Hassan JDS Ticket Row : ಕೊನೆಗೂ ಗುಟ್ಟು ಬಿಟ್ಟು ಕೊಟ್ಟ ಕುಮಾರಸ್ವಾಮಿ: ಯಾರಿಗೆ ಹಾಸನ ಟಿಕೆಟ್?
ಬಜೆಟ್ ಬಗ್ಗೆ ಚರ್ಚೆ ಮಾಡಲು ಹೋಗಲ್ಲ ಅದು ಅನವಶ್ಯಕ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಚಿಕ್ಕಮಗಳೂರು,ಫೆಬ್ರವರಿ 25: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ. ಜೆಡಿಎಸ್ ಈ ಬಾರೀ ನಮಗೆ ಸರಸ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಆದರೆ ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ಕೊಡ್ತಾರೆ ಎನ್ನುವುದೇ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಈ ಕುರಿತು ಶನಿವಾರ ಶೃಂಗೇರಿ ಶಾರದಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಕುರಿತಾಗಿ ಬಗ್ಗೆ ಚರ್ಚಿಸುವ ಸಲುವಾಗಿ ನಾಳೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರೆಲ್ಲರೂ ನನ್ನ ಕುಟುಂಬ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿ ಸೋಲಿಸ್ತೇನೆ ಎಂದಿದ್ದೆ. ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಕಾರ್ಯಕರ್ತರ ಅಭಿಮಾನಕ್ಕೆ ಚ್ಯುತಿ ಬರದಂತೆ ಟಿಕೆಟ್ ನೀಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹಾಸನ ಟಿಕೆಟ್ ಘೋಷಣೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಿನ್ನೆ (ಶುಕ್ರವಾರ) 130 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಕೆಜೆಪಿಗೆ ಹೋದಾಗ ಪ್ರಾಣ ಇರುವವರೆಗೆ ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ರು, ಈಗ ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ. ಹಿಂದಿನ ವಿಚಾರಗಳನ್ನು ಈಗ ಸ್ತಾಪ ಮಾಡಲ್ಲ. ಸಿದ್ದರಾಮಯ್ಯ ಗೆದ್ದ ಎತ್ತಿನಬಾಲ ಹಿಡಿಯಲು ಹೋಗ್ತಾರೆ ಅಂತ ನಗೆ ಹೇಳುತ್ತಾರೆ. ಅವರು ಸೋತ ಎತ್ತಿನಬಾಲ ಹಿಡಿಯಲು ಹೋಗ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದು ಚುನಾವಣೆ ಸಮಯದ ಬಜೆಟ್ ಅಷ್ಟೆ, ಕಳೆದ ಮೂರುವರೆ ವರ್ಷದ ಹಿಂದೆ ಮಾಡಿದ್ರೆ ಜನಬೆಂಬಲ ಪಡೆಯಬಹುದಿತ್ತು. ಬಜೆಟ್ ಬಗ್ಗೆ ಚರ್ಚೆ ಮಾಡಲು ಹೋಗಲ್ಲ ಅದು ಅನವಶ್ಯಕ. ಫಲಿತಾಂಶದ ನಂತರ ಈ ಕಾರ್ಯಕ್ರಮ ಘೋಷಣೆ ಗೆ ಅರ್ಥ ಬರುತ್ತದೆ ಎಂದು ಹೇಳಿದರು.

ಅಮಿತ್ ಷಾ ಇಲ್ಲಿನ ವಸ್ತು ಸ್ಥಿತಿಯ ಬಗ್ಗೆ ಮಾತನಾಡಬೇಕು. ಕರ್ನಾಟಕದಲ್ಲಿ ಜನತೆಯನ್ನು ಮೆಚ್ಚಿಸುವುದು ಸುಲಭವಲ್ಲ, ನೂರು ಸುಳ್ಳು ಹೇಳಿ ಒಂದನ್ನು ಮಾಡಲು ಹೊರಟ್ಟಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತಿವಿ ಅಂತಾ ಅಧಿಕಾರ ಕೊಟ್ರೆ ಈ ಹಿಂದೆ ಮೂರು ವರ್ಷ ಯಾವ ರೀತಿ ಸರ್ಕಾರ ಮಾಡಿದ್ದಾರೆ. ನರೇಂದ್ರ ಮೋದಿ ಶಿವಮೊಗ್ಗ ಎರ್ಪೋಟ್ ಉದ್ಘಾಟನೆ ಮಾಡುತ್ತಾರಂತೆ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಏನು? ರಾಜ್ಯದ ಜನರು ಭೂಮಿ ನೀಡಿದ್ದಾರೆ, ಕೆಲವರಿಗೆ ಇನ್ನೂ ಹಣ ಬಂದಿಲ್ಲ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ನನಗೆ ವಿಶ್ಚಾಸ ಜನತೆಯ ಬೆಂಬಲ ನೋಡಿದ್ದೇನೆ. ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇವೆ ಅಭ್ಯರ್ಥಿ ಗಳು ಸಂಘಟನೆ ಮಾಡ್ತಾ ಇದ್ದಾರೆ. ಬಿ ಟೀಂ ಅಂತಾರೇ ಈ ಬಾರಿ ಆ ಆಟ ನಡೆಯೋಲ್ಲ. ಈ ಜೆಡಿಎಸ್ 123 ಗುರಿಯಿಟ್ಟಿದ್ದೇವೆ ಅದನ್ನು ಮುಟ್ಟುತ್ತೇವೆ ಎಂದು ವಿಶ್ವಾಸ ವ್ಯಪ್ತಪಡಿಸಿದರು.












Click it and Unblock the Notifications