ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೃತ್ತಿಪರ ಕೋರ್ಸ್‌ಗಳ ಶುಲ್ಕ ಶೇ.8ರಷ್ಟು ಹೆಚ್ಚಳಕ್ಕೆ ಸಮಿತಿ ಅಸ್ತು

By Nayana
|
Google Oneindia Kannada News

ಬೆಂಗಳೂರು, ಜೂನ್ 22: ಸುಪ್ರೀಂಕೋರ್ಟ್‌ ಆದೇಶನ್ವಯ ಖಾಸಗಿ ವೃತ್ತಿಪರ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನು ಶೇ.8ರಷ್ಟು ಹೆಚ್ಚಳ ಮಾಡುವಂತೆ ನ್ಯಾ. ಡಿ.ವಿ. ಶೈಲೇಂದ್ರ ಕುಮಾರ್ ನೇತೃತ್ವದ ಶುಲ್ಕ ನಿಯಂತ್ರಣಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಸುಪ್ರೀಂಕೋರ್ಟ್‌ ಆದೇಶದ ಅನ್ವಯ ಪ್ರತಿ ವರ್ಷ ಶೇ.8ರಷ್ಟು ಶುಲ್ಕ ಮಾತ್ರ ಹೆಚ್ಚಳ ಮಾಡಬೇಕು ಎಂಬ ನಿರ್ದೇಶನವಿದೆ, ಅದರ ಅನ್ವಯ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಕಳೆದ ವರ್ಷದ ಶುಲ್ಕ ಪರಿಶೀಲಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಖಾಸಗಿ ಎಂಜಿನಿಯರಿಂಗ್ ಕಾಲೇಜು ಶುಲ್ಕ ಶೇ.8ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಖಾಸಗಿ ಎಂಜಿನಿಯರಿಂಗ್ ಕಾಲೇಜು ಶುಲ್ಕ ಶೇ.8ರಷ್ಟು ಹೆಚ್ಚಳಕ್ಕೆ ಶಿಫಾರಸ್ಸು

ಎಲ್ಲಾ ರೀತಿಯ ಶುಲ್ಕಗಳನ್ನು ಪರಿಶೀಲಿಸಿದ ಬಳಿಕ ಸಮಿತಿಯಲ್ಲಿ ಚರ್ಚೆ ನಡೆಸಿ ಶುಲ್ಕ ನಿಗದಿ ಮಾಡಲಾಗಿದೆ. ಖಾಸಗಿ ಕಾಲೇಜುಗಳು ಸಮಿತಿ ನಿಗದಿಪಡಿಸಿದ ಹಣಕ್ಕಿಂತ ಕಡಿಮೆ ಸುಲ್ಕ ಪಡೆದರೆ ಸಮಸ್ಯೆ ಇರುವುದಿಲ್ಲ. ಆದರೆ ಹೆಚ್ಚುವರಿ ಶುಲ್ಕ ಪಡೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ದೂರು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

Panel suggests 8 percent hike in professional courses fees

ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರತಿ ವರ್ಷಕ್ಕೆ 75 ಸಾವಿರದಿಂದ 4.45 ಲಕ್ಷ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 3ಲಕ್ಷದಿಂದ 19.3 ಲಕ್ಷ ಹಾಗೂ ವೈದ್ಯಕೀಯ ಕೋರ್ಸ್‌ಗಳಿಗೆ 9.8 ಲಕ್ಷದಿಂದ 44.4 ಲಕ್ಷದವರೆಗೂ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಬಂದಿತ್ತು. ಆದರೆ ಈ ಎಲ್ಲಾ ಬೇಡಿಕೆಗಳನ್ನು ತಳ್ಳಿ ಹಾಕಿದ್ದು ಹೊಸ ಶುಲ್ಕ ನಿಗದಿಮಾಡಲಾಗಿದೆ ಎಂದರು.

ಸ್ಥಳೀಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಶುಲ್ಕದ 10 ಪಟ್ಟು ಹೆಚ್ಚು ಶುಲ್ಕವನ್ನು ಅನಿವಾಸಿ ಭಾರತೀಯರಿಗೆ ನಿಗದಿ ಮಾಡಲಾಗಿದೆ. ಈ ಮೊತ್ತದಲ್ಲಿ 9 ಪಟ್ಟನ್ನು ಪ್ರತ್ಯೇಕ ಬ್ಯಾಂಕ್ ಖಾತೆಯಲ್ಲಿಟ್ಟು, ಹಿಂದುಳಿದ, ಪರಿಶಿಷ್ಟ ಜಾತಿ ಮತ್ತುಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಲು ಬಳಕೆ ಮಾಡಿಕೊಳ್ಳಬೇಕು ಎಂದು ನಿಯಮವಿದೆ ಎಂದರು.

English summary
Committee on professional courses fees regulation has suggested eight percent fees hike for this academic year according to supreme court detection said panel head justice Shailendra kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X