ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 13ರ ಕರ್ನಾಟಕ ಬಂದ್; ಯಾರ ಬೆಂಬಲ ಇದೆ, ಇಲ್ಲ

|
Google Oneindia Kannada News

Recommended Video

Karnataka Bandh : ಕರ್ನಾಟಕ ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಿದ್ದಾರೆ? | Karnataka | Oneindia Kannada

ಬೆಂಗಳೂರು, ಫೆಬ್ರವರಿ 11 : ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಫೆಬ್ರವರಿ 13ರ ಕರ್ನಾಟಕ ಬಂದ್‌ಗೆ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಹಲವು ಸಂಘಟನೆಗಳು ಬೆಂಬಲವನ್ನು ನೀಡುವುದಿಲ್ಲ ಎಂದು ಹೇಳಿವೆ.

ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. 400ಕ್ಕೂ ಅಧಿಕ ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ಘೋಷಣೆ ಮಾಡಿವೆ.

ಫೆ.13ರ ಕರ್ನಾಟಕ ಬಂದ್; 100ಕ್ಕೂ ಅಧಿಕ ಸಂಘಟನೆಗಳ ಬೆಂಬಲಫೆ.13ರ ಕರ್ನಾಟಕ ಬಂದ್; 100ಕ್ಕೂ ಅಧಿಕ ಸಂಘಟನೆಗಳ ಬೆಂಬಲ

ಓಲಾ, ಊಬರ್ ಮತ್ತು ಕೆಲವು ಆಟೋ ಚಾಲಕರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲವನ್ನು ಘೋಷಣೆ ಮಾಡಿವೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದ್ದು, ಆಟೋ, ಕ್ಯಾಬ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಫೆಬ್ರವರಿ 13ರ ಕರ್ನಾಟಕ ಬಂದ್; ನಿಮಗಿದು ತಿಳಿದಿರಲಿ ಫೆಬ್ರವರಿ 13ರ ಕರ್ನಾಟಕ ಬಂದ್; ನಿಮಗಿದು ತಿಳಿದಿರಲಿ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮೌರ್ಯ ಸರ್ಕಲ್ ಬಳಿ ನಡೆಸುತ್ತಿರುವ ಪ್ರತಿಭಟನೆ ಫೆಬ್ರವರಿ 13ರಂದು 100ನೇ ದಿನಕ್ಕೆ ಕಾಲಿಡುತ್ತಿದೆ. ಆದ್ದರಿಂದ, ಅಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಬೆಂಗಳೂರಿನಲ್ಲಿ 'ವಲಸಿಗರೇ ಕರ್ನಾಟಕ ಬಿಟ್ಟು ತೊಲಗಿ' ಹೋರಾಟ ಬೆಂಗಳೂರಿನಲ್ಲಿ 'ವಲಸಿಗರೇ ಕರ್ನಾಟಕ ಬಿಟ್ಟು ತೊಲಗಿ' ಹೋರಾಟ

ವಾಹನ ಚಾಲಕರ ಒಕ್ಕೂಟ ಬೆಂಬಲ

ವಾಹನ ಚಾಲಕರ ಒಕ್ಕೂಟ ಬೆಂಬಲ

ಫೆಬ್ರವರಿ 13ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿದೆ ಎಂದು ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟ ಹೇಳಿದೆ. "ಮಾತೃಭಾಷೆಯಲ್ಲಿ ಕಲಿತವರಿಗೆ ಸ್ಥಳೀಯವಾಗಿ ಉದ್ಯೋಗ ಸಿಗುತ್ತಿಲ್ಲ. ಆದ್ದರಿಂದ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು" ಎಂದು ಒಕ್ಕೂಟದ ಅಧ್ಯಕ್ಷ ಎಂ. ಎನ್. ವೇಣುಗೋಪಾಲ್ ಹೇಳಿದ್ದಾರೆ.

ಸರ್ವ ಸಂಘಟನೆಗಳ ಒಕ್ಕೂಟ

ಸರ್ವ ಸಂಘಟನೆಗಳ ಒಕ್ಕೂಟ

"ಫೆಬ್ರವರಿ 13ರ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿಲ್ಲ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಒತ್ತಾಯಿಸಿ ವಿವಿಧ ಭಾಗಗಳಲ್ಲಿ ಉರುಳು ಸೇವೆ ಮಾಡಲಿದ್ದೇವೆ" ಎಂದು ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಂಗೇಗೌಡ ಹೇಳಿದ್ದಾರೆ.

ಹೋಟೆಲ್‌ಗಳು ತೆರೆದಿರಲಿವೆ

ಹೋಟೆಲ್‌ಗಳು ತೆರೆದಿರಲಿವೆ

"ಕರ್ನಾಟಕ ಬಂದ್‌ಗೆ ನಮ್ಮ ಸಂಘವು ಬೆಂಬಲ ನೀಡುವುದಿಲ್ಲ. ಗ್ರಾಹಕರ ಹಿತದೃಷ್ಟಿಯಿಂದ ಹೋಟೆಲ್‌ಗಳನ್ನು ತೆರೆಯಲಾಗುತ್ತದೆ. ಎಲ್ಲಾ ಹೋಟೆಲ್ ಎಂದಿನಂತೆ ಕಾರ್ಯ ನಿರ್ವಹಿಸಲಿವೆ" ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ. ಸಿ. ರಾವ್ ಸ್ಪಷ್ಟಪಡಿಸಿದ್ದಾರೆ.

ಯಾವ ಸಂಘಟನೆಗಳ ಬೆಂಬಲ

ಯಾವ ಸಂಘಟನೆಗಳ ಬೆಂಬಲ

ಓಲಾ ಮತ್ತು ಊಬರ್ ಚಾಲಕರು ಹಾಗೂ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ, ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್, ಜೈ ಭಾರತ ಚಾಲಕರ ಸಂಘ, ಜೈ ಕರವೇ ಚಾಲಕ ಸಂಘ, ಸಾರಥಿ ಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

English summary
Bruhat Bangalore Hotels Association and Sarva Sanghatanegala Okkuta said that they will not support for February 13 Karnataka bandh called by Karnataka Sangatenegala Okkuta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X