BPL Card: ಬಿಪಿಎಲ್ ಕಾರ್ಡ್ ಯತಾವತ್ತಾಗಿ ಮುಂದುವರಿಸಲು ಆದೇಶ: ಮಹತ್ವದ ಮಾಹಿತಿ ಇಲ್ಲಿದೆ
ಬೆಂಗಳೂರು, ನವೆಂಬರ್ 26: ಎಲ್ಲಾ ಪಡಿತರ ಕಾರ್ಡುಗಳನ್ನು ಯತಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ನವ ದೆಹಲಿಯಲ್ಲಿ ಮಾಧ್ಯಮದರವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ರಾಜ್ಯದ ಕೇಂದ್ರದ ಸಚಿವರನ್ನು ಭೇಟಿಯಾಗಲು ನವ ದೆಹಲಿಗೆ ಬಂದಿದ್ದೇನೆಂದು ತಿಳಿಸಿದ ಸಚಿವರು, ನವೆಂಬರ್ 28ರೊಳಗೆ ಎಲ್ಲಾ ಪಡಿತರ ಕಾರ್ಡ್‌ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕೆ.ಹೆಚ್. ಮುನಿಯಪ್ಪ ಅವರು ತಿಳಿಸಿದರು.

ಅರ್ಹ ಫಲಾನಿಭವಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.
ನಮ್ಮ ಸರ್ಕಾರ ಬಡವರ ಪರವಾದ ಯೋಜನೆಗಳೊಂದಿಗೆ ಜನರ ಅಭಿವೃದ್ಧಿಯನ್ನು ಮಾಡುತ್ತಿದ್ದು ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರು ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ತಿಳಿಸಿದರು.












Click it and Unblock the Notifications