ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮನ್ವಯ ಸಮಿತಿಯಲ್ಲಿ ನಿರ್ಧಾರ

By Nayana
|
Google Oneindia Kannada News

ಬೆಂಗಳೂರು, ಜೂನ್‌ 29: ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡು ಪ್ರತಿ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಗಿದ್ದು, ಸಮನ್ವಯ ಸಮಿತಿ ಮುಂದೆ ಮಂಡಿಸಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತಿಳಿಸಿದರು.

ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರಚಿಸಲು ಸಮಿತಿ ರಚಿಸಲಾಗಿತ್ತು.‌

ಸಮ್ಮಿಶ್ರ ಸರ್ಕಾರದ ಕನಿಷ್ಠ ಕಾರ್ಯಕ್ರಮ ಜೂನ್‌ 29ರಂದು ಪ್ರಕಟಸಮ್ಮಿಶ್ರ ಸರ್ಕಾರದ ಕನಿಷ್ಠ ಕಾರ್ಯಕ್ರಮ ಜೂನ್‌ 29ರಂದು ಪ್ರಕಟ

ವೀರಪ್ಪ ಮೊಯಿಲಿ ಅವರು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡು ಪ್ರತಿ ನೀಡಿದ್ದು ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಪ್ರತಿಯಲ್ಲಿರುವ ಅನೇಕ ವಿಷಯಗಳ ಬಗ್ಗೆ ಪರಿಶೀಲನೆ ಮಾಡಿದ್ದು, ಹಲವು ಸಲಹೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

Parameshwar says CMP will declare in coordination committee only

ಈ ಎಲ್ಲ ಸಲಹೆ ಹಾಗೂ ಅಭಿಪ್ರಾಯಗಳನ್ನು ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ. ಬಳಿಕ ಇಲ್ಲಿ ವ್ಯಕ್ತವಾದ ಸಲಹೆಗಳನ್ನು ಸಮನ್ವಯ ಸಮಿತಿ ಮುಂದಿಟ್ಟು ಚರ್ಚಿಸಿ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇಲ್ಲಿ ನಿರ್ಧಾರವಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಜೆಟೆನಲ್ಲಿ ಅನುದಾನ ಮೀಸಲಿಡಲಾಗುತ್ತದೆ ಎಂದರು.

ಹಿಂದಿನ ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುವುದಾಗಿ ಹಿಂದಿನ‌ ಸಮನ್ವಯ ಸಮಿತಿಯಲ್ಲೇ ಹೇಳಲಾಗಿತ್ತು. ಅಂತೆಯೇ ಮುಂದುವರೆಸಲಿದ್ದೇವೆ ಎಂದರು. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಸದಸ್ಯರಾದ ಆರ್.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

English summary
Deputy chief minister Dr. G. Parameshwar said that the draft committee has prepared Common Minimum Program but yet to be coordination committee will declare the same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X