ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್

|
Google Oneindia Kannada News

ಬೆಂಗಳೂರು, ಡಿ. 30: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿ ಕುಮಾರ್ ನೇಮಕವಾಗಿದ್ದಾರೆ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ನಾಳೆ ಡಿಸೆಂಬರ್ 31 ರಂದು ಸೇವೆಯಿಂದ ನಿವೃತ್ತರಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕರ್ನಾಟಕ ಕೆಡರ್‌ನ 1984ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪಿ. ರವಿಕುಮಾರ್ ಅವರು ಸದ್ಯ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೇವಾ ಹಿರಿತನದಲ್ಲಿ ಅವರನ್ನು ಮುಖ್ಯಕಾರ್ಯದರ್ಶಿ ಹುದ್ದೆಗೆ ಸರ್ಕಾರ ಆಯ್ಕೆ ಮಾಡಿದ್ದು, ಇಂದು ಡಿಸೆಂಬರ್ 30 ರಂದು ನೇಮಕ ಮಾಡಿ ಆದೇಶ ಮಾಡಿದೆ. ಟಿ.ಎಂ. ವಿಜಯ ಭಾಸ್ಕರ್ ಅವರು ಕಳೆದ 2018ರ ಡಿಸೆಂಬರ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆಗೆ ನೇಮಕವಾಗಿದ್ದರು. ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು 'ಸರ್ಕಾರದ ಸೇವೆ ಮನೆ ಬಾಗಿಲಿಗೆ' ಕಾರ್ಯಕ್ರಮದ ಮೂಲಕ ಸರ್ಕಾರದ ಕೆಲಸಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಂದಿದ್ದರು.

P Ravi Kumar appointed as new chief secretary to Karnataka government

ಸರ್ಕಾರದಿಂದ ಬೀಳ್ಕೊಡುಗೆ: ನಾಳೆ ಡಿಸೆಂಬರ್ 31ರಂದು ನಿವೃತ್ತಿಯಾಗಲಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸರ್ಕಾರದ ವತಿಯಿಂದ ಬೀಳ್ಕೊಡುಗೆ ಕೊಡಲಾಯಿತು. ವಿಧಾನಸೌಧದಲ್ಲಿ ನಡೆದ ಸರಳ ಸಬಾರಂಭದಲ್ಲಿ ನಿಮ್ಮ ನಿವೃತ್ತಿ ಜೀವ ಸಂತೋಷಮಯವಾಗಲಿರಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಜಯ ಭಾಸ್ಕರ್ ಅವರಿಗೆ ಶುಭ ಹಾರೈಸಿದರು.

P Ravi Kumar appointed as new chief secretary to Karnataka government

Recommended Video

ಬೆಂಗಳೂರು: 'ಗ್ರಾ.ಪಂ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದೆ'-ಆರ್.ಆಶೋಕ್ | Oneindia Kannada

ಸಚಿವರಾದ ಗೋವಿಂದ್ ಕಾರಜೋಳ್, ಲಕ್ಷ್ಮಣ ಸವದಿ, ಡಾ. ಸಿ.ಎಸ್. ಅಶ್ವಥ್ ನಾರಾಯಣ್, ಗೋಪಾಲಯ್ಯ, ಬಿ.ಸಿ. ಪಾಟೀಲ್, ಆನಂದ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

English summary
Senior IAS officer P Ravi Kumar is appointed as new Chief Secretary to State Government. Chief Secretary T.M. Vijayabhaskar to retire from service on December 31 Ravikumar will take over. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X