ರೇಣುಕಾಸ್ವಾಮಿ ಕೊಲೆ ಮಾದರಿಯಲ್ಲಿ ಇನ್ನೊಂದು ಕೊಲೆಗೆ ಸಂಚು: ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು, ಜುಲೈ 07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ಬಾಲಕಿಯನ್ನು ಬಂಧಿಸಿ ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಇದೀಗ, ಈ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

ಈ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರು ಮಾತನಾಡಿ, ಸೋಲುದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿನ ಕೊಲೆಯತ್ನ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆರೋಪಿತರು ಅರೆಸ್ಟ್ ಆಗಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಕೊಟ್ಟಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಿಂದ ಪ್ರೇರೆಪಿತರಾಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಆ ರೀತಿಯಾಗಿ ಸಮಾಜದಲ್ಲಿ ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬುದರ ಕುರಿತು ಮನಶಾಸ್ತ್ರಜ್ಞರು ಅಧ್ಯಯನ ನಡೆಸಬೇಕು ಎಂದು ಹೇಳಿದರು.

Parameshwara Reaction To The Fatal Attack On A Young Man Near Soladevanahalli

ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು. ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು ಭೇಟಿಗೆ ಕರೆದಿದ್ದರು. ಅವರು ಕರೆದಾಗ ನಾನು ಊರಲ್ಲಿ ಇದ್ದ ಕಾರಣ ಭೇಟಿ ಆಗಲು ಸಾಧ್ಯವಾಗಿರಲಿಲ್ಲ. ಮತ್ತೆ ಕರೆದರೆ ಭೇಟಿಯಾಗುತ್ತೇನೆ ಎಂದರು. ರಂಭಾಪುರಿ ಶ್ರೀಗಳ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+