Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
ಭಾರತದಲ್ಲಿ ಚುನಾವಣೆಗಳ ಬಿಸಿ ಏರುತ್ತಲೇ ಇದೆ. ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಭರದ ಪ್ರಚಾರ ನಡೆಸಿವೆ. ದೇಶದಲ್ಲಿ ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಈ ಕ್ಷೇತ್ರದಲ್ಲಿ ಇಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕರ್ನಾಕದಲ್ಲೂ ಶುಕ್ರವಾರ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ಇದೆ ಮೊದಲ ಬಾರಿಗೆ ಒಂದು ಕೋಟಿಗೂ ಹೆಚ್ಚು ಮತದದಾರ ಸಂಖ್ಯೆ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳಿವೆ. ಬೆಂಗಳೂರು ದಕ್ಷಿಣ, ತ್ತರ, ಕೇಂದ್ರ ಹಾಗೂ ಗ್ರಾಮಾಂತರ ಕ್ಷೇತ್ರಗಳು ಸೇರಿವೆ. ಇದೇ ಮೊದಲ ಬಾರಿಗೆ ಒಂದು ಕೋಟಿಗೂ ಹೆಚ್ಚು ಮತದರಾರು ಸಂಖ್ಯೆ ದಾಖಲಾಗಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಯಾವ ಕ್ಷೇತ್ರದಲ್ಲಿ ಎಷ್ಟು?
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ 18,54,700 ಮತದಾರರು ಇದ್ದು, ಬೆಂಗಳೂರು ದಕ್ಷಿಣದಲ್ಲಿ 21,09,990 ಮತದಾರರು ಇದ್ದಾರೆ. ಇನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 22,78,339 ಮತದಾರರು ಇದ್ದು, ಬೆಂಗಳೂರು ಗ್ರಾಮಂತರದಲ್ಲಿ ಸುಮಾರು 24 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ.
ಒಂದು ಕೋಟಿ ಮತದಾರರು
2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯ ವೇಳೆ ಈ ಸಂಖ್ಯೆ 97,13,349 ಮತದಾರರು ಇದ್ದರು. ಈ ಬಾರಿ ಈ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,01,27,869 ಮತದಾರರ ಇದ್ದಾರೆ. ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ದೇಶದಲ್ಲಿ ಇದು ಎರಡನೇ ಹಂತದ್ದಾಗಿದೆ. ಕರ್ನಾಟಕ ಮೊದಲ ಹಂತದ ಮತದಾನಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ.
ಏನೆಲ್ಲಾ ವ್ಯವಸ್ಥೆ ಇದೆ?
ಮತದಾನಕ್ಕೆ 8, 984 ಮತಗಟ್ಟೆಗಳನ್ನು ತೆರೆಯಲಾಗಿದೆ. 31,173 ವಿಶೇಷಚೇತನ ಮತದಾರರು, 1,60,232 ಯುವ ಮತದಾರರು, 1,665 ಸೇವಾ ಮತದಾರರು ಮತ್ತು 2,158 ಎನ್‌ಆರ್‌ಐ ಮತದಾರು ಈ ಕ್ಷೇತ್ರದಲ್ಲಿದ್ದಾರೆ. ನಗರದಾದ್ಯಂತ ಒಟ್ಟು 102 ಚೆಕ್ ಪೋಸ್ಟ್‌ಗಳನ್ನು ಸಹ ತೆರೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಮತಗಟ್ಟೆಗಳ ಸಂಖ್ಯೆ ಎಷ್ಟು?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 8, 984 ಮತಗಟ್ಟೆಗಳು ಇದ್ದು, ಇದರಲ್ಲಿ 2003 ಸೂಕ್ಷ್ಮ, 253 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 4,492 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಒಟ್ಟು 305 ಮೈಕ್ರೋ ಅಬ್ಸರ್ವರ್‌ಗಳನ್ನು ನಿಯೋಜಿಸಲಾಗಿದೆ.
11,793 ಕೇಂದ್ರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಒಟ್ಟು 43,123 ಮತಗಟ್ಟೆ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ವಿಕಲಚೇತನರು ಮತ್ತು ಹಿರಿಯ ನಾಗರಿಕರು ಸಕ್ಷಮ್ ಸಾಫ್ಟ್‌ವೇರ್ ಮೂಲಕ ತಮ್ಮ ಹೆಸರನ್ನು ಸಾರಿಗೆಗಾಗಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಇನ್ನು 140 ಸಖಿ ಬೂತಗಳನ್ನು ತೆರೆಯಲಾಗಿದೆ.
ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ. ಇನ್ನು ದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆಗಳು ನಡೆಯಲಿದ್ದು, ಜೂನ್ ನಾಲ್ಕರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications