ಸೋಮವಾರದ ತನಕ ಅಶ್ವಿನ್‌ ರಾವ್‌ಗೆ ಜೈಲೇ ಗತಿ

ಬೆಂಗಳೂರು, ಆಗಸ್ಟ್ 11 : ಎರಡು ಪ್ರಕರಣಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ಕೋರ್ಟ್, ಆ.17ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

ಮಂಗಳವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಾಧೀಶ ಜಿ.ವಿ.ಬೋಪಯ್ಯ ಅವರು ಅಶ್ವಿನ್ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದರು. ಅಶ್ವಿನ್ ರಾವ್ ಅವರಿಗೆ ಜಾಮೀನು ನೀಡಬಾರದು ಎಂದು ಎಸ್‌ಪಿಪಿ ಜನಾರ್ದನ್ ಅವರು ಕೋರ್ಟ್‌ಗೆ ಮನವಿ ಮಾಡಿದರು. [SIT ವಶಕ್ಕೆ ಅಶ್ವಿನ್ ರಾವ್]

ashwin rao

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್‌ ಕೃಷ್ಣಮೂರ್ತಿ ಮತ್ತು ಹಾವೇರಿಯ ಲೋಕೋಪಯೋಗಿ ಇಂಜಿನಿಯರ್ ಚನ್ನಬಸಪ್ಪ ಅವರು ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ಅಶ್ವಿನ್ ರಾವ್ ಅವರನ್ನು ಬಂಧಿಸಿದೆ. ಎರಡೂ ಪ್ರಕರಣಗಳಲ್ಲೂ ಅವರು ಜಾಮೀನಿಗಾಗಿ ಮನವಿ ಮಾಡಿದ್ದಾರೆ. [ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ಜಾಮೀನು ನೀಡುವಂತೆ ಮನವಿ : ಅಶ್ವಿನ್ ರಾವ್ ಪರವಾಗಿ ವಾದ ಮಂಡನೆ ಮಾಡಿದ ವಕೀಲ ಸಂದೀಪ್ ಪಾಟೀಲ್ ಅವರು, ಕೃಷ್ಣಮೂರ್ತಿ ಅವರ ದೂರಿನಲ್ಲಿ ಸತ್ಯಾಂಶವಿಲ್ಲ. ಆ.5ರಂದು ಅಶ್ವಿನ್ ರಾವ್ ಹೈದಾರಾಬಾದ್‌ನಲ್ಲಿದ್ದರು. ಅಂದು ಕೃಷ್ಣಮೂರ್ತಿ ಅವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದು ವಾದ ಮಂಡನೆ ಮಾಡಿದರು.

ಸಾಕ್ಷಿ ನಾಶವಾಗಲಿವೆ : ಅಶ್ವಿನ್ ರಾವ್ ಅವರ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಿಗಳು ಲಭ್ಯವಾಗಿವೆ. ಅಶ್ವಿನ್ ರಾವ್ ಅವರು ಪ್ರಭಾವಿ ವ್ಯಕ್ತಿಗಳ ಪುತ್ರರಾಗಿರುವುದರಿಂದ ಸಾಕ್ಷಿಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನು ನೀಡಬಾರದು ಎಂದು ಎಸ್‌ಪಿಪಿ ವಾದ ಮಂಡಿಸಿದರು. ವಾದ ಆಲಿಸಿದ ಕೋರ್ಟ್ ತೀರ್ಪನ್ನು ಆ.17ಕ್ಕೆ ಕಾಯ್ದಿರಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+