Anant Nag: ಅನಂತ್ ನಾಗ್, ಸೂರ್ಯ ಪ್ರಕಾಶ್‌ಗೆ ಪದ್ಮ ಭೂಷಣ
ಗಣರಾಜ್ಯೋತ್ಸವಕ್ಕೆ ಮುನ್ನ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ವಿಭೂಷಣ, ಪದಮ್ ಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 7 ಜನರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದ್ದು, 19 ಸಾಧಕರಿಗೆ ಪದ್ಮ ಭೂಷಣ ಪ್ರಶಸ್ತಿ ಸಿಕ್ಕಿದೆ. 113 ಸಾಧಕರಿಗೆ ಪದ್ಮ ಶ್ರೀ ಪ್ರಶಸ್ತಿ ಸಿಕ್ಕಿದೆ.
ಹಲವು ವರ್ಷಗಳ ಅಭಿಮಾನಿಗಳ ಆಸೆಯೊಂದು ಈ ಬಾರಿ ನೆರವೇರಿದೆ. ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ಪತ್ರಕರ್ತ ಎ ಸೂರ್ಯ ಪ್ರಕಾಶ್ ಅವರಿಗೂ ಪದ್ಮ ಭೂಷಣ ಪ್ರಶಸ್ತಿ ಸಿಕ್ಕಿದೆ.

ಅನಂತ್ ನಾಗ್‌ಗೆ ಒಲಿದ ಪ್ರಶಸ್ತಿ
ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಕಲಾ ವಿಣಾಗದಲ್ಲಿ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. 1973ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ನಾಯಕರಾಗಿ, ಪೋಷಕ ನಟರಾಗಿ ಮಿಂಚಿದ್ದು, ರಂಗಭೂಮಿಯಲ್ಲೂ ಅವರು ಕೆಲಸ ಮಾಡಿದ್ದಾರೆ.
ತಮ್ಮ ಮನೋಜ್ಞ ನಟನೆಗಾಗಿ ಆರು ಫಿಲಂ ಫೇರ್ ಮತ್ತು ಐದು ಕರ್ನಾಟಕ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆರು ಬಂಗಾಳಿ ಭಾಷೆಯ ಸಿನಿಮಾಗಳಲ್ಲೂ ಅನಂತ್ ನಾಗ್ ಅಭಿನಯಿಸಿದ್ದಾರೆ. ಜೆಎಚ್ ಪಟೇಲ್‌ರ ಸರ್ಕಾರದಲ್ಲಿ ಸಚಿವರಾಗಿ ಕೂಡ ಕೆಲಸ ಮಾಡಿದ್ದಾರೆ.
ಆರು ಮಂದಿಗೆ ಪದ್ಮ ಶ್ರೀ ಪ್ರಶಸ್ತಿ
ಇನ್ನು ಕರ್ನಾಟಕದ ಆರು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ, ಮೂರು ಗ್ರ್ಯಾಮಿ ಪ್ರಶಸ್ತಿಗಳ ವಿಜೇತ ರಿಕ್ಕಿ ಕೇಜ್ ಅವರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ವೈದ್ಯರಾದ ವಿಜಯಲಕ್ಷ್ಮಿ ದೇಶಮನೆ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪದ್ಮ ಶ್ರೀ ಪ್ರಶಸ್ತಿ ನೀಡಲಾಗಿದೆ. ಉದ್ಯಮಿ ಪ್ರಶಾಂತ್ ಪ್ರಕಾಶ್, ಹಾಸನ್ ರಘು, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ ಅವರಿಗೆ ಪದ್ಮಶ್ರೀ ಒಲಿದಿದೆ.












Click it and Unblock the Notifications