ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದುಷ್ಟ ಶಕ್ತಿಗಳ ವಿರುದ್ಧ ದುರ್ಗೆಯಂತೆ ಹೊರಹೊಮ್ಮಿದ ಮಮತಾ: ಎಚ್ಡಿಕೆ ಪ್ರತಿಕ್ರಿಯೆ

|
Google Oneindia Kannada News

ಬೀದರ್, ಮೇ 2: ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ವಿಜೇತರಾಗಿದ್ದಾರೆ. ಇವರು, ಕಾಂಗ್ರೆಸ್ಸಿನ ಪ್ರತಿಸ್ಪರ್ಧಿ ಮಲ್ಲಮ್ಮ ಬಿ ನಾರಾಯಣರಾವ್‌ರನ್ನು 20,448 ಮತಗಳ ಭಾರೀ ಅಂತರದಿಂದ ಸೋಲುಣಿಸಿದ್ದಾರೆ.

Recommended Video

ಸದ್ಯದಲ್ಲೇ ರಾಷ್ಟ್ರೀಯ ಪಕ್ಷಗಳ ವಿರುದ್ಧ JDS ಸೆಟೆದು ನಿಲ್ಲುತ್ತೆ ಅಂದ್ರು ಎಚ್ ಡಿ ಕುಮಾರಸ್ವಾಮಿ

ಕಣದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಸೈಯದ್ ಯಾಸ್ರಬ್ ಖಾದ್ರಿಗೆ ಕೇವಲ 11,390 ಮತಗಳು ಮಾತ್ರ ಲಭಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ, "ಬಸವಕಲ್ಯಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ"ಎಂದು ಟ್ವೀಟ್ ಮಾಡಿದ್ದಾರೆ.

'ಶರಣು'ಗೆ ಶರಣೆಂದ ಕಲ್ಯಾಣ ನಾಡಿನ ಮತದಾರ: ಕಾಂಗ್ರೆಸ್, ಜೆಡಿಎಸ್‌ಗೆ ಸೋಲು'ಶರಣು'ಗೆ ಶರಣೆಂದ ಕಲ್ಯಾಣ ನಾಡಿನ ಮತದಾರ: ಕಾಂಗ್ರೆಸ್, ಜೆಡಿಎಸ್‌ಗೆ ಸೋಲು

"ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Party Candidate Lost In Basavakalyan Former CM H D Kumaraswamy Reaction

"ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲು ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ" ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

"ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ. ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ"ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

 ಮಸ್ಕಿಯಲ್ಲಿ ನಡೆಯದ ಜಾದೂ: ಮಂಕಾಗುವುದೇ ವಿಜಯೇಂದ್ರ ಭವಿಷ್ಯ? ಮಸ್ಕಿಯಲ್ಲಿ ನಡೆಯದ ಜಾದೂ: ಮಂಕಾಗುವುದೇ ವಿಜಯೇಂದ್ರ ಭವಿಷ್ಯ?

"ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯ ಪಟ್ಟಿದ್ದಾರೆ.

English summary
Party Candidate Lost In Basavakalyan Former CM H D Kumaraswamy Reaction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X