Namma Metro: ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ , ಅರ್ಬನ್ ರೈಲು: ಮಾಹಿತಿ ತಿಳಿಯಿರಿ

ಬೆಂಗಳೂರು, ಜೂನ್ 9 : ಬೆಂಗಳೂರು ನಮ್ಮ ಮೆಟ್ರೋ ಜಾಲ ವಿಸ್ತರಣೆ ಮಾಡುತ್ತಿರುವ BMRCL ಇದೇ ಮೊದಲ ಬಾರಿಗೆ ಅಂತರ ಜಿಲ್ಲೆಯ ಸಂಪರ್ಕವನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಮೂಲಕ ನಮ್ಮ ಮೆಟ್ರೋ ಯೋಜನೆಗಳ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ಹಾಗೂ ಅರ್ಬನ್‌ ರೈಲು ಕುರಿತು ಮಹತ್ವದ ಮಾಹಿತಿಯನ್ನ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ನೀಡಿದ್ದಾರೆ.

ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಸಚಿವ ವಿ.ಸೋಮಣ್ಣ ಮಾತನಾಡುತ್ತೇನೆ. ತುಮಕೂರಿಗೆ ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಅವರು ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ. ಎರಡು ಯೋಜನೆಗಳು ಆದರೆ ತಪ್ಪಿಲಿ ಎಂದರು.

Parameshwara Gave Important Information About Metro And Urban Rail For Tumkur

ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. 20 ಸಾವಿರ ಎಕರೆಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ.‌ ಬೆಂಗಳೂರಿಗೆ ತುಮಕೂರು 70 ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸುವ ಕುರಿತಂತೆ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ. ಕೇಂದ್ರದ ಸಚಿವರಾದ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು. ಕೇಂದ್ರದ ಭೂಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರಿಗೆ‌ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.

ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಆಗಬೇಕಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲ್ಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು. ತುಮಕೂರು ನಗರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಹಣ ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು. ಅಲ್ಲದೇ ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ‌. ಸಭೆ ಕರೆಯಬೇಕು ಎಂದು ಹೇಳಿದ್ದಾರೆ‌. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+