ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಏರೋಸ್ಪೇಸ್ ಉತ್ಪಾದನೆಯನ್ನು ಹೆಚ್ಚಿಸುವ ಗುರಿ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಸೆ. 03: "ದೇಶದ ಶೇಕಡಾ 40ರಷ್ಟು ಏರೋಸ್ಪೇಸ್ ಉತ್ಪನ್ನಗಳನ್ನು ನಮ್ಮ ರಾಜ್ಯದಲ್ಲಿಯೇ ಉತ್ಪಾದಿಸುತ್ತಿದ್ದು, ಇದನ್ನು ಶೇಕಡಾ 60ಕ್ಕೆ ಏರಿಸುವುದು ನಮ್ಮ ಗುರಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಮೇರಿಕನ್ ಛೇಂಬರ್ ಆಫ್ ಕಾಮರ್ಸ್‌ ಇನ್ ಇಂಡಿಯಾ (ಆಮ್‌ಚಾಮ್) ಸಂಸ್ಥೆಯ 29ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಶುಕ್ರವಾರ ಅವರು ಮಾತನಾಡಿದ್ದಾರೆ.

"ಆಮ್‌ಚಾಮ್ ಸಂಸ್ಥೆಯೊಂದಿಗೆ ಗುರುತಿಸಿಕೊಳ್ಳುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ. ಕರ್ನಾಟಕವು ಅಮೆರಿಕಾನಂತೆಯೇ ಆಧುನಿಕ ತಂತ್ರಜ್ಞಾನದಿಂದ ಹಿಡಿದು ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಸ್ಥಾನಮಾನವನ್ನು ಹೊಂದಿದೆ. ರಾಜ್ಯ ಕೈಗಾರಿಕೋದ್ಯಮದಲ್ಲಿ ಸುದೀರ್ಘ ಇತಿಹಾಸವನ್ನು ಹೊಂದಿದೆ. ಸ್ವಾತಂತ್ರ್ಯಪೂರ್ವದಿಂದಲೂ, ಖಾಸಗಿ ವಲಯದವರು ಇಲ್ಲದ ಸಂದರ್ಭದಲ್ಲಿ ಬಿ.ಹೆಚ್.ಇ.ಎಲ್, ಹೆಚ್.ಎಂ.ಟಿ ಮುಂತಾದ ಪ್ರಮುಖ ಸಂಸ್ಥೆಗಳು ಇಲ್ಲಿದ್ದವು" ಎಂದು ಬೊಮ್ಮಾಯಿ ವಿವರಿಸಿದ್ದಾರೆ.

ಸಂಶೋಧನೆಲ್ಲಿ ಕರ್ನಾಟಕದ ಪಾತ್ರ ಪ್ರಮುಖ

ಸಂಶೋಧನೆಲ್ಲಿ ಕರ್ನಾಟಕದ ಪಾತ್ರ ಪ್ರಮುಖ

ಭಾರತ ನಿರ್ಮಾಣದಲ್ಲಿ ಕರ್ನಾಟಕ ರಾಜ್ಯ ತನ್ನದೇ ಕೊಡುಗೆ ನೀಡಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿಯೂ ಕರ್ನಾಟಕ ಪ್ರಮುಖ ಪಾತ್ರವನ್ನು ವಹಿಸಿದೆ. ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸುವ ಇಸ್ರೋ ತನ್ನ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಇಂಜಿನಿಯರಿಂಗ್ ಕಾಲೇಜುಗಳಿದ್ದು, ಐಐಟಿ, ಐಐಎಂ ಹಾಗೂ ಐಐಎಸ್ಸಿ ಮುಂತಾದ ಶ್ರೇಷ್ಠ ಕಾಲೇಜುಗಳನ್ನು ಬೆಂಗಳೂರು ಹೊಂದಿದೆ. ಇವುಗಳು ರಾಜ್ಯದ ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.

ಕರ್ನಾಟಕದೊಂದಿಗಿನ ಸಹಭಾಗಿತ್ವ ಅಮೆರಿಕಾಕ್ಕೆ ಲಾಭ!

ಕರ್ನಾಟಕದೊಂದಿಗಿನ ಸಹಭಾಗಿತ್ವ ಅಮೆರಿಕಾಕ್ಕೆ ಲಾಭ!

ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ನೀತಿ ಆಯೋಗದ ಸೂಚ್ಯಂಕದಲ್ಲಿ ಕರ್ನಾಟಕ 2019 ಹಾಗೂ 2020ರಲ್ಲಿ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ. ಅಮೆರಿಕ ಮತ್ತು ಕರ್ನಾಟಕದ ಮಧ್ಯೆ ಉತ್ತಮ ಸಂಬಂಧವಿದ್ದು, ಈ ಸಂಬಂಧವು ಸಂಸ್ಕೃತಿ ಹಾಗೂ ಚಿಂತನೆಗಳಲ್ಲಿ ನಾವೀನ್ಯತೆಯನ್ನು ತರುವಲ್ಲಿ ಸಹಕಾರಿಯಾಗಲಿದೆ. ಕರ್ನಾಟಕದೊಂದಿಗಿನ ಸಹಭಾಗಿತ್ವವು ಅಮೆರಿಕಾ ಹಾಗೂ ಕರ್ನಾಟಕಕ್ಕೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ಸವಾಲುಗಳ ಜೊತೆ ಅವಕಾಶಗಳನ್ನೂ ಒದಗಿಸಿದೆ

ಕೋವಿಡ್ ಸವಾಲುಗಳ ಜೊತೆ ಅವಕಾಶಗಳನ್ನೂ ಒದಗಿಸಿದೆ

ಕೋವಿಡ್ 19 ಸಾಂಕ್ರಾಮಿಕವು ಸವಾಲುಗಳ ಜೊತೆ ಅವಕಾಶಗಳನ್ನೂ ಒದಗಿಸಿದೆ ಎಂದ ಅವರು ಕೋವಿಡ್ ಸಂದರ್ಭದಲ್ಲಿ ನೆರವಿಗೆ ನಿಂತ ಅಮೆರಿಕ ಹಾಗೂ ಉಳಿದ ಎಲ್ಲ ಖಾಸಗಿ ವಲಯದ ಸಂಸ್ಥೆಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಮೆರಿಕಾ ಹೊಸ ತಂತ್ರಜ್ಞಾನ ಮತ್ತು ನಾವೀನ್ಯತೆಯ ಮೂಲಕ ಮನುಕುಲದ ಏಳಿಗೆಗೆ ಬದ್ಧವಾಗಿರುವುದನ್ನು ಶ್ಲಾಘಿಸಿದರು.

Recommended Video

ಅಮಿತ್‌ ಶಾ ಭೇಟಿಯಾಗದ ಬಿಎಸ್‌ವೈ! ಯಡಿಯೂರಪ್ಪರನ್ನ ಕಡೆಗಣಿಸಿತೇ ಹೈಕಮಾಂಡ್‌? | Oneindia Kannada
ಆರ್ಥಿಕತೆಯಲ್ಲಿ ಯಾವುದೇ ಚಮತ್ಕಾರ ಸಾಧ್ಯವಿಲ್ಲ

ಆರ್ಥಿಕತೆಯಲ್ಲಿ ಯಾವುದೇ ಚಮತ್ಕಾರ ಸಾಧ್ಯವಿಲ್ಲ

ಕರ್ನಾಟಕದಲ್ಲಿ ಹೂಡಿಕೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಭರವಸೆಯಿತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಆರ್ಥಿಕತೆಯಲ್ಲಿ ಯಾವುದೇ ಚಮತ್ಕಾರ ಸಾಧ್ಯವಿಲ್ಲ, ಕೇವಲ ಫಲಿತಾಂಶ ಮಾತ್ರ ಎಂದು ಅರಿತಿದ್ದು, ಜಾಗತಿಕ ಆರ್ಥಿಕತೆಯಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ಕರ್ನಾಟಕ ಶ್ರಮಿಸುತ್ತಿದೆ. ಮುಂಬರುವ ದಿನಗಳಲ್ಲಿ ಆಮ್‌ಚಾಮ್‌ನ ಸಹಕಾರದಿಂದ ನಾವೀನ್ಯತೆಯಲ್ಲಿ ಕರ್ನಾಟಕ ಹೆಚ್ಚಿನ ಸಾಧನೆ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಭಾರತದಲ್ಲಿನ ಅಮೆರಿಕ ಚೇಂಬರ್ ಆಫ್ ಕಾಮರ್ಸ್ ನ 29 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಬೆಂಗಳೂರಿನಿಂದ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳಾದ ರಮಣ ರೆಡ್ಡಿ, ಮಂಜುನಾಥ ಪ್ರಸಾದ್ ಮತ್ತು ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

English summary
"Karnataka is producing 40 per cent of aerospace products of India. Now our aim is to increase it to 60 per cent," Chief Minister Basavaraj Bommai said. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X