ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬದಲಾವಣೆ ಕುರಿತು ಪರಮೇಶ್ವರ್‌ ಹೇಳಿದ್ದೇನು?

ಬೆಂಗಳೂರು, ಜುಲೈ 02: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬದಲಾವಣೆ ಕುರಿತು ನಾನು ಸಿಎಂ ಅವರನ್ನು ಪ್ರತಿದಿನ ಭೇಟಿ ಮಾಡುತ್ತೇನೆ. ಇಲಾಖೆಯ ಅನೇಕ ವಿಚಾರಗಳನ್ನು ಅವರ ಗಮನಕ್ಕೆ ತಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸರ್ಕಾರದಲ್ಲಿ ಅನೇಕ ತೀರ್ಮಾನಗಳನ್ನು ಮಾಡುವಂತಹ ಸಂದರ್ಭದಲ್ಲಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ ಎಂದು ಹೇಳಿದರು‌.

ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರಿಗೆ ಡಿ.ಕೆ.ಶಿವಕುಮಾರ್ ನೋಟಿಸ್ ಜಾರಿ ಮಾಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿತಿಯಿಸಿ, ನೋಟಿಸ್ ನೀಡುವುದು ಅಧ್ಯಕ್ಷರು ಮಾಡುವ ಕೆಲಸ. ಕಾರ್ಯಕರ್ತರು, ಶಾಸಕರು, ಸಚಿವರು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂಬುದಾಗಿ ಹೇಳಿದ್ದಾರೆ ಎಂಬರ್ಥದಲ್ಲಿ ಅರ್ಥೈಸಿಕೊಂಡಿದ್ದೇನೆ. ಪಕ್ಷದ ಮತ್ತು ಅಧ್ಯಕ್ಷರ ದೃಷ್ಟಿಯಲ್ಲಿ ಸರಿ ಇಲ್ಲ ಎಂಬುದು ಕಂಡು ಬಂದರೆ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Parameshwara reaction on the change of Bangalore City Police Commissioner

ಹೈಕಮಾಂಡ್ ಮತ್ತು ಪಕ್ಷದ ಅಧ್ಯಕ್ಷರು ಏನು ಮಾಡುತ್ತಾರೆ ಕೇಳಬೇಕಾಗುತ್ತದೆ. ಯಾವ ಶಿಸ್ತು ಉಲ್ಲಂಘನೆಯಾಗಿದೆ ಎಂಬುದನ್ನು ಸ್ಪಷ್ಟವಾಗಿ ಆ ವ್ಯಕ್ತಿಯನ್ನು ಕರೆದು ಶಿಸ್ತು ಸಮಿತಿ ಹೇಳಬೆಕಾಗುತ್ತದೆ. ಆ ನಂತರದ ಬೆಳವಣಿಗೆ ಪಕ್ಷದ ಅಧ್ಯಕ್ಷರಿಗೆ ಬಿಟ್ಟಿದ್ದು ಎಂದು ಹೇಳಿದರು.

ರಾಜ್ಯಮಟ್ಟದಲ್ಲಿ ಸತ್ಯಶೋಧನೆ ಸಮಿತಿಯನ್ನು ಮಾಡಿಕೊಳ್ಳಬಹುದು. ಕೆಪಿಸಿಸಿ ಅಧ್ಯಕ್ಷರಾದವರು ಮಾಡುವ ಜವಾಬ್ಧಾರಿ ಇದು. ಎಐಸಿಸಿಯವರು ದೇಶ ಮಟ್ಟದಲ್ಲಿ ಸತ್ಯಶೋಧನ ಸಮಿತಿ ಮಾಡಿದ್ದಾರೆ. ನಾನು ಸಹ ಈ ಹಿಂದೆ ಸತ್ಯಶೋಧನಾ ಸಮಿತಿಯನ್ನು ನೇಮಕ ಮಾಡಿದ್ದೆ. ಏಐಸಿಸಿ ಸತ್ಯಶೋಧನಾ ಸಮಿತಿ ಜುಲೈ 10 ಅಥವಾ 12ರಂದು ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ತಿಳಿಸಿದರು.

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾಂತಿ, ನೆಮ್ಮದಿಯಿಂದ ಸಮಾಜದ ಎಲ್ಲ ವರ್ಗವನ್ನು ಮುನ್ನಡೆಸಿಕೊಂಡು ಹೋಗಬೇಕಾದ ಸಾರಾಂಶ.ವನ್ನು ಹೊಂದಿದೆ. ಇದಕ್ಕೆ ವಿರುದ್ಧವಾಗಿ ಇರುವವರು ಹಿಂದುಗಳಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಆ ರೀತಿ ಯಾರು ಇರುತ್ತಾರೋ ಅವರಿಗೆ ಅನ್ವಯಿಸುತ್ತದೆ ಎಂಬರ್ಥದಲ್ಲಿ ಹೇಳಿದ್ದಾರೆ‌. ಬಿಜೆಪಿಯವರು ರಾಹುಲ್ ಗಾಂಧಿಯವರ ಭಾಷಣ ಅರ್ಥ ಮಾಡಿಕೊಂಡಿಲ್ಲ‌ ಎಂಬುದು ಸ್ಪಷ್ಟವಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+