ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿ ಖಾಸಗಿ ಶಾಲಾ ಶಿಕ್ಷಕರು

ಬೆಂಗಳೂರು, ಜು. 09: ಕೊರೊನಾ ವೈರಸ್ ತಂದಿಟ್ಟಿರುವ ಸಂಕಷ್ಟದಿಂದಾಗಿ ರಾಜ್ಯಾದ್ಯಂತ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 40 ಸಾವಿರ ಶಿಕ್ಷಕರು ಕೆಲಸ ಕಳೆದುಕೊಳ್ಳುವ ಸ್ಥಿತಿ ಎದುರಾಗಿದೆ. ಕೊರೊನಾ ವೈರಸ್ ಹಾಗೂ ಅದರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಸಂಪೂರ್ಣವಾಗಿ ಸ್ಥಗಿತವಾಗಿದೆ.

Recommended Video

      Susheel Gowda , ದುರಂತದ ಹಿಂದಿನ ಕಾರಣವೇನು | Filmibeat Kannada

      ಬೋಧನಾ ಶುಲ್ಕವನ್ನು ಸಂಗ್ರಹಿಸಲು ಸರ್ಕಾರ ಶಾಲೆಗಳಿಗೆ ಅನುಮತಿ ಕೊಟ್ಟಿದೆ, ಆದರೆ ಶೇಕಡಾ 2 ರಿಂದ 3ರಷ್ಟು ಪೋಷಕರು ಮಾತ್ರ ಶುಲ್ಕ ಪಾವತಿಸಲು ಮುಂದೆ ಬಂದಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ಕರ್ನಾಟಕ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಇಂಗ್ಲಿಷ್ ಮೀಡಿಯಂ ಸ್ಕೂಲ್ಸ್‌ (ಕೆಎಎಂಎಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಮಾಹಿತಿ ಕೊಟ್ಟಿದ್ದಾರೆ.

      ಪ್ರಿ-ನರ್ಸರಿ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿಲ್ಲ. ಜೊತೆಗೆ ಪೂರ್ವ ನರ್ಸರಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರವು ಆನ್‌ಲೈನ್ ತರಗತಿಗಳನ್ನು ನಿಷೇಧಿಸಿದ್ದರಿಂದ ಶಾಲೆಗಳನ್ನು ನಡೆಸುವುದು ಈಗ ಕಷ್ಟವಾಗಿದೆ ಎಂದು ಕಡಿಮೆ ಬಜೆಟ್‌ನ ಖಾಸಗಿ ಶಿಕ್ಷಣ ಸಂಸ್ಥೆಗಳು ಹೇಳುತ್ತಿವೆ. ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಮದ್ಯಮ ವರ್ಗದ ಖಾಸಗಿ ಶಾಲೆಗಳು ನಿಗದಿ ಮಾಡಿರುವ ಶುಲ್ಕ ಕೂಡ ಅತಿ ಕಡಿಮೆ ಎಂದು ಡಿ. ಶಶಿಕುಮಾರ್ ಮಾಹಿತಿ ಕೊಟ್ಟಿದ್ದಾರೆ.

      karnataka over 40000 private school teachers lose job amid lockdown due to Coronavirus

      ನಮ್ಮ ಖಾಸಗಿ ಶಾಲೆಗಳು ಪ್ರತಿ ವಿದ್ಯಾರ್ಥಿಗೆ ವರ್ಷಕ್ಕೆ 30 ಸಾವಿರ ರೂ.ಗಳಿಂದ 40 ಸಾವಿರ ರೂ. ಶುಲ್ಕ ಪಡೆಯುತ್ತಿವೆ. ಅಷ್ಟರಲ್ಲಿಯೇ ಗುಣಮಟ್ಟದ ಶಿಕ್ಷಣವನ್ನು ನೀಡುತ್ತವೆ. ಈ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ಪೋಷಕರು ಕಳೆದ ವರ್ಷದ ಶುಲ್ಕವನ್ನು ಭರಿಸಿಲ್ಲ. ಆದರೆ ಲಾಕ್‌ಡೌನ್ ಸಮಯದಲ್ಲಿ ಸತತವಾಗಿ 3 ತಿಂಗಳುಗಳ ಕಾಲ ನಾವು ಬೋಧಕ ಹಾಗೂ ಬೋಧಕೇತರ ಶಿಕ್ಷಕರಿಗೆ ವೇತನವನ್ನು ಕೊಟ್ಟಿದ್ದೇವೆ. ನಮ್ಮಲ್ಲಿದ್ದ ಸಂಪನ್ಮೂಲ ಇದೀಗ ಮುಗಿದಿದೆ. ಹೀಗಾಗಿ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಾಲರೂಪದಲ್ಲಿ 1 ಸಾವಿರ ಕೋಟಿ ರೂ.ಗಳ ಅನುದಾನವನ್ನು ಕೊಡಬೇಕು ಎಂದು ಡಿ. ಶಶಿಕುಮಾರ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

      ರಾಜ್ಯದಲ್ಲಿ 54.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಕೇವಲ 8 ಲಕ್ಷ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ.

      ಈ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ಕೊಟ್ಟಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಅವರು ಪರಿಸ್ಥಿತಿಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆ ಮತ್ತು ಸಮಸ್ಯೆ ಪರಿಹರಿಸಲು ಇಲಾಖೆ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+