SL Bhairappa: ಕನ್ನಡದ ಖ್ಯಾತ ಬರಹಗಾರ ಎಸ್.ಎಲ್. ಭೈರಪ್ಪ ಇನ್ನಿಲ್ಲ...
ಕನ್ನಡ ಸಿನಿಮಾ ರಂಗದಲ್ಲಿ ಸಾಲು ಸಾಲು ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಆತಂಕ & ಭಯದಲ್ಲೇ ಇರುವಾಗ ಸಾಹಿತ್ಯ ಲೋಕಕ್ಕೂ ಇದೀಗ ಸಾವಿನ ಕಂಟಕ ಎದುರಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಬರೋಬ್ಬರಿ 3,000 ವರ್ಷಗಳ ಇತಿಹಾಸ ಇದ್ದು, ಕನ್ನಡಿಗರು ತಮ್ಮ ಸಾಹಿತ್ಯ ರಚನೆಗೆ ಜಗತ್ತಿನಾದ್ಯಂತ ಖ್ಯಾತಿ ಗಳಿಸಿದ್ದಾರೆ. ಜಗತ್ತಿನ ಲಿಪಿಗಳ ರಾಣಿ ಅಂತಾ ಕರೆಸಿಕೊಳ್ಳುವ ಕನ್ನಡ ಭಾಷೆಯಲ್ಲಿ ತಮ್ಮದೇ ಶೈಲಿಯ ಬರಹಗಳ ಮೂಲಕ ಹೆಸರು & ಖ್ಯಾತಿ ಗಳಿಸಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ಇಂದು ಆಘಾತವೇ ಎದುರಾಗಿದೆ...
ಹೌದು, ಜ್ಞಾನಪೀಠ ಪ್ರಶಸ್ತಿಯೇ ಇರಲಿ ಅಥವಾ ಸಾಹಿತ್ಯಕ್ಕೆ ಸಿಗುವ ಇನ್ಯಾವುದೇ ಅವಾರ್ಡ್ ಇರಲಿ ಅಲ್ಲಿ ಕನ್ನಡಿಗರು ಸದ್ದು ಮಾಡುವುದು ಖಂಡಿತ. ಅದರಲ್ಲೂ ಕನ್ನಡ ಸಾಹಿತ್ಯವನ್ನು ಪರಭಾಷಿಕರು ಕೂಡ ತಲೆಬಾಗಿ ಒಪ್ಪಿಕೊಳ್ಳುತ್ತಾರೆ. ಕನ್ನಡಿಗರ ಸಾಹಿತ್ಯ ಅಷ್ಟೊಂದು ಹೆಸರು ಮಾಡಿದ್ದು, ಜಗತ್ತಿನ ಮೂಲೆ ಮೂಲೆಗೂ ಹಬ್ಬುತ್ತಿದೆ. ಯುರೋಪ್, ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿಮಾನಿಗಳು ಇದ್ದಾರೆ. ಆದರೆ ಇಂತಹ ಮಹಾನ್ ಸಾಹಿತ್ಯ ಭಂಡಾರ ಹೊಂದಿರುವ ಕನ್ನಡ ಭಾಷಾ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕಹಿ ಘಟನೆಯೂ ಇಂದು ಸಂಭವಿಸಿದೆ...

ಕನ್ನಡದ ಖ್ಯಾತ ಬರಹಗಾರ ಇನ್ನಿಲ್ಲ...
ಹೌದು, ಪದ್ಮಭೂಷಣ ಪ್ರಶಸ್ತಿ ವಿಜೇತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಂದು ಕನ್ನಡಿಗರನ್ನು ಬಿಟ್ಟು ಹೋಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಆಸ್ಪತ್ರೆಯಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಕೊನೆಯುಸಿರು ಎಳೆದಿದ್ದಾರೆ. ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿಯೇ ಕಳೆದ 3 ತಿಂಗಳಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅವರೀಗ ಚಿಕಿತ್ಸೆ ಫಲಿಸದೆ ತಮ್ಮ 94ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸುದ್ದಿ ಕನ್ನಡ ಸಾಹಿತ್ಯ ಲೋಕದಲ್ಲಿ ಮಾತ್ರವಲ್ಲ ಇಡೀ ಕರ್ನಾಟಕದಲ್ಲಿ ನೋವಿನ ವಾತಾವರಣ ಸೃಷ್ಟಿಸಿದೆ.
ಪಿಎಂ ಮೋದಿ & ಸಿಎಂ ಸಿದ್ದರಾಮಯ್ಯ...
ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇನ್ನಿಲ್ಲ ಎಂಬ ಸುದ್ದಿ ದೇಶಾದ್ಯಂತ ಭಾರಿ ನೋವು ತರಿಸಿದೆ. ಓದುಗರಿಗೆ ಮಾತ್ರವಲ್ಲದೆ ರಾಜಕೀಯ ನಾಯಕರಿಗೂ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಷ್ಟವಾಗುತ್ತಿದ್ದರು. ತಮ್ಮ ನೇರ ನುಡಿಗಳಿಂದಲೂ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಹೆಸರಾಗಿದ್ದರು. ಆದರೆ ಇದೀಗ ಎಸ್.ಎಲ್. ಭೈರಪ್ಪ ಅವರ ನಿಧನದ ಸುದ್ದಿಯು ಸಂಚಲನ ಸೃಷ್ಟಿಸಿದೆ. ಪಿಎಂ ನರೇಂದ್ರ ಮೋದಿ ಅವರು & ಸಿಎಂ ಸಿದ್ದರಾಮಯ್ಯ ಅವರು ಇದೀಗ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಗಣ್ಯರು ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ನಷ್ಟವನ್ನು ಕನ್ನಡ ಸಾಹಿತ್ಯ ಲೋಕ ಭರಿಸುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications