SL Bhairappa: ಕನ್ನಡದ ಖ್ಯಾತ ಬರಹಗಾರ ಎಸ್.ಎಲ್. ಭೈರಪ್ಪ ಅಂತಿಮ ದರ್ಶನಕ್ಕೆ ಸಿದ್ಧತೆ
ಕನ್ನಡ ಸಾಹಿತ್ಯ ಲೋಕ ಕಂಡ ಅದ್ವಿತೀಯ ಬರಹಗಾರ, ಸಾಗರದಷ್ಟು ಓದುಗರ ಬಳಗವನ್ನೇ ತಮ್ಮತ್ತ ಸೆಳೆದುಕೊಂಡಿದ್ದ ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಕನ್ನಡಿಗರನ್ನು ಅಗಲಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಕನ್ನಡ ಸಾಹಿತ್ಯ ಲೋಕ ಮಾತ್ರವಲ್ಲ ಭಾರತದ ಮೂಲೆ ಮೂಲೆಯಲ್ಲೂ ಈಗ ಸಂತಾಪ ಸೂಚಿಸಲಾಗುತ್ತಿದೆ. ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ತುಂಬಲಾರದ ನಷ್ಟ ಎಂದು ಓದುಗರು ಬೇಸರ ಹೊರ ಹಾಕುತ್ತಿದ್ದಾರೆ. ಈ ಸಮಯದಲ್ಲೇ ಕನ್ನಡದ ಖ್ಯಾತ ಬರಹಗಾರ ಎಸ್.ಎಲ್. ಭೈರಪ್ಪ ಅಂತಿಮ ದರ್ಶನಕ್ಕೆ ಸಿದ್ಧತೆ ಸಾಗಿದೆ.
ಕನ್ನಡ ಸಾಹಿತಿಗಳಾದ ಡಾ. ಎಸ್.ಎಲ್. ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಡಳಿತ ಎಸ್.ಎಲ್. ಭೈರಪ್ಪ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಿದೆ. ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ತನಕ ದಿವಂಗತ ಡಾ. ಎಸ್.ಎಲ್. ಭೈರಪ್ಪ ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಎಸ್.ಎಲ್. ಭೈರಪ್ಪ ಅವರ ಅಂತಿಮ ದರ್ಶನ ಪಡೆಯಲು ಬರುವ ಸಾರ್ವಜನಿಕರು ಹಾಗೂ ಓದುಗರು ಶಾಂತಿಯುತವಾಗಿ ಬಂದು ಅಂತಿಮ ದರ್ಶನ ಪಡೆದುಕೊಳ್ಳಲು ಮನವಿ ಮಾಡಿದ್ದಾರೆ ಬೆಂಗಳೂರು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು.

ಪಿಎಂ & ಸಿಎಂ ಸಂತಾಪ
ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರು ಸಂಪಾದಿಸಿದ್ದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿಗಳ ಪೈಕಿ ಒಂದಾಗಿರುವ ಪದ್ಮಭೂಷಣ ಪ್ರಶಸ್ತಿಯೂ ಒಲಿದಿತ್ತು. ಪಿಎಂ ನರೇಂದ್ರ ಮೋದಿ & ಸಿಎಂ ಸಿದ್ದರಾಮಯ್ಯ ಈಗ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಗಣ್ಯರು ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಹಾಗೇ ಈ ನಷ್ಟವನ್ನು ಕನ್ನಡ ಸಾಹಿತ್ಯ ಲೋಕ ಭರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ & ಸಿಎಂ ಸಿದ್ದರಾಮಯ್ಯ ವಿಶೇಷ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ವಯೋಸಹಜ ಕಾಯಿಲೆ ಹಿನ್ನೆಲೆ ನಿಧನ
94 ವರ್ಷ ವಯಸ್ಸಿನ ಅವರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿತ್ತು, ಹೀಗಾಗಿ ವಯೋಸಹಜ ಕಾಯಿಲೆ ಹಿನ್ನೆಲೆ ಅವರು ಚಿಕಿತ್ಸೆಯನ್ನ ಪಡೆಯುತ್ತಿದ್ದರು. ಹೀಗಿದ್ದಾಗ ಮೈಸೂರು ಬಿಟ್ಟು ಬೆಂಗಳೂರಲ್ಲಿ ವಾಸವಾಗಿದ್ದರು ಸಾಹಿತಿ ಎಸ್.ಎಲ್. ಭೈರಪ್ಪ ಅವರು. ಆರೋಗ್ಯ ಚೇತರಿಸಿಕೊಳ್ಳುವ ನಿರೀಕ್ಷೆ ಕೂಡ ಮನೆಮಾಡಿತ್ತು. ಆದರೆ ಈಗ ಅವರ ಅಗಲಿಕೆ ಸುದ್ದಿ ಎಲ್ಲೆಲ್ಲೂ ಭಾರಿ ನೋವನ್ನ ತರಿಸಿದೆ. ಇದೇ ಸಮಯದಲ್ಲಿ ಸಿಎಂ & ಪಿಎಂ ಕೂಡ ಕಂಬನಿ ಮಿಡಿದಿದ್ದಾರೆ












Click it and Unblock the Notifications