ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಭಾಪತಿ ವಿರುದ್ಧ ಅವಿಶ್ವಾಸ: ಮಂಗಳವಾರ ಮತ್ತೆ ಪರಿಷತ್ ಕಲಾಪ?

|
Google Oneindia Kannada News

ಬೆಂಗಳೂರು, ಡಿ. 11: ವಿಧಾನ ಪರಿಷತ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ದಿಢೀರ್ ಮುಂದೂಡಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಗರಂ ಆಗಿದೆ. ಇದೇ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಕಲಾಪದ ಕುರಿತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಕೆ. ದ್ವಾರಕಾನಾಥ್ ಬಾಬು ಅವರು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ಮಂಡಿಸಿದ್ದರು. ಜೊತೆಗೆ ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ಗೋ ಹತ್ಯೆ ನಿಷೇಧ ವಿಧೇಯಕ ಕೂಡ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗಿ ಅಂಗೀಕಾರವಾಗಬೇಕಾಗಿತ್ತು. ಇದೇ ಸಂದರ್ಭದಲ್ಲಿ ಸಭಾಪತಿಗಳು ಏಕಾಏಕಿ ಸದನವನ್ನು ಅನಿರ್ದಿಆಷ್ಟಾವಧಿಗೆ ಮುಂದೂಡಿದ್ದರು.

Parliamentary Affairs Secretary Direction to Council secretary to convene Council session

ಇದೀಗ ವಿಧಾನ ಪರಿಷತ್ ಕಲಾಪವನ್ನು ಮುಂದುವರಿಸುವಂತೆ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ದ್ವಾರಕಾನಾಥ್ ಬಾಬು ಅವರು ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ಪತ್ರ ಬರೆದು ಕಲಾಪ ನಡೆಸಲು ಸೂಚನೆ ನೀಡಿದ್ದಾರೆ.

Parliamentary Affairs Secretary Direction to Council secretary to convene Council session

ಬರುವ ಡಿಸೆಂಬರ್ 15ರಂದು ಮಂಗಳವಾರ ಪರಿಷತ್ ಸಭೆ ಕರೆಯುವಂತೆ ಪತ್ರದಲ್ಲಿ ನಿರ್ದೇಶನ ನೀಡಿದ್ದಾರೆ. ಡಿಸೆಂಬರ್ 15ರಂದು ಬೆಳಗ್ಗೆ 11ಕ್ಕೆ ವಿಧಾನ ಪರಿಷತ್ ಕಲಾಪ ಕರೆಯಬೇಕು. ನಿಯಾಮವಳಿಯಂತೆ ಅವಿಶ್ವಾಸ ನಿರ್ಣಯ ಕುರಿತು ಚರ್ಚಿಸಲು ಅನುವು ಮಾಡಿಕೊಡಬೇಕೆಂದು ಪತ್ರದಲ್ಲಿ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ವಿಧಾನ ಪರಿಷತ್ ಸಚಿವಾಲಯ ಯಾವ ನಿರ್ಧಾರಕ್ಕೆ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

English summary
Parliamentary Affairs Department Secretary Direction to Legislative Council Secretary to convene Legislative Council on Tuesday, December 15. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X