ʼತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿʼ
ಬೆಂಗಳೂರು, ಜೂನ್ 22: ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿ ಮುಂದುವರಿಯಬೇಕು. ಮೈಸೂರು ಪಾಲಿಕೆ ಚುನಾವಣೆ ಇರಬಹುದು, ಮುಂಬರುವ ಯಾವುದೇ ಚುನಾವಣೆ ಹೊಂದಾಣಿಕೆ ಇರಬಹುದು. ಎರಡೂ ಪಕ್ಷಗಳು ಹೊಂದಾಣಿಕೆಯಿಂದ ಹೋಗಬೇಕಿದೆ. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಸಂಸದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಒಡಕು ತರಬಾರದು. ನಮ್ಮಲ್ಲಿ ಯಾರೂ ಹೆಚ್ಚು ಕಡಿಮೆ ಎನ್ನುವ ಪ್ರಶ್ನೆ ಇಲ್ಲ. ಒಂದು ಕುಟುಂಬದ ಅಣ್ಣ ತಮ್ಮಂದಿರ ರೀತಿ ಹೋಗಬೇಕು. ಯಾರೇ ಒಗ್ಗಟ್ಟು ಮುರಿಯಲು ಮುಂದಾದರೆ ಅದನ್ನು ಕಿವಿ ಮೇಲೆ ಹಾಕಿಕೊಳ್ಳಬಾರದು ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೆಡಿಎಸ್ ಬಿಜೆಪಿಯದ್ದು ಸಹಜ ಮೈತ್ರಿ. 2018ರಲ್ಲೂ ನನಗೆ ಬಿಜೆಪಿ ಜತೆ ಸೇರಿಯೇ ಸರ್ಕಾರ ಮಾಡುವ ಆಸಕ್ತಿ ಇತ್ತು. ಈಗ ಮುಕ್ತವಾಗಿ ಎಲ್ಲಾ ವಿಷಯಗಳನ್ನು ಚರ್ಚೆ ಮಾಡುವುದಿಲ್ಲ. ಅದು ಮುಗಿದು ಹೋಗಿರುವ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆಯಬೇಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಯಡಿಯೂರಪ್ಪ ಅವರು ಎಲ್ಲೆಡೆ ಓಡಾಟ ಮಾಡಿದ್ದಾರೆ. 82ರ ವಯಸ್ಸಿನಲ್ಲಿಯೂ ಅಭ್ಯರ್ಥಿಗಳ ಗೆಲುವಿಗೆ ಓಡಾಡಿದ್ದಾರೆ. ಅವರಿಗೆ ನಾನು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಹೇಳಿದ್ದರು. ಸಿದ್ದರಾಮಯ್ಯ ಅವರು ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ಹೇಳುತ್ತಿದ್ದಾರೆ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ದೂರಿದರು.
ಈ ನಾಡಿಗೆ ಕುಮಾರಸ್ವಾಮಿ ಪರಿಚಯ ಆಗಿದ್ದು 2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚನೆ ಮಾಡಿದಾಗ. ನನಗಿಂತ ಹಿರಿಯರಾದ ಯಡಿಯೂರಪ್ಪ ಅವರು ಸಹಕಾರ ನೀಡಿದರು. ಮುಕ್ತವಾಗಿ ಅಧಿಕಾರ ನಡೆಸಲು ಬಿಟ್ಟರು.
ಆದರೆ, ಕೆಲವರ ಕುತಂತ್ರದಿಂದ ಅಧಿಕಾರ ಹಸ್ತಾಂತರ ಆಗಲಿಲ್ಲ. ಅದು ನನ್ನ ತಪ್ಪಲ್ಲ. ನಾವು ಆವತ್ತು ಅಧಿಕಾರದಲ್ಲಿ ಮುಂದುವರಿದಿದ್ದರೆ ಇವತ್ತು ಕಾಂಗ್ರೆಸ್ ಇರುತ್ತಿರಲಿಲ್ಲ. ಸಂಪೂರ್ಣ ನೆಲಕಚ್ಚಿ ಹೋಗುತ್ತಿತ್ತು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯಂತೆ HMT ಪುನಶ್ಚೇತನ
ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಕೈಗಾರಿಕೆ ಅಭಿವೃದ್ಧಿ ಬಗ್ಗೆ ದೊಡ್ಡ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಅವರ ಆತ್ಮನಿರ್ಭರ ಪರಿಕಲ್ಪನೆಯ ಮೂಲಕ ಹೆಚ್ ಎಂಟಿ ಕಂಪನಿಯನ್ನು ಪುನರುಜ್ಜೀವನಗೊಳಿಸಬಹುದು. ಪ್ರಧಾನಿಗಳ ಆಲೋಚನೆಯಂತೆ ಚಿಂತಿಸಿ ಕಂಪನಿಯ ಚೇತರಿಕೆಗೆ ಮುಂದಾಗಿ. ಅದಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತದೆ ಎಂದು ಸಚಿವರು ಹೇಳಿದರು.
ನೀವು ರಕ್ಷಣಾ ಇಲಾಖೆಗೆ, ಬಾಹ್ಯಾಕಾಶ ಯೋಜನೆಗಳಿಗೆ ಪರಿಕರಗಳನ್ನು ತಯಾರಿಸಿ ಕೊಡುತ್ತೀರಿ. ದೇಶದ ಉದ್ದಗಲಕ್ಕೂ ಕಂಪನಿಯ ಉತ್ಪಾದನಾ ಘಟಕಗಳು ಇವೆ. ಹೀಗಾಗಿ ಕಂಪನಿಯ ಕ್ಷಮತೆಯನ್ನು ಹೆಚ್ಚಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಕಂಪನಿಯು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಇದೇ ವೇಳೆ ಕಂಪನಿಯ ಅಧ್ಯಕ್ಷ ರಾಜೇಶ್ ಕೊಹ್ಲಿ, ನಷ್ಟದ ಜತೆಗೆ ಆರ್ಥಿಕ ಬಿಕ್ಕಟ್ಟು, ನ್ಯಾಯಾಲಯಗಳಲ್ಲಿ ಮೊಕದ್ದಮೆ ಇತ್ಯಾದಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಇದಕ್ಕೆ ಕೇಂದ್ರದ ನೆರವು ಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications