ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್: ಸುಧಾಕರ್

|
Google Oneindia Kannada News

ಬೆಂಗಳೂರು, ಮೇ 20: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಜಿಲ್ಲೆಗಳಿಗೆ ಹಂಚಲಾಗುತ್ತಿದೆ. ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು.

ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ್ ಪೂರೈಕೆ ಸೇರಿದಂತೆ ಹೆಚ್ಚು ನೆರವು ನೀಡಲು ಚರ್ಚಿಸಲಾಗುವುದು. ಇದಕ್ಕಾಗಿ ತುಮಕೂರು, ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಾಗುತ್ತಿದೆ. ನಂತರ ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.

Oxygen Concentrators to districts with more cases: Minister Dr.K.Sudhakar

ಪ್ರತಿ ಜಿಲ್ಲಾಡಳಿತ, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಾಹಿತಿ ನೀಡಲಾಗುವುದು. ಎಲ್ಲಾ ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕೋರಲಾಗುವುದು. ಪಾಸಿಟಿವಿಟಿ ದರ 37-40% ಇದ್ದು, 27% ಕ್ಕೆ ಬಂದಿದೆ. ಇದನ್ನು 5% ಕ್ಕಿಂತ ಕಡಿಮೆ ಇಳಿಸುವ ಗುರಿ ಇದೆ. ಬೇರೆ ದೇಶಗಳ ಕೊರೊನಾ ಅಲೆ ಬಗ್ಗೆ ಕಾನ್ಪುರ ಐಐಟಿ ವರದಿ ನೀಡಿದ್ದು, ಈ ಬಗ್ಗೆ ಕೇಂದ್ರದ ಜೊತೆ ಚರ್ಚೆಯಾಗಿ ಸಲಹೆ ದೊರೆತಿದೆ. ಸಾವಿನ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ಅದನ್ನೂ ಕಡಿಮೆ ಮಾಡಬೇಕಿದೆ ಎಂದರು.

Recommended Video

ಒಟ್ಟು ಸೊಂಕೀತರ ಸಂಖ್ಯೆ ಎಷ್ಟು ಗೊತ್ತಾ? | Oneindia Kannada

ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಹಳ್ಳಿಗಳ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗೆ ಇದು ಅನುಕೂಲವಾಗಲಿದೆ. ಸೋಂಕಿತರ ಮನೆಗೆ ಭೇಟಿ ನೀಡಿ, ಅವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸಾಗಿಸಲು ಸಹಕಾರಿಯಾಗಲಿದೆ ಎಂದರು.

English summary
25 oxygen concentrators will be provided to each district with more number of Covid cases, said Health & Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X