ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 03: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ನಿವೃತ್ತ ನ್ಯಾ. ನಾಗಮೋಹನದಾಸ್‌ ನೇತೃತ್ವದ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಒಪ್ಪಿಗೆ ಪಡೆದರೆ ಲಿಂಗಾಯತ ಎಂಬುದು ಸ್ವತಂತ್ರ ಧರ್ಮವಾಗಲಿದೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಲಿಂಗಾಯತ/ವೀರಶೈವ ಮತದಾರರು ಈಗ ಯಾವ ರೀತಿ ನಿಲುವು ಹೊಂದುತ್ತಾರೆ ಎಂಬುದು ಗಮನಾರ್ಹವಾಗಲಿದೆ.

ವೀರಶೈವ ಒಂದು ವ್ರತ, ಲಿಂಗಾಯತ ಸ್ವತಂತ್ರ ಧರ್ಮ!ವೀರಶೈವ ಒಂದು ವ್ರತ, ಲಿಂಗಾಯತ ಸ್ವತಂತ್ರ ಧರ್ಮ!

ನಿವೃತ್ತ ನ್ಯಾ. ನಾಗಮೋಹನದಾಸ್‌ ನೇತೃತ್ವದ ತಜ್ಞರ ಸಮಿತಿ 150 ಪುಟಗಳ ವರದಿಯಲ್ಲಿ ಕ್ರಾಂತಿಕಾರಿ ಅಣ್ಣ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಹಿಂದೂ ಧರ್ಮಕ್ಕಿಂತ ವಿಭಿನ್ನ ಸಂಸ್ಕೃತಿ, ಪರಂಪರೆ ಹಾಗೂ ಆಚರಣೆಗಳನ್ನು ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. 2011ರ ಜಾತಿ ಗಣತಿ ಪ್ರಕಾರ ಕರ್ನಾಟಕದಲ್ಲಿ ಲಿಂಗಾಯತರ ಸಂಖ್ಯೆ ಶೇ 9ರಷ್ಟಿದೆ.

Panel recommend for separate religion tag to Lingayat faith

ಜೈನ, ಬೌದ್ಧ, ಮುಸ್ಲಿಂ, ಸಿಖ್‌ ಧರ್ಮಗಳಂತೆ ಪ್ರತ್ಯೇಕ ಧರ್ಮವಾಗುವ ಎಲ್ಲ ಅರ್ಹತೆಗಳೂ ಲಿಂಗಾಯತಕ್ಕಿದೆ ಎಂದು ಹೇಳಲಾಗಿದೆ. ವೀರಶೈವ ಪರಂಪರೆಯಡಿ ಗುರುತಿಸಿಕೊಂಡಿರುವ ಸಮುದಾಯದವರು ಈ ಧರ್ಮದ ಪರಿಧಿಯೊಳಗೆ ಸೇರಿಕೊಳ್ಳಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ವೀರಶೈವರು ಯಾರು? ಲಿಂಗಾಯತರು ಯಾರು? (ಒಂದು ವಿಚಾರ ಮಂಥನ) ವೀರಶೈವರು ಯಾರು? ಲಿಂಗಾಯತರು ಯಾರು? (ಒಂದು ವಿಚಾರ ಮಂಥನ)

ಆದರೆ, ಎಸ್‌.ಎಂ. ಜಾಮದಾರ ನೇತೃತ್ವದ ಜಾಗತಿಕ ಲಿಂಗಾಯತ ಮಹಾಸಭಾ, ಮಾತೆ ಮಹಾದೇವಿ ನೇತೃತ್ವದ ರಾಷ್ಟ್ರೀಯ ಬಸವದಳ, ಸಚಿವ ವಿನಯ ಕುಲಕರ್ಣಿ ನೇತೃತ್ವದ ರಾಷ್ಟ್ರೀಯ ಬಸವ ಸೇನೆ ಮತ್ತಿತರ ಸಂಘಟನೆಗಳು ವೀರಶೈವರನ್ನು ಹೊರಗಿಟ್ಟು ಲಿಂಗಾಯತಕ್ಕೆ ಸೀಮಿತಗೊಳಿಸಿ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲು ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

 ಲಿಂಗಾಯತ vs ವೀರಶೈವ : ಎರಡೂ ಅಪ್ಪಟ ಜಂಗಮ ತತ್ವ ಲಿಂಗಾಯತ vs ವೀರಶೈವ : ಎರಡೂ ಅಪ್ಪಟ ಜಂಗಮ ತತ್ವ

English summary
An expert committee headed by retired High Court jugde Justice N S Nagamohan Das is said to have recommended according a separate religion status to the Lingayat faith.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X