ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

7 ವರ್ಷಕ್ಕಿಂತ ಕಡಿಮೆ ಶಿಕ್ಷೆಯ ಕೈದಿಗಳಿಗೆ ಪೆರೋಲ್ ಭಾಗ್ಯ

|
Google Oneindia Kannada News

ಬೆಂಗಳೂರು, ಮಾರ್ಚ್ 28: ರಾಜ್ಯದ ಕಾರಾಗೃಹಗಳಲ್ಲಿ 7ವರ್ಷಕ್ಕಿಂತ ಕಡಿಮೆ ಶಿಕ್ಷೆಗೆ ಗುರಿಯಾಗಿರುವ ಕೈದಿಗಳನ್ನು ಪೆರೋಲ್ ಮೂಲಕ ಬಿಡುಗಡೆ ಮಾಡಲಾಗುತ್ತಿದೆ.

Recommended Video

Can prisoners vote during elections ? | Prisoner | Vote | Oneindia kannada

ಗರಿಷ್ಠ 7 ವರ್ಷ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳ ಸಂಬಂಧ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಶೀಲಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ತೀರ್ಮಾನಿಸಿದೆ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಿಸಲು ಜೈಲು ಕೈದಿಗಳು ನೆರವು ಕರ್ನಾಟಕದಲ್ಲಿ ಕೊರೊನಾ ನಿಯಂತ್ರಿಸಲು ಜೈಲು ಕೈದಿಗಳು ನೆರವು

ಸಭೆಯಲ್ಲಿ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಿದ ಅವರು ಸುಪ್ರೀಂಕೋರ್ಟ್ ನಿರ್ದೇಶನದಂತೆ ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಬಹುದಾದ ಅಪರಾಧಗಳಲ್ಲಿ ಶಿಕ್ಷೆಗೊಳಪಟ್ಟ ಕೈದಿಗಳಿಗೆ ಅವರು ಒಪ್ಪಿದರೆ ತಾತ್ಕಾಲಿಕ ಪೆರೋಲ್ ನೀಡಬೇಕು.

Parole For Prisoners Sentenced To Less Than 7 Years

ಗರಿಷ್ಠ ಏಳು ವರ್ಷ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ವಿಛಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನು ನೀಡಲು ಪರಿಶೀಲಿಸುವ ಬಗ್ಗೆ ಉನ್ನತಾಧಿಕಾರಿಗಳ ಸಮಿತಿ ತೀರ್ಮಾನಿಸಲಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿ ಕೈದಿಗಳ ಆರೋಗ್ಯ ಸೂಧಾರಣೆ ಹಾಗೂ ಕೈದಿಗಳಿಗೆ ಸೋಂಕು ಹರಡುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಸಭೆ ನಡೆಸಲಾಗುತ್ತಿದೆ.

ಸಭೆಯಲ್ಲಿ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಮಾರ್, ರಾಜ್ಯ ಬಂಧಿಖಾನೆ ಇಲಾಖೆ ಡಿಜಿಪಿ ಅಲೋಕ್ ಮೋಹನ್ ಸೇರಿದಂತೆ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು.

English summary
Prisoners sentenced to less than 7 years in state prisons are being released on parole.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X