Darshan: ʼದರ್ಶನ್‌ಗೆ ಊಟ ಕೊಡದೆ ಸಾಯಿಸೋಕಾಗುತ್ತಾ?ʼ
ಬೆಂಗಳೂರು, ಜೂನ್ 12: ರಾಜ್ಯಾದ್ಯಂತ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಆರೋಪಿಗಳು ಜೈಲು ಸೇರಿದ್ದು, ಆರೋಪಿಗಳಿಗೆ ಪೊಲೀಸ್ ಕಸ್ಟಡಿಯಲ್ಲಿ ಬಿರಿಯಾನಿ ಊಟ ತಂದುಕೊಟ್ಟಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ದರ್ಶನ್ ಸೇರಿದಂತೆ ಹಲವರುಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೀಗಿರುವಾಗ ಪೊಲೀಸ್ ಕಸ್ಟಡಿಯಲ್ಲಿ ಇರುವ ಆರೋಪಿಗಳಿಗೆ ಹೋಟೆಲ್‌ನಿಂದ ಬಿರಿಯಾನಿ ಊಟ ತಂದು ಕೊಟ್ಟಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಯಮಾಡಿ, ಆರೋಪಿಗಳಿಗೆ ಕಸ್ಟಡಿಯಲ್ಲಿ ಊಟ ಕೊಡದೆ ಸಾಯಿಸೋಕಾಗುತ್ತಾ ಎಂದು ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿಲ್ಲ, ಊಟ ಇಲ್ಲದೆ ಸಾಯಿಸುವುದಕ್ಕೆ ಆಗಲ್ವಲ್ಲ. ಊಟ ತರಿಸಿ ಕೊಡುತ್ತಾರೆ . ಅದರಲ್ಲಿ ಬಿರಿಯಾನಿ ತರಿಸಿಕೊಟ್ರಾ..? ಚಿಕನ್ ತರಿಸಿಕೊಟ್ರಾ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ದರ್ಶನ್ ಅವರು ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ, ಅರೆಸ್ಟ್ ಮಾಡಿದ್ದಾರೆ, ತನಿಖೆ ಮಾಡ್ತಿದ್ದಾರೆ, ತನಿಖೆ ಯಲ್ಲಿ ಏನ್ ವಿಚಾರ ಬರುತ್ತೋ ಅದರ ಮೇಲೆ ಪೊಲೀಸರು ಕ್ರಮ ತಗೊಳ್ತಾರೆ. ಕಾನೂನು ಎಲ್ಲರಿಗೂ ಒಂದೇ, ಪರಮೇಶ್ವರ್ ಗೂ ಒಂದೇ, ದರ್ಶನ್ ಗೂ ಒಂದೇ. ಕಾನೂನು ಯಾರು ಕೈ ಗೆತ್ತಿ ಕೊಳ್ಳಬಾರದು
ಅ ಹುಡುಗ ರೇಣುಕಸ್ವಾಮಿ, ಅವರ ಶ್ರೀಮತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ್ದ. ಅದರ ಬಗ್ಗೆ ಅವ್ರು ದೂರು ಕೊಡಬಹುದಿತ್ತು, ಆಮೇಲೆ ಪೊಲೀಸರು ತಕ್ಷಣ ಕ್ರಮ ತಗೊಳ್ತಿದ್ರು. ಅವರನ್ನು ಕರೆದುಕೊಂಡು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ತನಿಖೆ ಮಾಡ್ತಿದ್ದಾರೆ, ಕಾನೂನಿನ ರೀತಿಯಲ್ಲಿ ಏನು ಕ್ರಮ ತಗೊಬೇಕೋ ಅದನ್ನು ಪೊಲೀಸರು ತೆಗೆದುಕೊಳ್ಳುತ್ತದೆ ಎಂದರು.
ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಪೋರ್ಟಲ್ ಅರ್ಜಿ ಪ್ರಕಾರ ಆಗುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಶಿಸ್ತು ಬದ್ಧವಾಗಿ ನಿಯಮದ ಚೌಕಟ್ಟಿನಲ್ಲಿ ನಡೆಯಬೇಕಾಗುತ್ತದೆ ಎಂದು ಹೇಳಿದರು. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಮಾಡಿದ್ದಾರೆ. ಅದನ್ನು ಮೀರಿ ವರ್ಗಾವಣೆ ಮಾಡಲು ಬರುವುದಿಲ್ಲ. ಅಕಾಸ್ಮತ್ ಮಾಡಬೇಕಾದರೆ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ ಎಂದರು.
ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದು ವರ್ಷದ ನಿಯಮವಿತ್ತು. ಸದನದಲ್ಲಿ ಕಾನೂನು ಬದಕಾಯಿಸಿ ಎರಡು ವರ್ಷ ಮಾಡಲಾಗಿ್ಎ. ಈ ರೀತಿ ಕಾನೂನು ಬದಲಾವಣೆ ಮಾಡಬಹುದು. ಇರುವಂತಹ ನಿಯಮ ಉಲ್ಲಂಘನೆ ಮಾಡಿ, ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ. ಡಿಜಿ ಅವರಾಗಲಿ, ನಾನು ಅಥವಾ ಮತ್ತೊಬ್ಬರು ಇರಬಹುದು. ಕಾನೂನು ನಿಯಮದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ವರ್ಗವಾಣೆಗೆ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವುದಕ್ಕೆ ಏನಾದರು ಸಣ್ಣಪುಟ್ಟ ತೊಂದರೆಗಳು ಸಿಬ್ಬಂದಿಗಳಿಗೆ ಆಗಿದ್ದರೆ ಸರಿಪಡಿಸುವುದಕ್ಕೆ ಸೂಚನೆ ನೀಡುಡುತ್ತೇನೆ. ಅವರಿಗೆ ಕುಟುಂಬಗಳಿವೆ. ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕಾಗುತ್ತದೆ ಎಂದು ಹೇಳಿದರು.
545 ಪಿಎಸ್ಐ ಹುದ್ದೆಗಳ ನೇಮಕಾತಿ ಕುರಿತು, ಎಲ್ಲರು ಕೋರ್ಟ್‌ಗಳಿಗೆ ಹೋಗಿ ಆದೇಶಗಳನ್ನು ತಂದಾಗ, ನಮ್ಮ ಕೈ ಕಟ್ಟಿ ಹಾಕಿದಂತಾಗುತ್ತದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಆದೇಶಗಳನ್ನು ಕೊಡಬೇಕು ಎಂಬ ಉದ್ದೇಶದಿಂದ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದೇವೆ. ಈ ಹಂತದಲ್ಲಿಯೇ ಯಾರೋ ಕೋರ್ಟ್‌ಗೆ ಹೋಗುತ್ತಾರೆ. ಇದನ್ನು ಮುಗಿಸಿದರೆ ಮುಂದಿನ ನೇಮಕಾತಿಗಳಿಗೆ ಅನುಕೂಲವಾಗುತ್ತದೆ. 545 ಹುದ್ದೆಗಳ ನೇಮಕಾತಿಯನ್ನು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.












Click it and Unblock the Notifications