ರಾಜ್ಯದಲ್ಲಿ ಒಂದೂವರೆ ವರ್ಷದ ಅವಧಿಯಲ್ಲಿ 1,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ!
ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಭಾರೀ ಆಘಾತಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಕಳೆದ 15 ತಿಂಗಳ ಅವಧಿಯಲ್ಲಿ 1,800ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೇ ರೈತರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಮುಖ್ಯವಾಗಿ ಬರ, ಬೆಳೆ ಹಾನಿ ಹಾಗೂ ಅಪಾರವಾದ ಸಾಲವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರಾಜ್ಯದಲ್ಲಿ ರೈತರ ಸಾವಿನ ಸಂಖ್ಯೆಯ ಬಗ್ಗೆ ಕಂದಾಯ ಇಲಾಖೆ ದೃಢಪಡಿಸಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ರೈತರ ಸಮಸ್ಯೆ ಹೆಚ್ಚಾಗಿದೆ.
ಹೌದು ಕರ್ನಾಟಕದಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದ 27 ಜಿಲ್ಲೆಗಳಲ್ಲಿ ವಿವಿಧ ಕಾರಣಗಳಿಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದಲ್ಲಿ ತಲಾ ಇಬ್ಬರು ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಈ ವಿಚಾರವಾಗಿ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರೇ, ಮಹಾರಾಷ್ಟ್ರದ ರೈತರ ಬಗ್ಗೆ ನೀವು ಮೊಸಳೆ ಕಣ್ಣೀರು ಸುರಿಸುವುದಕ್ಕೂ ಮುನ್ನ, ನಿಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದಲ್ಲಿ ನಡೆಯುತ್ತಿರುವ ವಿನಾಶಕಾರಿ ಬೆಳವಣಿಗೆಯನ್ನು ಗಮನಿಸಿ. ಕೇವಲ 15 ತಿಂಗಳಲ್ಲಿ, 1,180 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ಇದನ್ನು ರಾಜ್ಯ ಸರ್ಕಾರವೇ ದೃಢಪಡಿಸಿದೆ. ಆದರೂ, ನೀವು ಸ್ಪಷ್ಟವಾಗಿ ಮೌನವಾಗಿದ್ದೀರಿ. ಸಂತ್ರಸ್ತ ಕುಟುಂಬಗಳಿಗೆ ಭೇಟಿ ನೀಡಿಲ್ಲ, ಈ ಬಗ್ಗೆ ನೋವಿಲ್ಲ, ಹೊಣೆಗಾರಿಕೆಗೆ ಇಲ್ಲ. ರಾಹುಲ್ ಗಾಂಧಿ ಅವರೇ ಈ ಮೌನ ಏಕೆ. ರೈತರ ಮೇಲೆ ಸಹಾನುಭೂತಿ ನಿಮ್ಮ ಪಕ್ಷದ ಆಡಳಿತವಿಲ್ಲದ ರಾಜ್ಯಗಳಿಗೆ ಮಾತ್ರ ಮೀಸಲಾಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ನಿಮ್ಮ ಸ್ವಂತ ಸರ್ಕಾರದ ಕ್ರಿಮಿನಲ್ ನಿರ್ಲಕ್ಷ್ಯವನ್ನು ಪ್ರಶ್ನಿಸುವ ಬದಲು, ನೀವು ಬೇರೆ ದಾರಿಯಲ್ಲಿ ನೋಡುತ್ತಲೇ ಇರುತ್ತೀರಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ, ಆದರೆ ನಿಮ್ಮ ಸ್ವಂತ ಮನೆಯೊಳಗಿಂದಲೇ ಅದನ್ನು ನಿರಾಕರಿಸುತ್ತೀರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಮ್ಮ ಪಕ್ಷಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಟೀಕೆಗೆ ಒಳಗಾಗುವುದಿಲ್ಲವೇ. ಕರ್ನಾಟಕದ ರೈತರ ನೋವು ನಿಮ್ಮ ಆತ್ಮಸಾಕ್ಷಿಗೆ ಕಾಣಿಸುವುದಿಲ್ಲವೇ ಎಂದು ಅವರು ಕೇಳಿದ್ದಾರೆ.
ಮುಂದುವರಿದು ನಿಜವಾದ ನಾಯಕತ್ವ ಎಂದರೆ ನಿಮ್ಮನ್ನು ನೀವೇ ಹೊಣೆಗಾರರನ್ನಾಗಿ ಮಾಡಿಕೊಳ್ಳುವುದು. ರಾಜಕೀಯ ಲಾಭಕ್ಕಾಗಿ ಇತರರ ಮೇಲೆ ದಾಳಿ ಮಾಡುವುದು ಅಲ್ಲ. ನೀವು ಭಾರತದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸುತ್ತಿದ್ದರೆ, ಪ್ರಾರಂಭಿಸಬೇಕಾದ ಸ್ಥಳ ಕರ್ನಾಟಕ. ಇಲ್ಲದಿದ್ದರೆ, ನಿಮ್ಮ ಸಹಾನುಭೂತಿ ಟೊಳ್ಳು ಎಂದಾಗುತ್ತದೆ ಎಂದಿದ್ದಾರೆ.












Click it and Unblock the Notifications