಕೊಳ್ಳುತ್ತದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂತಹ ಭ್ರಷ್ಟಾಚಾರ, ಅಶಿಸ್ತು, ಕರ್ತವ್ಯ ನಿರ್ಲಕ್ಷ್ಯವನ್ನು ಸರ್ಕಾರ ಸಹಿಸುವುದಿಲ್ಲ. ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುವ ಮನೋಧರ್ಮ ಇಲ್ಲದ ವೈದ್ಯರು, ಸಿಬ್ಬಂದಿಗಳನ್ನು ಮುಲಾಜಿಲ್ಲದೆ ಕರ್ತವ್ಯದಿಂದ ವಜಾ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

English summary
Order Issued For Investigation Against Bidadi Government hospital Doctor Demanding A Bribe and They suspended till submission detailed report Health Minister Dr.K Sudhakar Says.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X