ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ!
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಸ್ಥಾನಕ್ಕೆ ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಿಶೋರ್ ಪುತ್ತೂರ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಇದೇ ಅಕ್ಟೋಬರ್ 21ರಮದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪಚುನಾವಣೆ ನಡೆಯಲಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದು ಕೋಟಾ ಶ್ರೀನಿವಾಸ್ ಪೂಜಾರಿ ಅವರು ಸಂಸತ್ ಪ್ರವೇಶ ಮಾಡಿದ್ದರು ಹೀಗಾಗಿ ಈ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್‌ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಆ ಪೈಕಿ ಕಾಂಗ್ರೆಸ್ ಹೈಕಮಾಂಡ್ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ.












Click it and Unblock the Notifications