ಮೇಕೆದಾಟುಗಾಗಿ ಕಾಂಗ್ರೆಸ್ ಪಾದಯಾತ್ರೆ; ದಿನಾಂಕ ಘೋಷಣೆ

ಬೆಂಗಳೂರು, ಡಿಸೆಂಬರ್ 21; ಮೇಕೆದಾಟು ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಮೇಕೆದಾಟುವಿನಿಂದ ವಿಧಾನಸೌಧದ ತನಕ ಪಾದಯಾತ್ರೆ ನಡೆಸುವುದಾಗಿ ಘೋಷಣೆ ಮಾಡಿತ್ತು. ಜನವರಿ 9 ರಿಂದ 19ರ ತನಕ ಪಾದಯಾತ್ರೆ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಮೇಕೆದಾಟು ಯೋಜನೆ ಕುರಿತು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. "ಕಾನೂನಾತ್ಮಕ ಅಡೆತಡೆಗಳಿಲ್ಲದಿದ್ದರೂ ರಾಜ್ಯ ಬಿಜೆಪಿ ಸರ್ಕಾರದ ವಿಳಂಬ ಧೋರಣೆಯಿಂದಾಗಿ ನೆನೆಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ 19 ರ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ" ಎಂದು ತಿಳಿಸಿದ್ದಾರೆ.

"ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು, ಆಸಕ್ತರು ಇದರಲ್ಲಿ ಭಾಗವಹಿಸುವಂತೆ ವಿನಮ್ರವಾಗಿ ಮನವಿ ಮಾಡುತ್ತೇನೆ. ಮೇಕೆದಾಟು ನಮ್ಮ ಹಕ್ಕು, ನಮ್ಮ ಹಕ್ಕಿಗಾಗಿ ಹೋರಾಡೋಣ" ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

"1968ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮೇಕೆದಾಟು ಯೋಜನೆ ಜಾರಿಗೆ ಚಿಂತನೆ ಮಾಡಿತ್ತು. ಆದರೆ ಜಲ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯೋಜನೆ ಜಾರಿ ಸಾಧ್ಯವಾಗಿರಲಿಲ್ಲ. 2013 ನಾವು ಅಧಿಕಾರಕ್ಕೆ ಬಂದಮೇಲೆ ಮೇಕೆದಾಟು ಯೋಜನೆಯ ಯೋಜನಾ ವರದಿ ಸಿದ್ಧಪಡಿಸಿದ್ದೆವು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತು ಪುದುಚೇರಿ ವಿರೋಧ ವ್ಯಕ್ತಪಡಿಸುತ್ತಿವೆ. ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿದುಬರುವ ಕಾವೇರಿ ನೀರಿನ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ ಎಂಬುದು ರಾಜ್ಯಗಳ ಆರೋಪವಾಗಿದೆ. ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ತಮಿಳುನಾಡು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ, ಸುಪ್ರೀಂಕೋರ್ಟ್‌ನಲ್ಲಿಯೂ ಈ ಕುರಿತು ಅರ್ಜಿ ಸಲ್ಲಿಸಿದೆ.

ಕರ್ನಾಟಕದಲ್ಲಿ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದೆ. ಆದ್ದರಿಂದ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ಮೇಲೆ ಯೋಜನೆಯನ್ನು ಜಾರಿಗೊಳಿಸಬೇಕು ಎಂದುದ ಒತ್ತಡ ಹಾಕುತ್ತಿದೆ.

ಮೇಕೆದಾಟು ಯೋಜನೆ ಉದ್ದೇಶ

ಮೇಕೆದಾಟು ಯೋಜನೆ ಉದ್ದೇಶ

"ಪ್ರವಾಹ, ಅತಿವೃಷ್ಟಿ ಮುಂತಾದ ಕಾರಣಗಳಿಂದ ಹರಿವು ಹೆಚ್ಚಾದ ಸಂದರ್ಭದಲ್ಲಿ ಸಮುದ್ರದ ಪಾಲಾಗಿ ವ್ಯರ್ಥವಾಗುವ ನೀರನ್ನು ಸಂಗ್ರಹಿಸಿ, ಬೇಸಿಗೆ ಸಮಯದಲ್ಲಿ ಕೃಷಿ, ವಿದ್ಯುತ್ ಉತ್ಪಾದನೆ ಮುಂತಾದ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳುವುದು ಮೇಕೆದಾಟು ಯೋಜನೆಯ ಉದ್ದೇಶ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೂಡಲೇ ಯೋಜನೆ ಕೈಗೆತ್ತಿಕೊಳ್ಳಬೇಕು

ಕೂಡಲೇ ಯೋಜನೆ ಕೈಗೆತ್ತಿಕೊಳ್ಳಬೇಕು

"ಬೆಂಗಳೂರು ನಗರದ ಶೇ 30ರಷ್ಟು ಜನರಿಗೆ ಕಾವೇರಿ ನೀರಿನ ಪೂರೈಕೆ ಆಗುತ್ತಿಲ್ಲ. ಮೇಕೆದಾಟು ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುಮಾರು ಹತ್ತು ಜಿಲ್ಲೆಗಳ 2.5 ಕೋಟಿ ಜನರಿಗೆ ಅನುಕೂಲ ಆಗಲಿದೆ. ಹೀಗಾಗಿ ಕೂಡಲೇ ರಾಜ್ಯ ಬಿಜೆಪಿ ಸರ್ಕಾರ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂಬುದು ನಮ್ಮ ಆಗ್ರಹ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯೋಜನೆಗೆ ಆಕ್ಷೇಪ ಮಾಡುತ್ತಿಲ್ಲ

ಯೋಜನೆಗೆ ಆಕ್ಷೇಪ ಮಾಡುತ್ತಿಲ್ಲ

"ಹಸಿರು ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್‌ಗಳು ಯೋಜನೆ ಜಾರಿಗೆ ಆಕ್ಷೇಪ ಮಾಡುತ್ತಿಲ್ಲ. ಯೋಜನಾ ವರದಿ ಸಿದ್ಧವಾಗಿದೆ, ತಮಿಳುನಾಡಿಗೆ ಕಾನೂನಾತ್ಮಕವಾಗಿ ವಿರೋಧಿಸುವ ಹಕ್ಕು ಇಲ್ಲ, ಇಷ್ಟೆಲ್ಲಾ ಅನುಕೂಲಗಳಿದ್ದಾಗ್ಯೂ ಯೋಜನೆಯ ಅನುಷ್ಠಾನ ಆರಂಭವಾಗಿಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ

ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ

"ರಾಜ್ಯ ಬಿಜೆಪಿ ಸರ್ಕಾರ ಎಲ್ಲದಕ್ಕೂ ಕೊರೊನಾ ನೆಪ ಹೇಳಿದ್ದು ಸಾಕು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು. ಡಬಲ್ ಇಂಜಿನ್ ಸರ್ಕಾರ ಇದ್ದರೆ ಕೇಂದ್ರದಿಂದ ಹಣದ ಹೊಳೆ ಹರಿಯುತ್ತದೆ ಎಂದಿದ್ದರು, ಈಗ ಹೋಗಿ ಹಣ ತಂದು ಅಭಿವೃದ್ಧಿ ಕೆಲಸ ಮಾಡಲಿ" ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+