BPL Card: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿನವರ 10,000ಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು- ಅಸಲಿ ಕಾರಣ ತಿಳಿಯಿರಿ
BPL Card: ನಕಲಿ ದಾಖಲೆ ನಿಡಿ ಅಕ್ರಮವಾಗಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಲು ಮುಂದಾಗಿತ್ತು. ಆದರೆ ಇದೀಗ ವಿಚಿತ್ರ ಎಂಬಂತೆ ಯಾವುದೇ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿಸದಿದ್ದರೂ ಕೂಡ ಬಡತನ ರೇಖೆಗಿಂತ ಕೆಳಗಿರುವವರ 10,000ಕ್ಕೂ ಹೆಚ್ಚು ಬಿಎಪಿಎಲ್ ಕಾರ್ಡ್‌ಗಳು ರದ್ದಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರಣ ಏನು ಗೊತ್ತಾ? ಇಲ್ಲಿದೆ ಮಾಹಿತಿ
ತಾಂತ್ರಿಕ ಕಾರಣದಿಂದಾಗಿ ರಾಜ್ಯದಲ್ಲಿ 10,000ಕ್ಕೂ ಅಧಿಕ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿನ ಬಿಪಿಎಲ್ ಕಾರ್ಡ್ ರದ್ದಾಗಿವೆ.ಈ ಕುಟುಂಬಗಳು ಈಗಾಗಲೇ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ಪಡೆಯುವ ಗೃಹಲಕ್ಷ್ಮಿ ಯೋಜನೆಯಿಂದಲೂ ವಂಚಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಬಿಪಿಎಲ್ ಕಾರ್ಡ್ ರದ್ದಾಗಿರುವುದರಿಂದ 10,000 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ತಾವು ಐಟಿ, ಜಿಎಸ್‌ಟಿ ಪಾವತಿದಾರರಲ್ಲದಿದ್ದರೂ, ಆದರೂ, ಐಟಿ, ಜಿಎಸ್‌ಟಿ ಪಾವತಿದಾರರು ಎಂದು ಭಾಗ್ಯಲಕ್ಷ್ಮಿ ಹಣ ಪಾವತಿ ಮಾಡುತ್ತಿಲ್ಲ ಅಂತಾ ಅರ್ಹ ಸಾವಿರಾರು ಮಹಿಳೆಯರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿ ಸುಮಾರು 7-8 ತಿಂಗಳಾಗಿದೆ. ಆದರೂ ಕೆಲವರು ಐಟಿ, ಜಿಎಸ್‌ಟಿ ಪಾವತಿದಾರರಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದರೂ ಭಾಗ್ಯಲಕ್ಷ್ಮಿ ಹಣ ಪಾವತಿಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2,000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾದಂತಾಗಿದೆ.
ಗೃಹ ಲಕ್ಷ್ಮೀ ಯೋಜನೆಯ ನಿಯಮದ ಪ್ರಕಾರ, ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ, ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ 1.78 ಲಕ್ಷ ಮಹಿಳೆಯರು ನೋಂದಾಯಿಸಿಕೊಂಡು, 2,000 ಪಡೆಯುತ್ತಿದ್ದಂತ ಶಂಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತನಿಖೆ ಕೈಗೊಂಡು, ಪರಿಶೀಲನೆ ನಡೆಸಲಾಗಿತ್ತು. ಆದ್ದರಿಂದ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಂತಹ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ. ಅಲ್ಲದೇ, ದಾಖಲೆ ಪರಿಶೀಲನೆಗೆ ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದಲ್ಲಿ ತೆರಿಗೆ ಪಾವತಿದಾರರಾದ ಕಾರಣ 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮೀ ಹಣಕ್ಕೆ ತಡೆ ನೀಡಿ, ಬಿಗ್ ಶಾಕ್ ನೀಡಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications